ಪ್ರಮೋದ್ ಶೆಟ್ಟಿ ಫುಲ್ ಬ್ಯುಸಿ: ಶೀಘ್ರದಲ್ಲೇ ಅಬ್ಬರಿಸಲಿದ್ದಾನೆ 'ಜಲಂಧರ'
ಸ್ಯಾಂಡಲ್‌ವುಡ್‌ನ ಶೆಟ್ಟರ ಗ್ಯಾಂಗ್‌ನಲ್ಲಿ ಆಕ್ಟೀವ್ ಆಗಿರುವ ಪ್ರಮೋದ್ ಶೆಟ್ಟಿ ಬೇರೆ ಬೇರೆ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಈಗಾಗಲೇ ಇವರ ಕೈ ತುಂಬಾ ಸಿನಿಮಾಗಳಿದ್ದು, ಒಂದೊಂದೇ ಸಿನಿಮಾ ಬಿಡುಗಡೆಗೆ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ. ಇತ್ತೀಚೆಗೆಷ್ಟೇ '13' ಅನ್ನುವ ಸಿನಿಮಾ ಬಿಡುಗಡೆಯಾಗಿತ್ತು. ಈ ಸಿನಿಮಾ ರಾಘವೇಂದ್ರ ರಾಜ್‌ಕುಮಾರ್ ಹಾಗೂ ಶ್ರುತಿ ನಟಿಸಿದ್ದರು.
ಈಗ ಮತ್ತೊಂದು ಸಿನಿಮಾ ಪೋಸ್ಟ್ ಪ್ರೊಡಕ್ಷನ್‌ನಲ್ಲಿ ಬ್ಯುಸಿಯಾಗಿದೆ. ಅದುವೇ 'ಜಲಂಧರ'. ಪ್ರಮೋದ್ ಶೆಟ್ಟಿ ಹುಟ್ಟುಹಬ್ಬದ ಅಂಗವಾಗಿ ಈ ಸಿನಿಮಾದ ಪೋಸ್ಟರ್ ಅನ್ನು ರಿಲೀಸ್ ಮಾಡಲಾಗಿತ್ತು. ಆಗಲೇ ಈ ಸಿನಿಮಾ ಬಗ್ಗೆ ಕುತೂಹಲ ಗರಿಗೆದರಿತ್ತು. ಸೋಶಿಯಲ್ ಮೀಡಿಯಾಗಳಲ್ಲಿ ಸಿನಿಮಾದ ಪೋಸ್ಟರ್‌ಗೆ ಮೆಚ್ಚುಗೆ ಸಿಕ್ಕಿತ್ತು.

'ಜಲಂಧರ' ಪೋಸ್ಟರ್ ವೈರಲ್ ಆದ ಬೆನ್ನಲ್ಲೇ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಬ್ಯುಸಿಯಾಗಿದೆ. ಸದ್ಯಕ್ಕೀಗ ಈ ಸಿನಿಮಾದ ಡಬ್ಬಿಂಗ್ ಅನ್ನು ಯಶಸ್ವಿಯಾಗಿ ಮುಗಿಸಲಾಗಿದೆ. ಇನ್ನು 'ಜಲಂಧರ' ಸಿನಿಮಾವನ್ನು ಸ್ಟೇಪ್ ಅಪ್ ಲೋಕೇಶ್ ನಟಿಸಿ, ಕಥೆ ಬರೆದು ನಿರ್ಮಾಣ ಮಾಡಿದ್ದಾರೆ.
'ಜಲಂಧರ' ಸಿನಿಮಾಗೆ ಮದನ್ ಎಸ್, ಚಂದ್ರ ಮೋಹನ್ ಸಿ ಎಲ್, ರಮೇಶ್ ರಾಮಚಂದರ್ ಹಾಗೂ ಪದ್ಮನಾಭನ್ ಹಣ ಹೂಡಿಕೆ ಮಾಡಿದ್ದಾರೆ. ಹಲವು ಸಿನಿಮಾಗಳಲ್ಲಿ ಸಹ ನಿರ್ದೇಶಕರಾಗಿ ಕೆಲಸ ಮಾಡಿ ಮೊದಲ ಬಾರಿಗೆ ವಿಷ್ಣು ವಿ ಪ್ರಸನ್ನ ಆಕ್ಷನ್ ಕಟ್ ಹೇಳಿದ್ದಾರೆ.

ಈ ಸಿನಿಮಾಗೆ ವೆಂಕಿ UDV ಎಡಿಟಿಂಗ್ ಮಾಡಿದ್ದರೆ, ಕೇರಳ ಮೂಲದ ಛಾಯಾಗ್ರಹಕರಾದ ವಿದ್ಯಾಶಂಕರ್ ಮತ್ತು ಸರಿನ್ ರವೀಂದ್ರನ್ ಈ ಸಿನಿಮಾಗೆ ಕೆಲಸ ಮಾಡಿದ್ದಾರೆ.
ಯುವ ಸಂಗೀತ ನಿರ್ದೇಶಕ ಜತಿನ್ ದರ್ಶನ್ ಸಂಗೀತ ನೀಡಿರುವ 'ಜಲಂಧರ' ಸಿನಿಮಾದಲ್ಲಿ ಸಹ ನಿರ್ದೇಶಕನಾಗಿ ಅಕ್ಷಯ್ ಕುಮಾರ್ ಕೆಲಸ ಮಾಡಿದ್ದಾರೆ. ರಾಜು ವೈವಿಧ್ಯ ಕಲಾ ನಿರ್ದೇಶನ. ಕೌರವ ವೆಂಕಟೇಶ್ ಸಾಹಸ ನಿರ್ದೇಶನವಿದೆ.
'ಜಲಂಧರ' ಸಿನಿಮಾದ ಮುಖ್ಯ ಪಾತ್ರದಲ್ಲಿ ಪ್ರಮೋದ್ ಶೆಟ್ಟಿ, ಟಗರು ಖ್ಯಾತಿಯ ರುಷಿಕಾ ರಾಜ್, ರಾಘು ರಾಮನಕೊಪ್ಪ, ಅರೋಹಿತಾ ಗೌಡ, ಬಲ ರಾಜ್ವಡಿ, ಆದಿ ಕೇಶವರೆಡ್ಡಿ, ಭೀಷ್ಮ ರಾಮಯ್ಯ, ಪ್ರತಾಪ ನೆನಪು, ನವೀನ್ ಸಾಗರ್, ವಿಶಾಲ್ ಪಾಟೀಲ್, ಪ್ರಸಾದ್ ಸೂರನಹಳ್ಳಿ, ಅಂಬು, ವಿಜಯ್ ರಾಜ್ ಮತ್ತು ನಂದಿನಿ ರಾಜ್ ನಟಿಸಿದ್ದಾರೆ. 'ಜಲಂಧರ' ಸಿನಿಮಾವನ್ನು ಪ್ರತಿ ಹಂತದಲ್ಲೂ ವಿಭಿನ್ನವಾಗಿ ಪ್ರಚಾರ ಮಾಡುತ್ತಾ ಸ್ಯಾಂಡಲ್‌ವುಡ್‌ನಲ್ಲಿ ಹೊಸ ಭರವಸೆ ಹುಟ್ಟಿಸಿದೆ ಚಿತ್ರತಂಡ.


Click it and Unblock the Notifications











