»   » 41ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಪವರ್ ಸ್ಟಾರ್ ಪುನೀತ್

41ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಪವರ್ ಸ್ಟಾರ್ ಪುನೀತ್

Posted By:
Subscribe to Filmibeat Kannada

ಕನ್ನಡ ಚಿತ್ರರಂಗದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರಿಗೆ ಇಂದು (ಮಾರ್ಚ್ 17) ಹುಟ್ಟುಹಬ್ಬದ ಸಂಭ್ರಮ. ಎಲ್ಲರ ಮುದ್ದಿನ ಅಪ್ಪು ಅಲಿಯಾಸ್ ಪುನೀತ್ ಅವರು ತಮ್ಮ ಅಭಿಮಾನಿಗಳೊಂದಿಗೆ ಹುಟ್ಟುಹಬ್ಬವನ್ನು ಸಂಭ್ರಮದಿಂದ ಆಚರಿಸಿಕೊಂಡಿದ್ದಾರೆ.

ಭರ್ಜರಿ 41ನೇ ವಯಸ್ಸಿಗೆ ಕಾಲಿಡುತ್ತಿರುವ ಪವರ್ ಸ್ಟಾರ್ ಹುಟ್ಟುಹಬ್ಬವನ್ನು ಅಭಿಮಾನಿಗಳು ಪಟಾಕಿ ಸಿಡಿಸಿ, ಕೇಕ್ ಕತ್ತರಿಸುವ ಮೂಲಕ ಹಬ್ಬ ಆಚರಿಸಿದಂತೆ ಆಚರಿಸಿದ್ದಾರೆ. ಒಟ್ನಲ್ಲಿ ಸದಾಶಿವ ನಗರದಲ್ಲಿರುವ ಪುನೀತ್ ಅವರ ನಿವಾಸದಲ್ಲಿ ಹಬ್ಬದ ವಾತಾವರಣ ಏರ್ಪಟ್ಟಿತ್ತು.[ಪುನೀತ್ ಹುಟ್ಟುಹಬ್ಬದಂದು ಅಭಿಮಾನಿಗಳಿಗೆ ಕಾದಿದೆ ಬಿಗ್ ಸರ್ ಪ್ರೈಸ್]

ಸ್ಯಾಂಡಲ್ ವುಡ್ ಕ್ಷೇತ್ರದಲ್ಲಿ ಭರ್ಜರಿ 23 ಸಿನಿಮಾಗಳನ್ನು ಮಾಡಿ ಗೆದ್ದಿರುವ ಅಪ್ಪು ಅವರು 24ನೇ ಸಿನಿಮಾ 'ಚಕ್ರವ್ಯೂಹ' ಬಿಡುಗಡೆಗೆ ಎಲ್ಲಾ ತಯಾರಿ ನಡೆಸುತ್ತಿದ್ದಾರೆ.[ಸಂಭ್ರಮದಿಂದ ಮುದ್ದು ಮಡದಿಯ ಬರ್ತಡೇ ಆಚರಿಸಿದ ಅಪ್ಪು]

ಅಂದಹಾಗೆ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಹುಟ್ಟುಹಬ್ಬ ಸಾಮಾಜಿಕ ಜಾಲತಾಣಗಳಲ್ಲಿ ಟ್ರೆಂಡ್ ಆಗಿದ್ದು, ಗೂಗಲ್ ಮತ್ತು ಟ್ವಿಟ್ಟರ್ ನಲ್ಲಿ ಹೊಸ ಟ್ರೆಂಡ್ ಹುಟ್ಟುಹಾಕಿದೆ. ಹೆಚ್ಚಿನ ಮಾಹಿತಿಗಳನ್ನು ಓದಲು ಕೆಳಗಿನ ಸ್ಲೈಡ್ಸ್ ಕ್ಲಿಕ್ ಮಾಡಿ...

ಮಧ್ಯರಾತ್ರಿಯಿಂದ ಸಂಭ್ರಮ

ಮಧ್ಯರಾತ್ರಿ 12 ಘಂಟೆಯಿಂದಲೇ ಪವರ್ ಸ್ಟಾರ್ ಪುನೀತ್ ಅವರ ಅಭಿಮಾನಿಗಳು ಸದಾಶಿವ ನಗರದಲ್ಲಿರುವ ಅವರ ನಿವಾಸದ ಮುಂದೆ ಪಟಾಕಿ ಸಿಡಿಸಿ ಹಬ್ಬದ ವಾತಾವರಣ ಸೃಷ್ಟಿ ಮಾಡಿದ್ದರು. ಮಾತ್ರವಲ್ಲದೇ ನಿನ್ನೆ ರಾತ್ರಿಯಿಂದಲೇ ಅಭಿಮಾನಿಗಳು ಬಂದು ಶುಭಾಶಯ ಕೋರಿ ಹೋಗುತ್ತಿದ್ದಾರೆ.[ಪುನೀತ್ ಡ್ಯುಯೆಟ್ ಗೆ ಕಾಜಲ್ ಅಗರ್ ವಾಲ್ ಚಮಕ್]

ಬೆಳಿಗ್ಗೆಯಿಂದ #HappyBirthdayPuneeth ಟ್ರೆಂಡಿಂಗ್

ಅಭಿಮಾನಿಗಳು ಬರೀ ಪುನೀತ್ ಅವರ ಮನೆಯಲ್ಲಿ ಮಾತ್ರವಲ್ಲದೆ, ಸಾಮಾಜಿಕ ಜಾಲತಾಣಗಳಾದ ಟ್ವಿಟ್ಟರ್, ಗೂಗಲ್ ಮತ್ತು ಫೇಸ್ ಬುಕ್ಕಿನಲ್ಲಿ #HappyBirthdayPuneeth ಅಂತ ಟ್ರೆಂಡ್ ಹುಟ್ಟುಹಾಕಿದ್ದಾರೆ.[ಚಿತ್ರಗಳು ; ಕಿಚ್ಚ ಸುದೀಪ್ - ಪುನೀತ್ ಒಂದಾಗೇಬಿಟ್ಟರು ನೋಡಿ.!]

ಘೋಷಣೆ ಕೂಗಿದ ಅಭಿಮಾನಿಗಳು

ಇಂದು ಬೆಳಿಗ್ಗೆಯಿಂದಲೇ ಅಭಿಮಾನಿಗಳು ಹುಟ್ಟುಹಬ್ಬದ ಸಂಭ್ರಮವನ್ನು ಆಚರಿಸಲು ಶುರು ಮಾಡಿದ್ದು, ಅಪ್ಪು ಅವರ ನಿವಾಸದ ಮುಂದೆ ಬೃಹತ್ ಕೇಕ್ ಕತ್ತರಿಸಿ ತಮ್ಮ ಪ್ರೀತಿಯ ನಟನಿಗೆ ಘೋಷಣೆ ಕೂಗುವ ಮೂಲಕ ಹುಟ್ಟುಹಬ್ಬದ ಶುಭಾಶಯವನ್ನು ಕೋರಿದರು.

ಶಿವಣ್ಣ ಜೊತೆ ಸಿನಿಮಾ ಮಾಡಬೇಕು

ಹ್ಯಾಟ್ರಿಕ್ ಹೀರೋ ಶಿವಣ್ಣ ಅವರ ಜೊತೆ ಅವಕಾಶ ಸಿಕ್ಕರೆ ಖಂಡಿತ ಸಿನಿಮಾ ಮಾಡುವುದಾಗಿ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರು ಹುಟ್ಟುಹಬ್ಬದ ದಿನ ತಮ್ಮ ಮನದ ಇಂಗಿತವನ್ನು ವ್ಯಕ್ತಪಡಿಸಿದ್ದಾರೆ.

ಮೊದಲು ಮನೆಯವರು ನಂತರ ಅಭಿಮಾನಿಗಳು

ಸೀದಾ ಸಾದಾ ಹೈದ ಪವರ್ ಸ್ಟಾರ್ ಪುನೀತ್ ಅವರು ಮೊದಲು ತಮ್ಮ ಮನೆಯವರಿಗೆ ಆದ್ಯತೆ ಕೊಡುತ್ತಾರಂತೆ, ಮೊದಲು ಮನೆಯಲ್ಲಿ ಮುದ್ದು ಮಡದಿ, ಮಕ್ಕಳು ಸಹೋದರರಾದ ಶಿವಣ್ಣ, ರಾಘಣ್ಣ ಹಾಗೂ ತಾಯಿ ಪಾರ್ವತಮ್ಮ ಅವರ ಜೊತೆ ಹುಟ್ಟುಹಬ್ಬ ಆಚರಿಸಿ, ತದನಂತರ ತಮ್ಮ ಅಭಿಮಾನಿಗಳ ಜೊತೆ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ.

ಅಭಿಮಾನಿಗಳಿಗೆ ಗಿಫ್ಟ್

ಪುನೀತ್ ಅವರು ತಮ್ಮ ಹುಟ್ಟುಹಬ್ಬದ ಪ್ರಯುಕ್ತ ತಮ್ಮ ಅಭಿಮಾನಿಗಳಿಗೆ ಉಡುಗೊರೆ ಅಂತ ಬಹುನಿರೀಕ್ಷಿತ 'ಚಕ್ರವ್ಯೂಹ' ಚಿತ್ರದ ಟ್ರೈಲರ್ ಮತ್ತು ಹಾಡುಗಳನ್ನು ಬಿಡುಗಡೆ ಮಾಡಲಿದ್ದಾರೆ. ಈಗಾಗಲೇ ಪುನೀತ್ ಅವರ ಮತ್ತೊಂದು ಚಿತ್ರ 'ರಾಜಕುಮಾರ'ದ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆ ಆಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ತುಂಬಾ ರೆಸ್ಪಾನ್ಸ್ ಗಿಟ್ಟಿಸಿಕೊಳ್ಳುತ್ತಿದೆ.

ವಿಶ್ ಯೂ ಹ್ಯಾಪಿ ಬರ್ತ್ ಡೇ

41ನೇ ವಸಂತಕ್ಕೆ ಕಾಲಿಟ್ಟಿರುವ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರು ಇನ್ನೂ ಎತ್ತರಕ್ಕೆ ಏರಲಿ, ಸಿನಿಮಾ ಕ್ಷೇತ್ರದಲ್ಲಿ ಸೂಪರ್ ಹಿಟ್ ಸಿನಿಮಾಗಳನ್ನು ನೀಡಿ ಯಶಸ್ಸು ಗಳಿಸಲಿ, ಎಂದು ಹಾರೈಸುತ್ತಾ, ಎಲ್ಲರ ಮೆಚ್ಚಿನ ಅಪ್ಪು ಅಲಿಯಾಸ್ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರಿಗೆ ನಮ್ಮ ಕಡೆಯಿಂದಲೂ ವಿಶ್ ಯೂ ಹ್ಯಾಪಿ ಬರ್ತ್ ಡೇ.

ಹೆಚ್ಚಿನ ಮಾಹಿತಿಗೆ ಈ ವಿಡಿಯೋ ನೋಡಿ

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಹುಟ್ಟುಹಬ್ಬದ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ..

    English summary
    Kannada Actor Puneeth Rajkumar Celebrates his 41st Birthday Today March 17th. With his Family and Fans in Bengaluru.

    ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ - Filmibeat Kannada