2026ರಲ್ಲಿ ಬಹಳ ನಿರೀಕ್ಷೆ ಹುಟ್ಟಾಕಿರುವ ಕನ್ನಡ ಸಿನಿಮಾಗಳು ಯಾವುವು? ಇಲ್ಲಿದೆ ಲಿಸ್ಟ್

ಮತ್ತೊಂದು ಹೊಸ ವರ್ಷ ಕನ್ನಡ ಚಿತ್ರರಂಗಕ್ಕೆ ಹೊಸ ಹುರುಪು ಹೊತ್ತು ಬರ್ತಿದೆ. ಕಳೆದ ವರ್ಷ ಕನ್ನಡ ಚಿತ್ರರಂಗಕ್ಕೆ ಸಿಹಿ ಕಹಿ ಎರಡೂ ಸಿಕ್ಕಿತ್ತು. 200ಕ್ಕೂ ಅಧಿಕ ಸಿನಿಮಾಗಳಲ್ಲಿ ನಾಲ್ಕೈದು ಚಿತ್ರಗಳು ಮಾತ್ರ ಗೆದ್ದಿತ್ತು. 2026ರಲ್ಲಿ ಕನ್ನಡ ಸಿನಿಮಾಗಳ ಗೆಲುವು ಮತ್ತಷ್ಟು ಜೋರಾಗಿ ಇರಲಿ ಎಂದು ಆಶಿಸೋಣ.

ಈ ವರ್ಷ ಸಾಕಷ್ಟು ಬಹುನಿರೀಕ್ಷಿತ ಸಿನಿಮಾಗಳು ಪ್ರೇಕ್ಷಕರ ಮುಂದೆ ಬರ್ತಿವೆ. ಪ್ಯಾನ್ ಇಂಡಿಯಾ ಮಟ್ಟದಲ್ಲಿ ಕೆಲ ಸಿನಿಮಾಗಳು ಸದ್ದು ಮಾಡಲು ಅಣಿಯಾಗಿವೆ. 'ಟಾಕ್ಸಿಕ್' ಹಾಗೂ 'ರಾಮಾಯಣ' ಸಿನಿಮಾಗಳ ಮೇಲೆ ಭಾರೀ ನಿರೀಕ್ಷೆಯಿದೆ. ನಿತೇಶ್ ತಿವಾರಿ ನಿರ್ದೇಶನದ 'ರಾಮಾಯಣ' ಕನ್ನಡದ ಸಿನಿಮಾ ಅಲ್ಲದೇ ಇದ್ದರೂ ಯಶ್ ಚಿತ್ರಕ್ಕೆ ಬಂಡವಾಳ ಹೂಡಿ ರಾವಣನ ಪಾತ್ರದಲ್ಲಿ ನಟಿಸಿರುವುದು ಕುತೂಹಲ ಮೂಡಿದೆ. ಕನ್ನಡಕ್ಕೂ ಸಿನಿಮಾ ಡಬ್ ಆಗಿ ಬರಲಿದೆ.

Kannada Cinema 2026 Big Hopes Riding on Toxic KD Uttarakanda and Other High-Expectation Films

2025ರಲ್ಲಿ ಕನ್ನಡದ ಕೆಲ ಸ್ಟಾರ್ ನಟರ ಸಿನಿಮಾಗಳು ಬಿಡುಗಡೆ ಆಗಲೇಯಿಲ್ಲ. ಈ ವರ್ಷ ಕೂಡ ಕೆಲವರು ಚಿತ್ರಮಂದಿರಗಳಿಂದ ದೂರವೇ ಉಳಿಯಲಿದ್ದಾರೆ. ಇನ್ನು ಮುಂದಿನ 365 ದಿನಗಳಲ್ಲಿ 200ಕ್ಕೂ ಅಧಿಕ ಕನ್ನಡ ಸಿನಿಮಾಗಳು ಬಿಡುಗಡೆ ಆಗುವುದರಲ್ಲಿ ಅಚ್ಚರಿಯಿಲ್ಲ. ನಿರೀಕ್ಷೆ ಹುಟ್ಟಾಕ್ಕಿರುವ ಸಿನಿಮಾಗಳ ಪಟ್ಟಿ ಇಲ್ಲಿದೆ ನೋಡಿ.

1. ಟಾಕ್ಸಿಕ್

ಯಶ್ ನಿರ್ಮಿಸಿ ನಟಿಸಿರುವ 'ಟಾಕ್ಸಿಕ್' ಸಿನಿಮಾ ಮಾರ್ಚ್ 19ಕ್ಕೆ ತೆರೆಗೆ ಬರಲಿದೆ. ಗೀತು ಮೋಹನ್‌ದಾಸ್ ನಿರ್ದೇಶನದ ಚಿತ್ರದಲ್ಲಿ ಘಟಾನುಘಟಿ ಕಲಾವಿದರು ನಟಿಸಿದ್ದಾರೆ. ಈಗಾಗಲೇ ಯಶ್, ಕಿಯಾರಾ ಅದ್ವಾನಿ, ನಯನತಾರಾ, ಹುಮಾ ಖುರೇಷಿ ಲುಕ್ ರಿವೀಲ್ ಆಗಿದೆ. ನಿರ್ದೇಶಕಿ ಜೊತೆ ಸೇರಿ ಯಶ್ ಕೂಡ ಚಿತ್ರಕ್ಕೆ ಕಥೆ, ಚಿತ್ರಕಥೆ ಸಿದ್ಧಪಡಿಸಿದ್ದಾರೆ. ರವಿ ಬಸ್ರೂರು ಸಂಗೀತ ಚಿತ್ರಕ್ಕಿದೆ. ಈದ್ ಸಂಭ್ರಮದಲ್ಲಿ ಬಾಲಿವುಡ್ 'ಧುರಂಧರ್- 2' ಎದುರು ಕನ್ನಡದ 'ಟಾಕ್ಸಿಕ್' ಸಿನಿಮಾ ಬಿಡುಗಡೆ ಆಗಲಿದೆ.

Kannada Cinema 2026 Big Hopes Riding on Toxic KD Uttarakanda and Other High-Expectation Films

2. ಕೆಡಿ

ಜೋಗಿ ಪ್ರೇಮ್ ನಿರ್ದೇಶನದ 'ಕೆಡಿ' ಚಿತ್ರದಲ್ಲಿ ಧ್ರುವ ಸರ್ಜಾ ನಟಿಸಿದ್ದಾರೆ. ಕಾರಣಾಂತರಗಳಿಂದ ಈ ಆಕ್ಷನ್ ಥ್ರಿಲ್ಲರ್ ಸಿನಿಮಾ ಬಿಡುಗಡೆ ತಡವಾಗ್ತಿದೆ. ಏಪ್ರಿಲ್ 28ರಂದು ಸಿನಿಮಾ ತೆರೆಗೆ ತರಲು ಚಿತ್ರತಂಡ ಮುಂದಾಗಿದೆ. ಅಧಿಕೃತವಾಗಿ ಈ ಬಗ್ಗೆ ಮಾಹಿತಿ ಸಿಕ್ಕಿದೆ. ಚಿತ್ರದ ಟೀಸರ್, ಸಾಂಗ್ಸ್ ಹಿಟ್ ಆಗಿದೆ. ಸಂಜಯ್ ದತ್, ರವಿಚಂದ್ರನ್, ಶಿಲ್ಪಾ ಶೆಟ್ಟಿ ಸೇರಿ ದೊಡ್ಡ ತಾರಾಗಣ ಚಿತ್ರದಲ್ಲಿದೆ. ಪ್ಯಾನ್ ಇಂಡಿಯಾ ಮಟ್ಟದಲ್ಲಿ ಸಿನಿಮಾ ತೆರೆಗಪ್ಪಳಿಸಲಿದೆ.

3. ಲ್ಯಾಂಡ್‌ಲಾರ್ಡ್

'ಭೀಮ' ಬಳಿಕ ದುನಿಯಾ ವಿಜಯ್ ನಟನೆಯ 'ಲ್ಯಾಂಡ್‌ಲಾರ್ಡ್' ಸಿನಿಮಾ ನಿರೀಕ್ಷೆ ಹುಟ್ಟಾಕ್ಕಿದೆ. ಈಗಾಗಲೇ ಚಿತ್ರದ ಟೀಸರ್ ಹಾಗೂ ಒಂದು ಸಾಂಗ್ ರಿಲೀಸ್ ಆಗಿ ಗಮನ ಸೆಳೆದಿದೆ. ಚಿತ್ರದಲ್ಲಿ ರಚಿತಾ ರಾಮ್ ನಾಯಕಿಯಾಗಿ ಮಿಂಚಿದ್ದಾರೆ. ಕೋಲಾರದ ಹಳ್ಳಿಯೊಂದರ ಹಿನ್ನೆಲೆಯಲ್ಲಿ ಚಿತ್ರದ ಕಥೆ ಕಟ್ಟಿಕೊಡಲಾಗಿದೆ. ಅಜನೀಶ್ ಲೋಕನಾಥ್ ಸಂಗೀತ ಚಿತ್ರಕ್ಕಿದ್ದು ಜನವರಿ 23ಕ್ಕೆ ಸಿನಿಮಾ ತೆರೆಗೆ ಬರಲಿದೆ.

4. ಉತ್ತರಕಾಂಡ

ರೋಹಿತ್ ಪದಕಿ ನಿರ್ದೇಶನದಲ್ಲಿ ಧನಂಜಯ್ ನಟನೆಯ 'ಉತ್ತರಕಾಂಡ' ಸಿನಿಮಾ ಚಿತ್ರೀಕರಣ ಅರ್ಧಕ್ಕೆ ನಿಂತಿದೆ. ಚಿತ್ರದಲ್ಲಿ ಶಿವರಾಜ್‌ಕುಮಾರ್ ಮುಖ್ಯವಾದ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಶೀಘ್ರದಲ್ಲೇ ಸಿನಿಮಾ ಚಿತ್ರೀಕರಣ ಪುನರಾರಂಭ ಮಾಡುವ ಸಾಧ್ಯತೆಯಿದೆ. ಉತ್ತರ ಕರ್ನಾಟಕದ ಹಿನ್ನೆಲೆಯ ಚಿತ್ರಕ್ಕೆ ಕೆಆರ್‌ಜಿ ಸ್ಟುಡಿಯೋಸ್ ಸಂಸ್ಥೆ ಬಂಡವಾಳ ಹೂಡಿದೆ. ಎಲ್ಲಾ ಅಂದುಕೊಂಡಂತೆ ಆಗಿಬಿಟ್ರೆ ವರ್ಷಾಂತ್ಯಕ್ಕೆ ಸಿನಿಮಾ ತೆರೆಗೆ ಬರಲಿದೆ.

5. ಬಿಲ್ಲ ರಂಗ ಬಾಷ

ವಿಕ್ರಾಂತ್ ರೋಣ ಬಳಿಕ ಅನೂಪ್ ಭಂಡಾರಿ ಜೊತೆ ಸುದೀಪ್ ಮತ್ತೆ ಕೈಜೋಡಿಸಿದ್ದಾರೆ. ಇವರಿಬ್ಬರ ಕಾಂಬಿನೇಷನ್‌ನಲ್ಲಿ 'ಬಿಲ್ಲ ರಂಗ ಬಾಷ' ಸಿನಿಮಾ ಒಂದು ಶೆಡ್ಯೂಲ್ ಮುಗಿದಿದೆ. ಈ ವರ್ಷವೇ ಚಿತ್ರ ತೆರೆಗೆ ಬರುತ್ತಾ ಎಂದು ಹೇಳುವುದು ಕಷ್ಟ. ಆದರೆ ಡಿಸೆಂಬರ್ 25ಕ್ಕೆ ಮತ್ತೊಂದು ಸಿನಿಮಾ ಬಿಡುಗಡೆ ಮಾಡುವುದಾಗಿ ಹೇಳಿ ಕಿಚ್ಚ ಸುದೀಪ್ ಕುತೂಹಲ ಮೂಡಿಸಿದ್ದಾರೆ.

6. ಸೂರಿ-ಯುವ ಸಿನಿಮಾ

ದುನಿಯಾ ಸೂರಿ ನಿರ್ದೇಶನದಲ್ಲಿ ಯುವರಾಜ್‌ಕುಮಾರ್ ನಟನೆಯ ಸಿನಿಮಾ ಸೆಟ್ಟೇರಿದೆ. ಕಾರಣಾಂತರಗಳಿಂದ ಸಿನಿಮಾ ತಡವಾಗ್ತಿದೆ. ಈ ವರ್ಷವೇ ಸಿನಿಮಾ ಚಿತ್ರೀಕರಣ ನಡೆದು ತೆರೆಗೆ ಬಂದರೂ ಅಚ್ಚರಿ ಪಡಬೇಕಿಲ್ಲ. ಸೂರಿ- ಯುವ ಕಾಂಬೋ ಸಿಕ್ಕಾಪಟ್ಟೆ ಹೈಪ್ ಕ್ರಿಯೇಟ್ ಮಾಡಿದೆ.

7. 666 ಆಪರೇಷನ್ ಡ್ರೀಮ್ ಥಿಯೇಟರ್

ಹೇಮಂತ್ ರಾವ್ ನಿರ್ದೇಶನದಲ್ಲಿ ಧನಂಜಯ್ ಹಾಗೂ ಶಿವಣ್ಣ ನಟನೆಯ '666 ಆಪರೇಷನ್ ಡ್ರೀಮ್ ಥಿಯೇಟರ್' ಸಿನಿಮಾ ಕೂಡ ಕುತೂಹಲ ಹುಟ್ಟಾಕ್ಕಿದೆ. ರೆಟ್ರೋ ಸ್ಟೈಲ್‌ನಲ್ಲಿ ಸಿನಿಮಾ ಕಟ್ಟಿಕೊಡಲಾಗ್ತಿದೆ. ವೈಶಾಕ್ ಜೆ ಫಿಲ್ಮ್ಸ್ ಸಂಸ್ಥೆ ಚಿತ್ರಕ್ಕೆ ಹಣ ಹಾಕಿದೆ. ಈ ವರ್ಷವೇ ಸಿನಿಮಾ ತೆರೆಗೆ ಬರುವ ನಿರೀಕ್ಷೆಯಿದೆ.

ಇನ್ನುಳಿದಂತೆ ಗಣೇಶ್, ರಮೇಶ್ ಅರವಿಂದ್ ಜೋಡಿಯ 'ಯುವರ್ಸ್ ಸಿನ್ಸಿಯರ್ಲಿ ರಾಮ್', ಪ್ರಜ್ವಲ್ ದೇವರಾಜ್ ನಟನೆಯ 'ಕರಾವಳಿ', ದುನಿಯಾ ವಿಜಯ್ ನಿರ್ದೇಶನದ 'ಸಿಟಿಲೈಟ್ಸ್' ಹೀಗೆ ಒಂದಷ್ಟು ಸಿನಿಮಾಗಳು ನಿರೀಕ್ಷೆ ಹುಟ್ಟಾಕ್ಕಿದೆ. ಇದೆಲ್ಲ ನಿರೀಕ್ಷೆ ಹುಟ್ಟಾಕ್ಕಿರುವ ಸಿನಿಮಾಗಳ ಕಥೆ ಆಯ್ತು. ರಿಷಬ್ ಶೆಟ್ಟಿ ರಕ್ಷಿತ್ ಶೆಟ್ಟಿ, ಶ್ರೀಮುರಳಿ ಸೇರಿದಂತೆ ಕೆಲ ಸ್ಟಾರ್ ನಟರ ಸಿನಿಮಾಗಳು ಈ ವರ್ಷ ತೆರೆಗೆ ಬರುವುದು ಅನುಮಾನ.

More from Filmibeat

Read more about: kannada toxic new year 2026
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X