ಹೊಟ್ಟೆ ನೋವು ಹಿನ್ನೆಲೆ ಆಸ್ಪತ್ರೆಗೆ ದಾಖಲಾದ ನಟ ಶರಣ್
ಚಿತ್ರೀಕರಣ ವೇಳೆ ಹೊಟ್ಟೆ ನೋವು ಕಾಣಿಸಿಕೊಂಡ ಹಿನ್ನೆಲೆ ನಟ ಶರಣ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.
ಬೆಂಗಳೂರಿನ ಎಚ್‌ಎಂಟಿ ಮೈದಾನದಲ್ಲಿ ಅವತಾರ ಪುರುಷ ಸಿನಿಮಾ ಚಿತ್ರೀಕರಣ ವೇಳೆ ದಿಢೀರ್ ಎಂದು ಹೊಟ್ಟೆ ನೋವು ಬಂದಿದೆ. ತೀವ್ರವಾಗಿ ನೋವು ಹೆಚ್ಚಾದ ಕಾರಣ ಮಲ್ಲಿಗೆ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ವರದಿಯಾಗಿದೆ.

Recommended Video
SP Balasubramanyam : ಇದು SPB ಹಾಡಿದ ಕೊನೆಯ ಹಾಡು | Oneindia Filmibeat
ನಿರ್ದೇಶಕ ಸಿಂಪಲ್ ಸುನಿ ಮತ್ತು ನಿರ್ಮಾಪಕರು ಕೂಡಲೇ ಶರಣ್ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಅವತಾರ್ ಪುರುಷ ಸಿನಿಮಾವನ್ನು ಸುನಿ ನಿರ್ದೇಶಿಸುತ್ತಿದ್ದಾರೆ. ಆಶಿಕಾ ರಂಗನಾಥ್ ನಾಯಕಿಯಾಗಿದ್ದಾರೆ.
ಶರಣ್ ಆಸ್ಪತ್ರೆಗೆ ಸೇರಿದ ಹಿನ್ನೆಲೆ ಸಹೋದರಿ ಹಾಗೂ ನಟಿ ಶ್ರುತಿ ಮಲ್ಲಿಗೆ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ. ಬಳಿಕ, ಮಾಹಿತಿ ನೀಡಿದ್ದು, ''ಅಭಿಮಾನಿಗಳು ಆತಂಕ ಪಡುವ ಅಗತ್ಯವಿಲ್ಲ, ಹೊಟ್ಟೆ ನೋವಿನಿಂದ ಆಸ್ಪತ್ರೆ ಸೇರಿದ್ದಾರೆ. ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ'' ಎಂದು ಸ್ಪಷ್ಟನೆ ನೀಡಿದ್ದಾರೆ.
English summary
Kannada actor sharan hospitalized today. he suffering from stomach pain said source.


Click it and Unblock the Notifications