twitter
    For Quick Alerts
    ALLOW NOTIFICATIONS  
    For Daily Alerts

    ಸ್ಯಾಂಡಲ್ ವುಡ್ ಕಲಾ ಸಾಮ್ರಾಟ್ ಎಸ್. ನಾರಾಯಣ್ ಅವರಿಗೆ ಗೌರವ ಡಾಕ್ಟರೇಟ್

    By ಫಿಲ್ಮ್ ಡೆಸ್ಕ್
    |

    ಸ್ಯಾಂಡಲ್ ವುಡ್ ನ ಕಲಾ ಸಾಮ್ರಾಟ್ ಎಸ್ ನಾರಾಯಣ್ ಅವರು ಇನ್ಮುಂದೆ ಡಾ. ಎಸ್ ನಾರಾಯಣ್ ಆಗಿದ್ದಾರೆ. ಹೌದು, ಸ್ಯಾಂಡಲ್ ವುಡ್ ನ ಖ್ಯಾತ ನಿರ್ದೇಶಕ ಎಸ್ ನಾರಾಯಣ್ ಅವರಿಗೆ ಗೌರವ ಡಾಕ್ಟರೇಟ್ ನೀಡಿ ಗೌರವಿಸಲಾಗಿದೆ.

    Recommended Video

    S Narayan ಗೆ ಗೌರವ ಡಾಕ್ಟರೇಟ್ | Filmibeat Kannada

    ಚಿತ್ರರಂಗದಲ್ಲಿ ನಾರಾಯಣ್ ಅವರ ಸೇವೆಯನ್ನು ಗುರುತಿಸಿ ಯೂನಿವರ್ಸಲ್ ಡೆವಲಪ್ ಮೆಂಟ್ ಕೌನ್ಸಿಲ್ ಗೌರವ ಡಾಕ್ಟರೇಟ್ ನೀಡಿದೆ. ಇತ್ತೀಚಿಗೆ ಹೊಸೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗಿದೆ.

    ಖ್ಯಾತ ನಿರ್ದೇಶಕ ಎಸ್ ನಾರಾಯಣ್ ಪುತ್ರ ಈಗ ನಿರ್ದೇಶಕಖ್ಯಾತ ನಿರ್ದೇಶಕ ಎಸ್ ನಾರಾಯಣ್ ಪುತ್ರ ಈಗ ನಿರ್ದೇಶಕ

    ಸ್ಯಾಂಡಲ್ ವುಡ್ ನಲ್ಲಿ ನಿರ್ದೇಶಕರಾಗಿ, ನಟರಾಗಿ, ನಿರ್ಮಾಪಕರಾಗಿ ಎಸ್ ನಾರಾಯಣ್ ಚಿತ್ರರಂಗದಲ್ಲಿ ಸೇವೆ ಸಲ್ಲಿದ್ದಾರೆ. ಚೈತ್ರದ ಪ್ರೇಮಾಂಜಲಿ ಸಿನಿಮಾಗೆ ನಿರ್ದೇಶನ ಮಾಡುವ ಮೂಲಕ ಸಿನಿಮಾ ಪಯಣ ಪ್ರಾರಂಭ ಮಾಡಿದ ಎಸ್ ನಾರಾಯಣ್ ಸುಮಾರು 30 ವರ್ಷಗಳ ಕಾಲ ಕನ್ನಡ ಚಿತ್ರರಂಗದಲ್ಲಿ ಸೇವೆ ಸಲ್ಲಿಸಿದ್ದಾರೆ.

    Kannada director S.Narayan awarded honorary doctorate

    ಸ್ಯಾಂಡಲ್ ವುಡ್ ನ ಘಟಾನುಘಟಿ ಸ್ಟಾರ್ ನಟರಿಗೆ ನಿರ್ದೇಶನ ಮಾಡಿ ಸೈ ಎನಿಸಿಕೊಂಡಿದ್ದಾರೆ. ಡಾ.ರಾಜ್ ಕುಮಾರ್ ನಟನೆಯ ಶಬ್ಧವೇದಿ, ಸಾಹಸಸಿಂಹ ವಿಷ್ಣುವರ್ಧನ್ ಅವರ ಸೂರ್ಯವಂಶ, ನಟ ರವಿಚಂದ್ರನ್ ಸೇರಿದಂತೆ ಅನೇಕ ಸ್ಟಾರ್ ನಟರಿಗೆ ಆಕ್ಷನ್ ಕಟ್ ಹೇಳಿದ್ದಾರೆ.

    ನಿರ್ದೇಶಕದ ಜೊತೆಗೆ ಎಸ್ ನಾರಾಯಣ್ ಸಾಕಷ್ಟು ಸಿನಿಮಾಗಳಲ್ಲೂ ನಟಿಸಿದ್ದಾರೆ. ಇದುವರೆಗೂ ಸುಮಾರು 49ಸಿನಿಮಾಗಳನ್ನು ಎಸ್ ನಾರಾಯಣ್ ನಿರ್ದೇಶನ ಮಾಡಿದ್ದಾರೆ. ವಿಶೇಷ ಎಂದರೆ ತಮಿಳಿನಲ್ಲೂ ಒಂದು ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ.

    ಕನ್ನಡ ಸಿನಿಮಾರಂಗದಲ್ಲಿ ಅನೇಕರು ಡಾಕ್ಟರೇಟ್ ಗೌರವಕ್ಕೆ ಪಾತ್ರರಾಗಿದ್ದಾರೆ. ಡಾ.ರಾಜ್ಕುಮಾರ್ ಅವರಿಂದ ವಿಷ್ಣುವರ್ಧನ್, ಅಂಬರೀಶ್, ಶಿವರಾಜ್ ಕಮಾರ್, ರವಿಚಂದ್ರನ್ ಸೇರಿದಂತೆ ಅನೇಕರಿಗೆ ಈ ಗೌರವ ಸಿಕ್ಕಿದೆ. ಇದೀಗ ಎಸ್ ನಾರಾಯಣ್ ಅವರಿಗೂ ಸಿಕ್ಕಿದ್ದು, ಎಸ್ ನಾರಾಯಣ್ ಕುಟುಂಬಕ್ಕೆ ಸಂತಸ ತಂದಿದೆ.

    English summary
    Kannada director S.Narayan awarded honorary doctorate.
    Monday, December 21, 2020, 9:57
    IIFA

    Kannada Photos

    Go to : More Photos
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X
    X