ಸುದೀಪ್ ಗೆ ಸಿನಿಮಾ ನಿರ್ದೇಶನ ಮಾಡುವ ಬಗ್ಗೆ ರಕ್ಷಿತ್ ಶೆಟ್ಟಿ ಹೇಳಿದ್ದೇನು? ಇಲ್ಲಿದೆ ಮಾಹಿತಿ
ಸ್ಯಾಂಡಲ್ ವುಡ್ ನ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಸದ್ಯ 777 ಚಾರ್ಲಿ ಸಿನಿಮಾದ ಕೊನೆಯ ಹಂತದ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ. ಅವನೇ ಶ್ರೀಮನ್ನಾರಾಯಣ ಸಿನಿಮಾ ಬಳಿಕ ರಕ್ಷಿತ್ ಮತ್ತೆ ಅಭಿಮಾನಿಗಳ ಮುಂದೆ ಬಂದಿಲ್ಲ.
ಇದೀಗ 777 ಚಾರ್ಲಿ ಮೂಲಕ ಚಿತ್ರಮಂದಿರಕ್ಕೆ ಎಂಟ್ರಿ ಕೊಡಲು ಸಜ್ಜಾಗುತ್ತಿದ್ದಾರೆ. ಈ ನಡುವೆ ರಕ್ಷಿತ್ ಸಾಮಾಜಿಕ ಜಾಲತಾಣದಲ್ಲಿ ಲೈವ್ ಬಂದಿದ್ದ, ಲೈವ್ ನಲ್ಲಿ ಒಂದಿಷ್ಟು ಇಂಟ್ರಸ್ಟಿಂಗ್ ವಿಚಾರಗಳನ್ನು ರಕ್ಷಿತ್ ಬಹಿರಂಗ ಪಡಿಸಿದ್ದಾರೆ.
ಮುಖ್ಯವಾಗಿ ರಕ್ಷಿತ್, ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಜೊತೆ ಸಿನಿಮಾ ಮಾಡುವ ಬಗ್ಗೆ ರಕ್ಷಿತ್ ಬಹಿರಂಗ ಪಡಿಸಿದ್ದಾರೆ. ಅಭಿಮಾನಿಯೊಬ್ಬರು ಕೇಳಿದ ಪ್ರಶ್ನೆಗೆ ಉತ್ತರಿಸಿದ ರಕ್ಷಿತ್, ಸುದೀಪ್ ಜೊತೆ ಸಿನಿಮಾ ಮಾಡಬೇಕು, ಈಗಾಗಲೇ ಅರ್ಧ ಸ್ಕ್ರಿಪ್ಟ್ ಮುಗಿದಿದೆ. ಇನ್ನು ಉಳಿದ ಭಾಗದ ಸ್ಕ್ರಿಪ್ಟ್ ಕೆಲಸ ಮಾಡಬೇಕಿದೆ ಎಂದು ಹೇಳಿದ್ದಾರೆ.

ರಕ್ಷಿತ್ ಸದ್ಯ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಸಪ್ತ ಸಾಗರದಾಚೆ, ಪುಣ್ಯಕೋಟಿ ಮತ್ತು ರಿಚ್ಚಿ ಸಿನಿಮಾ ಮುಗಿಸಿ ಸುದೀಪ್ ಜೊತೆಗಿನ ಸಿನಿಮಾ ಕೈಗೆತ್ತಿಕೊಳ್ಳುವುದಾಗಿ ಹೇಳಿದ್ದಾರೆ.
ಇನ್ನು ಬಹುನಿರೀಕ್ಷೆಯ 777 ಚಾರ್ಲಿ ಸಿನಿಮಾದ ರಿಲೀಸ್ ಬಗ್ಗೆ ಮಾತನಾಡಿರುವ ರಕ್ಷಿತ್, ಈಗಾಗಲೇ ಮೊದಲ ಭಾಗದ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಮುಕ್ತಾಯವಾಗಿದೆ. ಡಬ್ಬಿಂಗ್ ಸಹ ಮುಕ್ತಾಯವಾಗಿದೆ. ಲಾಕ್ ಡೌನ್ ಬಳಿಕ ಪ್ರಾರಂಭವಾದ ಚಿತ್ರೀಕರಣದ ಡಬ್ಬಿಂಗ್ ಭಾಗ ಬಾಕಿ ಇದೆ ಎಂದಿದ್ದಾರೆ.
ಕೊನೆಯ ಹಂತದ ಚಿತ್ರೀಕರಣ ಅಂದರೆ 6 ದಿನಗಳ ಚಿತ್ರೀಕರಣ ಬಾಕಿ ಇದೆ. ಕಾಶ್ಮೀರದಲ್ಲಿ ಚಿತ್ರೀಕರಣ ಮಾಡಬೇಕಿದೆ ಮತ್ತೆ ಕಾಶ್ಮೀರಕ್ಕೆ ತೆರಳಬೇಕು ಎಂದು ಹೇಳಿದ್ದಾರೆ. ಫೆಬ್ರವರಿ ಕೊನೆಯಲ್ಲಿ ಸಿನಿಮಾದ ಕೆಲಸ ಪೂರ್ಣಗೊಳ್ಳಲಿದೆ. ಜೂನ್, ಜುಲೈ ಅಥವಾ ಆಗಸ್ಟ್ ನಲ್ಲಿ ತೆರೆಗೆ ಬರುತ್ತೆ ಎಂದು ಹೇಳಿದ್ದಾರೆ.
777 ಚಾರ್ಲಿ ಸಿನಿಮಾ ಚಿತ್ರೀಕರಣ ಮುಗಿಸಿ ರಕ್ಷಿತ್, ಸಪ್ತ ಸಾಗರದಾಚೆ ಎಲ್ಲೋ ಸಿನಿಮಾದ ಚಿತ್ರೀಕರಣ ಪ್ರಾರಂಭ ಮಾಡುವ ಸಾಧ್ಯತೆ ಇದೆ.


Click it and Unblock the Notifications











