'ರಾಷ್ಟ್ರ ಪ್ರಶಸ್ತಿ' ವಿಜೇತ ನಿರ್ದೇಶಕ ಮಂಸೋರೆ ನಿಶ್ಚಿತಾರ್ಥ
ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕ ಮಂಸೋರೆ ಇಂದು (ಜುಲೈ 4) ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಬೆಂಗಳೂರಿನಲ್ಲಿ ನಡೆದ ಎಂಗೇಜ್‌ಮೆಂಟ್ ಕಾರ್ಯಕ್ರಮದಲ್ಲಿ 'ಅಖಿಲಾ' ಜೊತೆ ಉಂಗುರ ಬದಲಿಸಿಕೊಂಡಿದ್ದಾರೆ.
ಕೋವಿಡ್ ಕಾರಣದಿಂದ ಕೇವಲ ಕುಟುಂಬಸ್ಥರು, ಆಪ್ತರು ಮಾತ್ರ ನಿಶ್ಚಿತಾರ್ಥ ಸಮಾರಂಭದಲ್ಲಿ ಭಾಗಿಯಾಗಿದ್ದರು. ಎಂಗೇಜ್‌ಮೆಂಟ್ ಬೆನ್ನಲ್ಲೆ ಮದುವೆ ದಿನಾಂಕ ಸಹ ನಿಗದಿಯಾಗಿದ್ದು, ಅಗಸ್ಟ್ 15ಕ್ಕೆ ವಿವಾಹ ನಿಶ್ಚಯವಾಗಿದೆ.
2014ರಲ್ಲಿ ಮಂಸೋರೆ ನಿರ್ದೇಶನದಲ್ಲಿ ತೆರೆಕಂಡಿದ್ದ 'ಹರಿವು' ಚಿತ್ರಕ್ಕೆ ಅತ್ಯುತ್ತಮ ಪ್ರಾದೇಶಿಕ ಸಿನಿಮಾ ರಾಷ್ಟ್ರ ಪ್ರಶಸ್ತಿ ಸಿಕ್ಕಿತ್ತು. 'ಹರಿವು' ಸಿನಿಮಾದಲ್ಲಿ ಸಂಚಾರಿ ವಿಜಯ್ ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದರು.

ನಂತರ 2018ರಲ್ಲಿ 'ನಾತಿಚರಾಮಿ' ಸಿನಿಮಾ ಬಿಡುಗಡೆಯಾಗಿತ್ತು. ಶ್ರುತಿ ಹರಿಹರನ್, ಸಂಚಾರಿ ವಿಜಯ್, ಶರಣ್ಯ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದರು. ಈ ಚಿತ್ರಕ್ಕೂ ಅತ್ಯುತ್ತಮ ಪ್ರಾದೇಶಿಕ ಸಿನಿಮಾ ರಾಷ್ಟ್ರ ಪ್ರಶಸ್ತಿ ಲಭಿಸಿತ್ತು. ಜೊತೆಗೆ ವಿಶೇಷ ತೀರ್ಪುಗಾರರ ಪ್ರಶಸ್ತಿ ಶ್ರುತಿ ಹರಿಹರನ್‌ಗೆ ಲಭಿಸಿತ್ತು.
ಇತ್ತೀಚಿಗಷ್ಟೆ 'ಆಕ್ಟ್ 1978' ಸಿನಿಮಾ ನಿರ್ದೇಶಿಸಿದ್ದರು. ಈ ಚಿತ್ರಕ್ಕೂ ಒಳ್ಳೆಯ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಯಜ್ಞಾ ಶೆಟ್ಟಿ, ಸಂಚಾರಿ ವಿಜಯ್, ಶ್ರುತಿ ಸೇರಿದಂತೆ ಅನೇಕ ಕಲಾವಿದರು ನಟಿಸಿದ್ದರು.
ಇನ್ನು ಮಂಸೋರೆ ನಿರ್ದೇಶನದಲ್ಲಿ 'ರಾಣಿ ಅಬ್ಬಕ್ಕ' ಕುರಿತು ಸಿನಿಮಾ ಘೋಷಣೆ ಮಾಡಿದ್ದಾರೆ. ಪ್ರಮುಖ ಪಾತ್ರ ಸದ್ಯಕ್ಕೆ ಪ್ರಕಟವಾಗಿಲ್ಲ.


Click it and Unblock the Notifications