ಕುಟುಂಬದ ಜೊತೆಗೆ 'ದಬಾಂಗ್-3' ಸಿನಿಮಾ ವೀಕ್ಷಿಸಿದ ಕಿಚ್ಚ ಸುದೀಪ್

ಬಾಲಿವುಡ್ ಬ್ಯಾಡ್ ಬಾಯ್ ಸಲ್ಮಾನ್ ಖಾನ್ ಮತ್ತು ಸುದೀಪ್ ಅಭಿನಯದ ಬಹುನಿರೀಕ್ಷೆಯ ದಬಾಂಗ್-3ಸಿನಿಮಾ ದೇಶ ವಿದೇಶದಲ್ಲಿ ತೆರೆಗೆ ಬಂದಿದೆ. ಈಗಾಗಲೆ ಫಸ್ಟ್ ಡೇ ಫಸ್ಟ್ ಶೋ ನೋಡಿ ಅಭಿಮಾನಿಗಳು ಸಂತಸ ವ್ಯಕ್ತಪಡಿಸುತ್ತಿದ್ದಾರೆ. ಅದರಲ್ಲೂ ಕಿಚ್ಚನ ಅಭಿನಯಕ್ಕೆ ಮೆಚ್ಚುಗೆಯ ಮಹಾಪೂರ ಹರಿದು ಬರುತ್ತಿದೆ.

ಅಂದ್ಹಾಗೆ ಸುದೀಪ್ ಕೂಡ ದಬಾಂಗ್-3 ಸಿನಿಮಾ ವೀಕ್ಷಿಸಿದ್ದಾರೆ. ಚಿತ್ರ ರಿಲೀಸ್ ಗೂ ಮೊದಲೆ ಅಂದರೆ ನಿನ್ನೆ(ಡಿಸೆಂಬರ್ 19) ದಬಾಂಗ್-3 ಚಿತ್ರದ ವಿಶೇಷ ಪ್ರದರ್ಶನ ಏರ್ಪಡಿಸಲಾಗಿತ್ತು. ಆಗ ಸುದೀಪ್ ಮಾತ್ರವಲ್ಲದೆ ಇಡೀ ಕುಟುಂಬ ಸಿನಿಮಾ ನೋಡಿ ಸಂತಸ ಪಟ್ಟಿದ್ದಾರೆ. ಪ್ರಿಯಾ ಸುದೀಪ್ ಮತ್ತು ಮಗಳು ಸಾನ್ವಿ ಕೂಡ ಸುದೀಪ್ ಜೊತೆಯಲ್ಲಿ ಇದ್ದರು.

ನಿನ್ನೆ ಮುಂಬೈನಲ್ಲಿ ದಬಾಂಗ್-3 ಸಿನಿಮಾದ ವಿಶೇಷ ಪ್ರದರ್ಶನ ಏರ್ಪಡಿಸಲಾಗಿತ್ತು. ಬಾಲಿವುಡ್ ನ ಅನೇಕ ಸೆಲೆಬ್ರಿಟಿಗಳು ದಬಾಂಗ್-3 ಸಿನಿಮಾ ವೀಕ್ಷಿಸಿದ್ದಾರೆ. ಅಲ್ಲದೆ ಸುದೀಪ್ ಅಭಿನಯದ ಬಗ್ಗೆ ಟ್ವೀಟ್ ಮಾಡಿ ಮೆಚ್ಚುಗೆ ವ್ಯಕ್ತ ಪಡಿಸುತ್ತಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಬಾಲಿವುಡ್ ನಟ ರಿತೇಶ್ ದೇಶಮುಖ್, ವಿಲನ್ ಆಗಿ ಸುದೀಪ್ ಅವರ ಭಯಾನಕ ಅಭಿನಯವನ್ನು ಕೊಂಡಾಡಿದ್ದಾರೆ.

Kannada Actor Sudeep Watched Dabanng-3 With His Family In Mumbai

ದಬಾಂಗ್-3 ಕನ್ನಡದಲ್ಲೂ ತೆರೆಗೆ ಬಂದಿದೆ. ಇಂದು ಮೊದಲ ದಿನದ ಮೊದಲ ಶೋ ನೋಡಿ ಕನ್ನಡ ಅಭಿಮಾನಿಗಳು ಸಂಭ್ರಮಿಸುತ್ತಿದ್ದಾರೆ. ಎಲ್ಲಾ ಕಡೆಯಿಂದನೂ ಸುದೀಪ್ ಅಭಿನಯಕ್ಕೆ ಮೆಚ್ಚುಗೆಯ ಮಹಾಪೂರವೆ ಹರಿದು ಬರುತ್ತಿದೆ. ದಬಾಂಗ್-3 ದೊಡ್ಡ ಮಟ್ಟಕ್ಕೆ ಕನ್ನಡದಲ್ಲಿ ತೆರೆೆಗೆ ಬಂದಿದೆ.

More from Filmibeat

English summary
Kannada actor Sudeep Watched dabanng-3 with his family in Mumbai.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X