ಅಭಿಮಾನಿ ನಿಧನಕ್ಕೆ ಕಂಬನಿ ಮಿಡಿದ ಸುದೀಪ್: ಟ್ವಿಟ್ಟರ್ ಡಿಪಿ ಬದಲಾಯಿಸಿ ಸಂತಾಪ

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಪ್ಪಟ ಅಭಿಮಾನಿ ನಂದೀಶ್ ನಿನ್ನೆ ನಿಧನರಾಗಿದ್ದಾರೆ. ಎರಡು ದಿನಗಳ ಹಿಂದೆ ರಸ್ತೆ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ನಂದೀಶ್ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ನಂದೀಶ್ ಅನೇಕ ವರ್ಷಗಳಿಂದ ಕಿಚ್ಚ ಸುದೀಪ್ ಸೇನಾ ಸಮಿತಿಯ ರಾಜ್ಯ ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರು.

ಸುದೀಪ್ ಅಪ್ಪಟ ಅಭಿಮಾನಿ ಮಾತ್ರವಲ್ಲದೆ ಸಹೋದರನಂತೆ ಇದ್ದರು. ನಂದೀಶ್ ನಿಧನದ ಸುದ್ದಿ ಕೇಳಿ ಸುದೀಪ್ ಟ್ವಿಟ್ಟರ್ ನಲ್ಲಿ ನೋವು ಹಂಚಿಕೊಂಡಿದ್ದಾರೆ. ಅಲ್ಲದೆ ಕಿಚ್ಚ ಟ್ವಿಟ್ಟರ್ ಡಿಪಿ ಬದಲಾಯಿಸಿ ನಂದೀಶ್ ಫೋಟೋ ಡಿಪಿಗೆ ಹಾಕಿಕೊಳ್ಳುವ ಮೂಲಕ ಸಂತಾಪ ಸೂಚಿಸಿದ್ದಾರೆ.

ಇನ್ನು ನಂದೀಶ್ ಸಹೋದರನಂತೆ ಇದ್ದರು. ಆದರೆ ಇನ್ನಿಲ್ಲ ಎನ್ನುವ ಸತ್ಯ ಅರಗಿಸಿಕೊಳ್ಳಲು ಸಾಧ್ಯವಿಲ್ಲ ಎಂದು ನೋವು ಹಂಚಿಕೊಂಡಿದ್ದಾರೆ.

Kannada Actor Sudeep Big Fan Nadish Died In Road Accident

ಈ ಬಗ್ಗೆ ಟ್ವಿಟ್ಟರ್ ನಲ್ಲಿ ಬರೆದು ಕೊಂಡಿರುವ ಕಿಚ್ಚ "ನನ್ನ ಸಹೋದರ ಸ್ಥಾನದಲ್ಲಿದ್ದ ನಂದೀಶ್ ಅವರ ಸಾವಿನ ಸುದ್ದಿ ಸ್ವೀಕರಿಸಲು ಸಾಧ್ಯವಾಗುತ್ತಿಲ್ಲ. ಆನೇಕ ವರ್ಷಗಳಿಂದ ನಮ್ಮೊಂದಿಗೆ ಇದ್ದರು. ತುಂಬ ಮಿಸ್ ಮಾಡಿಕೊಳ್ಳುತ್ತೀವಿ. ಇದು ತುಂಬಲಾರದ ನಷ್ಟ. ನಿಮ್ಮ ಅಗಲಿಕೆಯ ನೋವನ್ನು ತಡೆದುಕೊಳ್ಳುವ ಶಕ್ತಿ ಕುಟುಂಬಕ್ಕೆ ನೀಡಲಿ" ಎಂದು ಬರೆದುಕೊಂಡಿದ್ದಾರೆ.

Kannada Actor Sudeep Big Fan Nadish Died In Road Accident

ಸುದೀಪ್ ಅಭಿಮಾನಿಗಳು ಸಹ ಗೆಳೆಯನ ಅಗಲಿಕೆಗೆ ಸಂತಾಪ ಸೂಚಿದ್ದಾರೆ. ಇನ್ನು ಇತ್ತೀಚಿಗಷ್ಟೆ ಸುದೀಪ್ ಮತ್ತೋರ್ವ ಅಭಿಮಾನಿ ಪುನೀತ್ ಆರ್ಯ ನಿಧನರಾಗಿದ್ದರು. ತುಮಕೂರು ಮೂಲಕ ಸುದೀಪ್ ಅಪ್ಪಟ ಅಭಿಮಾನಿಯಾಗಿದ್ದ ಆರ್ಯ ಕೂಡ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದರು. ಈಗ ಮತ್ತೋರ್ವ ಅಭಿಮಾನಿಯನ್ನು ಕಳೆದುಕೊಂಡು ದುಃಖದಲ್ಲಿ ಇದ್ದಾರೆ ಕಿಚ್ಚ.

More from Filmibeat

English summary
Kannada actor Sudeep big fan Nadish died in road accident. Sudeep condolences to his fan nandish death
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X