»   » ಕನ್ನಡ ನಟಿ ಭಾರತಿ ವಿಷ್ಣುವರ್ಧನ್ ಗೆ ಪದ್ಮಶ್ರೀ ಪ್ರಶಸ್ತಿ

ಕನ್ನಡ ನಟಿ ಭಾರತಿ ವಿಷ್ಣುವರ್ಧನ್ ಗೆ ಪದ್ಮಶ್ರೀ ಪ್ರಶಸ್ತಿ

Posted By:
Subscribe to Filmibeat Kannada

'ಅಭಿನಯ ಭಾರ್ಗವ' ದಿವಂಗತ ನಟ ಡಾ.ವಿಷ್ಣುವರ್ಧನ್ ರವರ ಧರ್ಮಪತ್ನಿ ನಟಿ ಭಾರತಿ ವಿಷ್ಣುವರ್ಧನ್ 'ಪದ್ಮಶ್ರೀ' ಗೌರವಕ್ಕೆ ಪಾತ್ರರಾಗಿದ್ದಾರೆ.

ಗಣರಾಜ್ಯೋತ್ಸವದ ಶುಭ ಸಂದರ್ಭದಲ್ಲಿ ಪ್ರಸಕ್ತ ಸಾಲಿನ ಪದ್ಮ ಪ್ರಶಸ್ತಿ ಪುರಸ್ಕೃತರ ಪಟ್ಟಿ ಪ್ರಕಟವಾಗಿದ್ದು, ದೇಶದ ನಾಲ್ಕನೇ ಅತ್ಯುನ್ನತ ನಾಗರಿಕ ಪುರಸ್ಕಾರವಾದ 'ಪದ್ಮಶ್ರೀ' ಪ್ರಶಸ್ತಿಗೆ ನಟಿ ಭಾರತಿ ವಿಷ್ಣುವರ್ಧನ್ ಭಾಜನರಾಗಿದ್ದಾರೆ.

ಸಿನಿಮಾ ಕ್ಷೇತ್ರದಲ್ಲಿ ಸಲ್ಲಿಸಿರುವ ಅಪಾರ ಸೇವೆ ಪರಿಗಣಿಸಿ 'ಪದ್ಮಶ್ರೀ' ಪ್ರಶಸ್ತಿಗೆ ನಟಿ ಭಾರತಿ ವಿಷ್ಣುವರ್ಧನ್ ರವರನ್ನು ಭಾರತ ಸರ್ಕಾರ ಆಯ್ಕೆ ಮಾಡಿದೆ.[ಸುಕ್ರಿ ಬೊಮ್ಮಗೌಡ ಸೇರಿದಂತೆ 150 ಸಾಧಕರಿಗೆ ಪದ್ಮಶ್ರೀ ಗೌರವ]

Kannada Actress Bharathi Vishnuvardhan gets Padma Shri Award

'ಲವ್ ಇನ್ ಬ್ಯಾಂಗಲೋರ್' ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದ ನಟಿ ಭಾರತಿ ವಿಷ್ಣುವರ್ಧನ್ 'ಸಂಧ್ಯಾ ರಾಗ', 'ಬಂಗಾರದ ಮನುಷ್ಯ', 'ಭಲೇ ಜೋಡಿ', 'ದೂರದ ಬೆಟ್ಟ' ಸೇರಿದಂತೆ ಅನೇಕ ಸೂಪರ್ ಹಿಟ್ ಚಿತ್ರಗಳಲ್ಲಿ ಅಭಿನಯಿಸಿದ್ದಾರೆ.

ಹಿಂದಿ, ತೆಲುಗು, ತಮಿಳು ಮತ್ತು ಮಲಯಾಳಂ ಚಿತ್ರರಂಗದಲ್ಲೂ ತಮ್ಮದೆ ಆದ ಛಾಪು ಮೂಡಿಸಿ ನಟಿ ಭಾರತಿ ವಿಷ್ಣುವರ್ಧನ್ ಜನಪ್ರಿಯತೆ ಗಳಿಸಿದ್ದಾರೆ.

English summary
The list of the Padma awards is out! Among the huge list Kannada Actress Bharathi Vishnuvardhan gets Padma Shri Award.

ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ - Filmibeat Kannada