For Quick Alerts
  ALLOW NOTIFICATIONS  
  For Daily Alerts

  ಕರ್ನಾಟಕ ಚಲನಚಿತ್ರ ಅಕಾಡೆಮಿಗೆ ನೂತನ ಅಧ್ಯಕ್ಷ - ಸುನಿಲ್ ಪುರಾಣಿಕ್

  |

  ಕರ್ನಾಟಕ ಚಲನಚಿತ್ರ ಅಕಾಡೆಮಿಗೆ ನೂತನ ಅಧ್ಯಕ್ಷರನ್ನಾಗಿ ನಟ ಸುನಿಲ್ ಪುರಾಣಿಕ್ ರನ್ನ ನೇಮಕಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

  ಬುಧವಾರ, ಹೊಸ ವರ್ಷದಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಕರ್ನಾಟಕ ಸರ್ಕಾರದಿಂದ ಅಧಿಸೂಚನೆ ಪ್ರಕಟಗೊಂಡಿದ್ದು, ತಕ್ಷಣದಿಂದ ಜಾರಿಗೆ ಬರುವಂತೆ ನಟ ಸುನಿಲ್ ಪುರಾಣಿಕ್ ರನ್ನ ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷರ ಹುದ್ದೆಗೆ ನೇಮಿಸಿದೆ.

  ಮುಂದಿನ ಆದೇಶದವರೆಗೆ ಕರ್ನಾಟಕ ಚಲನಚಿತ್ರ ಅಕಾಡೆಮಿಗೆ ಅಧ್ಯಕ್ಷರಾಗಿ ಸುನಿಲ್ ಪುರಾಣಿಕ್ ಮುಂದುವರೆಯಲಿದ್ದಾರೆ ಎಂದು ಅಧಿಸೂಚನೆಯಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಕಾರ್ಯದರ್ಶಿ ಪಿ.ಮಣಿವಣ್ಣನ್ ಉಲ್ಲೇಖಿಸಿದ್ದಾರೆ.

  'ಪುನರ್ ವಿವಾಹ' ಸೇರಿದಂತೆ ಕಿರುತೆರೆಯಲ್ಲಿ ಹಲವು ಧಾರಾವಾಹಿಗಳಲ್ಲಿ ನಟಿಸಿ ಖ್ಯಾತಿ ಪಡೆದಿರುವವರು ನಟ ಸುನಿಲ್ ಪುರಾಣಿಕ್. ಕಿರುತೆರೆಯಿಂದ ಬೆಳ್ಳಿತೆರೆಗೆ ಬಂದಿರುವ ಸುನಿಲ್ ಪುರಾಣಿಕ್ 'ಲಿಫ್ಟ್ ಮ್ಯಾನ್' ಚಿತ್ರದಲ್ಲಿ ನಟಿಸಿದ್ದಾರೆ. ಹಾಗೇ, 'ಗುರುಕುಲ' ಎಂಬ ಚಿತ್ರವನ್ನ ನಿರ್ದೇಶನ ಮಾಡಿದ್ದಾರೆ.

  English summary
  Kannada Actor Sunil Puranik appointed as Karnataka Chalanachitra Academy chief.

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X