Just In
Don't Miss!
- News
Biden Inauguration live updates: ಅಮೆರಿಕ ಅಧ್ಯಕ್ಷರಾಗಿ ಜೋ ಬೈಡನ್ ಪದಗ್ರಹಣದ ನೇರಪ್ರಸಾರ
- Finance
ಸಿಯೆಟ್ ಲಿಮಿಟೆಡ್ ಲಾಭದ ಪ್ರಮಾಣ ಎರಡೂವರೆ ಪಟ್ಟು ಹೆಚ್ಚಳ
- Sports
ಐಎಸ್ಎಲ್: ಹೈದರಾಬಾದ್ ಜಯಕ್ಕೆ ಅಡ್ಡಿಯಾದ ಕಳಿಂಗ ವಾರಿಯರ್ಸ್
- Education
AAI Recruitment 2021: 7 ಸಲಹೆಗಾರ ಹುದ್ದೆಗಳಿಗೆ ಅರ್ಜಿ ಆಹ್ವಾನ
- Automobiles
ವಾಣಿಜ್ಯ ವಾಹನಗಳ ಖರೀದಿಗಾಗಿ ಹಲವು ಆಕರ್ಷಕ ಸಾಲಸೌಲಭ್ಯಗಳಿಗೆ ಚಾಲನೆ ನೀಡಿದ ಟಾಟಾ
- Lifestyle
ಜ. 25ಕ್ಕೆ ಕುಂಭ ರಾಶಿಗೆ ಬುಧನ ಸಂಚಾರ: 12 ರಾಶಿಗಳ ಮೇಲೆ ಇದರ ಪ್ರಭಾವವೇನು?
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ರಶ್ಮಿಕಾ ಮಂದಣ್ಣ ವಿರುದ್ಧ ರಕ್ಷಿತ್ ಶೆಟ್ಟಿ ಫ್ಯಾನ್ಸ್ ಆಕ್ರೋಶ
ನಟಿ ರಶ್ಮಿಕಾ ಮಂದಣ್ಣ ಸದ್ಯ ಟಾಲಿವುಡ್ ನಲ್ಲಿ ಸಖತ್ ಬ್ಯುಸಿಯಾಗಿದ್ದಾರೆ. ಬ್ಯಾಕ್ ಟು ಬ್ಯಾಕ್ ಸಿನಿಮಾಗಳನ್ನು ಒಪ್ಪಿಕೊಳ್ಳುತ್ತಾ, ಟಾಲಿವುಡ್ ಸ್ಟಾರ್ ನಟರ ಜೊತೆ ಅಭಿನಯಿಸುತ್ತಿದ್ದಾರೆ. ರಶ್ಮಿಕಾ ಕೈಯಲ್ಲಿ ಸದ್ಯ ಕನ್ನಡದ ಒಂದು ಸಿನಿಮಾವಿದೆ.
ಸಂಪೂರ್ಣವಾಗಿ ಟಾಲಿವುಡ್ ಚಿತ್ರರಂಗದಲ್ಲಿ ತೊಡಗಿಕೊಂಡಿರುವ ರಶ್ಮಿಕಾ, ಮೇಲೆ ರಕ್ಷಿತ್ ಶೆಟ್ಟಿ ಫ್ಯಾನ್ಸ್ ಗರಂ ಆಗಿದ್ದಾರೆ. ರಶ್ಮಿಕಾ ಮತ್ತು ರಕ್ಷಿತ್ ಶೆಟ್ಟಿ ನಡುವೆ ಬ್ರೇಕ್ ಅಪ್ ಆದ ನಂತರ ರಶ್ಮಿಕಾ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ಟ್ರೋಲ್ ಆಗುತ್ತಿದ್ದಾರೆ. ಆದ್ರೆ ಸ್ವಲ್ಪ ದಿನಗಳು ಸೈಲೆಂಟ್ ಆಗಿದ್ದ ನೆಟ್ಟಿಗರೀಗ ಮತ್ತೆ ರಶ್ಮಿಕಾ ವಿರುದ್ಧ ರೊಚ್ಚಿಗೆದ್ದಿದ್ದಾರೆ.
ಹುಟ್ಟುಹಬ್ಬದ ದಿನ ಬಿಂದಾಸ್ ಹುಲಿ ಡ್ಯಾನ್ಸ್ ಮಾಡಿದ ರಕ್ಷಿತ್ ಶೆಟ್ಟಿ
ಇದಕ್ಕೆ ಕಾರಣವಾಗಿದ್ದು ರಕ್ಷಿತ್ ಶೆಟ್ಟಿ ಹುಟ್ಟುಹಬ್ಬ ಮತ್ತು 'ಅವನೇ ಶ್ರೀಮನ್ನಾರಾಯಣ' ಚಿತ್ರದ ಟೀಸರ್. ತೆಲುಗು ಚಿತ್ರದ ಟೀಸರ್ ಮತ್ತು ಪೋಸ್ಟರ್ ಗಳನ್ನು ಹಂಚಿಕೊಳ್ಳುತ್ತೀರುವ ರಶ್ಮಿಕಾಗೆ 'ಅವನೇ ಶ್ರೀಮನ್ನಾರಾಯಣ' ಚಿತ್ರದ ಟೀಸರ್ ಯಾಕೆ ಕಾಣಿಸುತ್ತಿಲ್ಲಾ? ಎಂದು ನಟ್ಟಿಗರು ಪ್ರಶ್ನಿಸುತ್ತಿದ್ದಾರೆ.ಮುಂದೆ ಓದಿ..

ಟ್ವಿಟ್ಟರ್ ನಲ್ಲಿ ರಶ್ಮಿಕಾ ಕಾಲೆಳೆದ ನಟ್ಟಿಗರು
ರಶ್ಮಿಕಾ ಮಂದಣ್ಣ ಜಾಮಾಜಿಕ ಜಾಲತಾಣದಲ್ಲಿ ಸಖತ್ ಆಕ್ಟಿವ್ ಆಗಿದ್ದಾರೆ. ಸಿನಿಮಾ ವಿಚಾರಗಳನ್ನು ಹಂಚಿಕೊಳ್ಳುತ್ತಿರುತ್ತಾರೆ. ತೆಲುಗು ಟೀಸರ್ ಅನ್ನು ಶೇರ್ ಮಾಡಿ ಚಿತ್ರತಂಡಕ್ಕೆ ಶುಭ ಹಾರೈಸುತ್ತಾರೆ. ಆದ್ರೆ ಇತ್ತೀಚಿಗೆ ರಿಲೀಸ್ ಆದ 'ಅವನೇ ಶ್ರೀಮನ್ನಾರಾಯಣ' ಚಿತ್ರದ ಟೀಸರ್ ಬಗ್ಗೆ ಏನು ಪ್ರತಿಕ್ರಿಯೆ ನೀಡಿಲ್ಲ. ಹಾಗಾಗಿ ಸಾಮಾಜಿಕ ಜಾಲತಾಣದಲ್ಲಿ ರಶ್ಮಿಕಾ ವಿರುದ್ಧ ರಕ್ಷಿತ್ ಫ್ಯಾನ್ಸ್ ಗರಂ ಆಗಿದ್ದಾರೆ. 'ನೀವು ಕೈ ಕೊಟ್ರು ನಾವು ಬಿಡಲ್ಲ' ಎಂದು ಹೇಳುತ್ತಾ 'ಅವನೇ ಶ್ರೀಮನ್ನಾರಾಯಣ' ಚಿತ್ರದ ಪೋಸ್ಟರ್ಸ್ ಅನ್ನು ಕಮೆಂಟ್ ಬಾಕ್ಸ ನಲ್ಲಿ ಶೇರ್ ಮಾಡಿದ್ದಾರೆ.
ಟ್ವಿಟ್ಟರ್ ಗೆ ಬಂದ ರಕ್ಷಿತ್ ಶೆಟ್ಟಿಗೆ ಸಲಹೆ ನೀಡಿದ ಜಗ್ಗೇಶ್

ದಾರಿ ತೋರಿದವರನ್ನ ಮರೆತ್ತಿದ್ದಾರೆ ರಶ್ಮಿಕಾ
ರಶ್ಮಿಕಾ ಮಂದಣ್ಣ ಸಿನಿಮಾ ಲೋಕಕ್ಕೆ ಎಂಟ್ರಿ ಕೊಟ್ಟಿದ್ದೆ ರಕ್ಷಿತ್ ಮತ್ತು ಟೀಂ ಅವರಿಂದ. ಒಂದೊಂದೆ ಮೆಟ್ಟಿಗಳನ್ನು ಏರುತ್ತಾ ಉತ್ತುಂಗದತ್ತ ಸಾಗುತ್ತಿರುವ ರಶ್ಮಿಕಾ ಈಗ ಸೌತ್ ಸಿನಿ ಇಂಡಸ್ಟ್ರಿಯ ಬಹು ಬೇಡಿಕೆಯ ನಟಿಯಾಗಿದ್ದಾರೆ. ಕಳೆದ ವರ್ಷ ರಕ್ಷಿತ್ ಹುಟ್ಟುಹಬ್ಬಕ್ಕೆ ರಶ್ಮಿಕಾ ವಿಶ್ ಮಾಡಿದ್ರು. ಆದ್ರೆ ಈ ಬಾರಿ ಮಾಡಿಲ್ಲ. ಹಾಗಾಗಿ ತನ್ನನ್ನು ಬೆಳೆಸಿದವರನ್ನೆ ರಶ್ಮಿಕಾ ಮರೆತಿದ್ದಾರೆ ಎಂದು ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಮಹೇಶ್ ಬಾಬು ಸಿನಿಮಾದಲ್ಲಿ ರಶ್ಮಿಕಾ
ರಶ್ಮಿಕಾ ಸದ್ಯ ಟಾಲಿವುಡ್ ನ ಪ್ರಿನ್ಸ್ ಮಹೇಶ್ ಬಾಬು ಚಿತ್ರದಲ್ಲಿ ರಶ್ಮಿಕಾ ಬ್ಯುಸಿಯಾಗಿದ್ದಾರೆ. ಇತ್ತೀಚಿಗಷ್ಟೆ ಹೊಸ ಸಿನಿಮಾದ ಮುಹೂರ್ತ ಮಾಡಿಕೊಂಡಿರುವ ರಶ್ಮಿಕಾ ಸಂತಸದ ಅಲೆಯಲ್ಲಿ ತೇಲುತ್ತಿದ್ದಾರೆ. ಇನ್ನು ವಿಜಯ್ ದೇವರಕೊಂಡ ಜೊತೆ ಅಭಿನಯಿಸಿರುವ ಬಹು ನಿರೀಕ್ಷೆಯ 'ಡಿಯರ್ ಕಾಮ್ರೇಡ್' ಚಿತ್ರದ ರಿಲೀಸ್ ಗೆ ಕಾಯುತ್ತಿದ್ದಾರೆ ರಶ್ಮಿಕಾ.
'ಶ್ರೀಮನ್ನಾರಾಯಣ'ನ ಬಗ್ಗೆ ತರುಣ್ ಸುಧೀರ್ ಮಾಡಿದ್ದು ವ್ಯಂಗ್ಯನಾ ಮೆಚ್ಚುಗೆನಾ?

ಎರಡು ವರ್ಷಗಳ ನಂತರ ಬರ್ತಿದ್ದಾರೆ ರಕ್ಷಿತ್
ರಕ್ಷಿತ್ ಶೆಟ್ಟಿ ಬರೋಬ್ಬರಿ ಎರಡು ವರ್ಷಗಳ ನಂತರ ಅಭಿಮಾನಿಗಳ ಮುಂದೆ ಬರ್ತಿದ್ದಾರೆ. ಕಿರಿಕ್ ಪಾರ್ಟಿ ಚಿತ್ರದ ನಂತರ ರಕ್ಷಿತ್ ಮತ್ತೆ ತೆರೆಮೇಲೆ ಬಂದಿಲ್ಲ. ಆದ್ರೀಗ ಸಾಲು ಸಾಲು ಸಿನಿಮಾಗಳಲ್ಲಿ ರಕ್ಷಿತ್ ಬ್ಯುಸಿಯಾಗಿದ್ದಾರೆ. ಸದ್ಯ 'ಅವನೇ ಶ್ರೀಮನ್ನಾರಾಯಣ' ಚಿತ್ರದ ರಿಲೀಸ್ ಗೆ ಕಾಯುತ್ತಿದ್ದಾರೆ. ಇನ್ನು '777 ಚಾರ್ಲಿ' ಚಿತ್ರದ ಚಿತ್ರೀಕರಣ ನಡೆಯುತ್ತಿದ್ದು 'ಪುಣ್ಯಕೋಟಿ' ಚಿತ್ರದ ಪ್ರಿ ಪ್ರೊಡಕ್ಷನ್ ಕೆಲಸದಲ್ಲಿ ನಿರತರಾಗಿದ್ದಾರೆ.