Just In
Don't Miss!
- News
ಭಾರತದಲ್ಲಿ 20.29 ಲಕ್ಷ ಜನರಿಗೆ ಕೊರೊನಾವೈರಸ್ ಲಸಿಕೆ
- Sports
ಸಯ್ಯದ್ ಮುಷ್ತಾಕ್ ಅಲಿ: ಹಿಮಾಚಲ ಪ್ರದೇಶ ಮಣಿಸಿದ ತಮಿಳುನಾಡು
- Education
ECIL Recruitment 2021: 3 ಟೆಕ್ನಿಕಲ್ ಅಧಿಕಾರಿ ಹುದ್ದೆಗಳಿಗೆ ನೇರ ಸಂದರ್ಶನ
- Automobiles
ವಿನೂತನ ಫೀಚರ್ಸ್ಗಳೊಂದಿಗೆ ನ್ಯೂ ಜನರೇಷನ್ ಟಾಟಾ ಸಫಾರಿ ಎಸ್ಯುವಿ ಅನಾವರಣ
- Finance
ಗಣರಾಜ್ಯೋತ್ಸವಕ್ಕೆ ಬಿಎಸ್ಎನ್ಎಲ್ನಿಂದ ವಿಶೇಷ ಆಫರ್
- Lifestyle
ನೀವು ಬಳಸಬಹುದಾದ ಡೈರಿ ಉತ್ಪನ್ನವಲ್ಲದ ಹಾಲುಗಳ ಬಗ್ಗೆ ಇಲ್ಲಿದೆ ಮಾಹಿತಿ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಹಿರಿಯ ನಟ ಶನಿಮಹದೇವಪ್ಪ ನಿಧನಕ್ಕೆ ಸ್ಯಾಂಡಲ್‌ವುಡ್ ತಾರೆಯರು ಸಂತಾಪ
ಸುಮಾರು ಐದು ದಶಕಗಳ ಕಾಲ ಕನ್ನಡ ಚಿತ್ರರಂಗದಲ್ಲಿ ತೊಡಗಿಕೊಂಡಿದ್ದ ಹಿರಿಯ ಕಲಾವಿದ ಹಿರಿಯ ನಟ ಶನಿಮಹದೇವಪ್ಪ (90 ವರ್ಷ) ಭಾನುವಾರ ಸಂಜೆ ಬೆಂಗಳೂರಿನ ಕೆಸಿ ಜನರಲ್ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ. ಕಳೆದೊಂದು ವರ್ಷದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಹಿರಿಯ ನಟ ಕೊರೊನಾ ಸೋಂಕಿಗೆ ತುತ್ತಾಗಿ ಕೊನೆಯುಸಿರೆಳೆದರು ಎಂದು ಹೇಳಲಾಗಿದೆ.
ವರನಟ ಡಾ ರಾಜ್ ಕುಮಾರ್ ಅವರ ಬಹುತೇಕ ಚಿತ್ರಗಳಲ್ಲಿ ಶನಿ ಮಹಾದೇವಪ್ಪ ಅವರು ಇರುತ್ತಿದ್ದರು. ನಾಟಕ, ಸಿನಿಮಾಗಳ ವೈವಿಧ್ಯಮಯ ಪಾತ್ರಗಳ ಮೂಲಕ ಜನರಿಗೆ ಚಿರಪರಿಚಿತರಾಗಿದ್ದ ಕಲಾವಿದ ಇನ್ನಿಲ್ಲ ಎಂಬ ಸುದ್ದಿ ಕೇಳಿ ಸಿನಿಪ್ರೇಮಿಗಳು ಬೇಸರ ವ್ಯಕ್ತಪಡಿಸಿದ್ದಾರೆ. ಚಿತ್ರಪ್ರೇಮಿಗಳು ಮಾತ್ರವಲ್ಲ ಕನ್ನಡ ಚಿತ್ರರಂಗದ ತಾರೆಯರು ಸಹ ಸಂತಾಪ ವ್ಯಕ್ತಪಡಿಸಿದ್ದಾರೆ. ಮುಂದೆ ಓದಿ...
ಹಿರಿಯ ಕಲಾವಿದ ಶನಿ ಮಹಾದೇವಪ್ಪ ನಿಧನ: ಪುನೀತ್, ಸುದೀಪ್ ಸಂತಾಪ

ಅವರ ಕಲಾಸೇವೆ ಚಿರಸ್ಥಾಯಿ
''ಇಂದು ನಮ್ಮನ್ನೆಲ್ಲ ಅಗಲಿದ ಹಿರಿಯ ಕಲಾವಿದರಾದ ಶನಿ ಮಹಾದೇವಪ್ಪನವರ (90 ವರ್ಷ) ಆತ್ಮಕ್ಕೆ ಚಿರಶಾಂತಿ ಸಿಗಲೆಂದು ಪ್ರಾರ್ಥಿಸುವೆ. ಸರಿ ಸುಮಾರು 550 ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಸಿರುವ ಅವರ ಕಲಾಸೇವೆ ಚಿರಸ್ಥಾಯಿ. ಅವರ ಕುಟುಂಬ ಹಾಗೂ ಪ್ರೀತಿಪಾತ್ರರಿಗೆ ಈ ನೋವು ಭರಿಸುವ ಶಕ್ತಿಯನ್ನು ಭಗವಂತ ನೀಡಲಿ'' - ಸುಮಲತಾ ಅಂಬರೀಶ್

ಪುನೀತ್ ಸಂತಾಪ
''ಅಪ್ಪಾಜಿಯವರ ಜೊತೆ ಭಕ್ತ ಕುಂಬಾರ, ಶ್ರೀನಿವಾಸ ಕಲ್ಯಾಣ, ಕವಿರತ್ನ ಕಾಳಿದಾಸ, ಮೂರೂವರೆ ವಜ್ರಗಳು ಸೇರಿದಂತೆ ಅನೇಕ ಚಿತ್ರಗಳಲ್ಲಿ ನಟಿಸಿದ ಹಿರಿಯ ನಟರಾದ ಶನಿ ಮಹದೇವಪ್ಪನವರು ನಮ್ಮನ್ನು ಅಗಲಿದ್ದಾರೆ'' - ಪುನೀತ್ ರಾಜ್ ಕುಮಾರ್
ಮೇಯರ್ ಫಂಡ್ ನಿಂದ ಈತನಿಗೆ 5 ಲಕ್ಷ ರೂ. ಬರುವಂತೆ ಶ್ರಮಿಸಿದ್ದೆ: ಶನಿ ಮಹಾದೇವಪ್ಪ ಬಗ್ಗೆ ಜಗ್ಗೇಶ್ ಮಾತು

ಸುದೀಪ್ ಸಂತಾಪ
ಹಿರಿಯ ಕಲಾವಿದ, ಅಣ್ಣಾವ್ರ ಚಿತ್ರಗಳಲ್ಲಿ ಹೆಚ್ಚು ನಟಿಸಿರುವ ಶನಿ ಮಹಾದೇವಪ್ಪ ಅವರ ನಿಧನಕ್ಕೆ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಸಹ ಸಂತಾಪ ಸೂಚಿಸಿದ್ದಾರೆ. ತಮ್ಮ ಟ್ವಿಟ್ಟರ್‌ನಲ್ಲಿ ಶನಿ ಮಹಾದೇವಪ್ಪ ಅವರ ಫೋಟೋ ಹಂಚಿಕೊಂಡು ಆತ್ಮಕ್ಕೆ ಶಾಂತಿ ಕೋರಿದ್ದಾರೆ.

ಮಾವ ಎಂದು ಕರೆಯುತ್ತಿದ್ದೆ- ಜಗ್ಗೇಶ್
''1984 ರಿಂದ ಬಲ್ಲೆ ಈತನ ಮಾವ ಎಂದು ಕರೆಯುತ್ತಿದ್ದೆ. ಅಣ್ಣನ ಆತ್ಮೀಯ! ಸಕ್ಕರೆ ಖಾಯಿಲೆಯಿಂದ ಎರಡು ಕಣ್ಣು ಕಳೆದುಕೊಂಡಿದ್ದ. 10 ವರ್ಷ ಹಿಂದೆ ಮೇಯರ್ ಫಂಡ್ನಿಂದ ಈತನಿಗೆ ವಿಶೇಷ ಪ್ಯಾಕೇಜ್ 5 ಲಕ್ಷ ಬರುವಂತೆ ಶ್ರಮಿಸಿದ್ದೆ ಹಾಗು ವೈಯಕ್ತಿಕವಾಗಿ ನಾನು ಬ್ಯಾಂಕ್ ಜನಾರ್ದನ ಜೂತೆ ಹೋಗಿ ಕೈಲಾದ ಸಹಾಯ ಮಾಡಿದ್ದೆ. 80 ವರ್ಷ ವಯಸ್ಸು ದಾಟಿದೆ. ಇವರ ಆತ್ಮಕ್ಕೆ ಶಾಂತಿ'' - ಜಗ್ಗೇಶ್

ಡಿಂಗ್ರಿ ನಾಗರಾಜ್ ಸಂತಾಪ
''ಹಿರಿಯ ಕಲಾವಿದರಾದ ಶನಿ ಮಹಾದೇವಪ್ಪನವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ದೇವರಲ್ಲಿ ಬೇಡಿಕೊಳ್ಳುತ್ತೇನೆ'' ಎಂದು ಹಿರಿಯ ಹಾಸ್ಯನಟ ಡಿಂಗ್ರಿ ನಾಗರಾಜ್ ಅವರು ಫೇಸ್‌ಬುಕ್‌ನಲ್ಲಿ ಸಂತಾಪ ಸೂಚಿಸಿದ್ದಾರೆ.