ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ಕೊಟ್ಟ ಯಶ್
ಡಿಸೆಂಬರ್ 21 ರಂದು ರಾಕಿಂಗ್ ಸ್ಟಾರ್ ಯಶ್ ಅಭಿನಯದ 'ಕೆ.ಜಿ.ಎಫ್' ಚಿತ್ರ ದೇಶದಾದ್ಯಂತ ಬಿಡುಗಡೆ ಆಗಲಿದೆ. ಬಹು ನಿರೀಕ್ಷಿತ ಚಿತ್ರ 'ಕೆ.ಜಿ.ಎಫ್' ರಿಲೀಸ್ ಗೆ ದಿನಗಣನೆ ಆರಂಭವಾಗಿರುವಾಗಲೇ, ಯಶ್ ಮತ್ತು ತಂಡ ಕೊಲ್ಲೂರು ಮೂಕಾಂಬಿಕಾ ದೇವಾಲಯಕ್ಕೆ ಭೇಟಿ ಕೊಟ್ಟಿದ್ದಾರೆ.
ಹೆಲಿಕಾಫ್ಟರ್ ಮೂಲಕ ಇಂದು ಕೊಲ್ಲೂರಿಗೆ ಆಗಮಿಸಿದ ನಟ ಯಶ್, ನಿರ್ಮಾಪಕ ವಿಜಯ್ ಕಿರಗಂದೂರು ಮತ್ತು ಸ್ನೇಹಿತರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.
'ಕೆ.ಜಿ.ಎಫ್' ಚಿತ್ರದ ಯಶಸ್ಸಿಗಾಗಿ ನಟ ಯಶ್, ನಿರ್ಮಾಪಕ ವಿಜಯ್ ಕಿರಗಂದೂರು ಪ್ರಾರ್ಥನೆ ಸಲ್ಲಿಸಿದ್ದಾರೆ.

ಈಗಾಗಲೇ ಬಿಡುಗಡೆ ಆಗಿರುವ 'ಕೆ.ಜಿ.ಎಫ್' ಟ್ರೈಲರ್ ಮತ್ತು ಹಾಡುಗಳಿಗೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ. ಇತ್ತೀಚೆಗಷ್ಟೇ ಬಿಡುಗಡೆ ಆದ 'ಕೆ.ಜಿ.ಎಫ್' ಹಿಂದಿ ವರ್ಷನ್ ನ 'ಗಲಿ ಗಲಿ' ಹಾಡು ಯೂಟ್ಯೂಬ್ ನಲ್ಲಿ ಹೊಸ ದಾಖಲೆ ಸೃಷ್ಟಿಸಿದೆ.
ಇನ್ನೂ ನಿನ್ನೆಯಷ್ಟೇ ಬಿಡುಗಡೆ ಆದ 'ಕೆ.ಜಿ.ಎಫ್' ಕನ್ನಡ ವರ್ಷನ್ ನ 'ಜೋಕೆ ನಾನು ಬಳ್ಳಿಯ ಮಿಂಚು' ಹಾಡು ಕೂಡ ಸೋಷಿಯಲ್ ಮೀಡಿಯಾದಲ್ಲಿ ಕಮಾಲ್ ಮಾಡುತ್ತಿದೆ.
ಸದ್ಯ ಕೊಲ್ಲೂರು ಮೂಕಾಂಬಿಕಾ ತಾಯಿಯ ದರ್ಶನ ಪಡೆದಿರುವ ಯಶ್ ಮತ್ತು ತಂಡ, ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ ದೇವಾಲಯಕ್ಕೂ ಭೇಟಿ ನೀಡುವ ಸಾಧ್ಯತೆ ಇದೆ.


Click it and Unblock the Notifications











