ಅಕ್ಟೋಬರ್ 6ರಂದು ಕನ್ನಡ ಚಿತ್ರೋದ್ಯಮ ಬಂದ್

ಅಕ್ಟೋಬರ್ 6ರಂದು ಚಿತ್ರ ಪ್ರದರ್ಶನ, ಚಿತ್ರೀಕರಣ ಸೇರಿದಂತೆ ಕನ್ನಡ ಚಿತ್ರೋದ್ಯಮದ ಸಂಪೂರ್ಣ ವ್ಯವಹಾರಗಳು ಬಂದ್ ಆಗಲಿವೆ. ಈ ಮೂಲಕ ಕನ್ನಡ ಚಿತ್ರೋದ್ಯಮ ರಾಜ್ಯಕ್ಕೆ ಆಗಿರುವ ಅನ್ಯಾಯದ ವಿರುದ್ಧ ಘೋಷಣೆಗಳನ್ನು ಕೂಗಿ ಪ್ರತಿಭಟಿಸಲಿದೆ.
ಈ ಸಂಬಂಧ ಬುಧವಾರ (ಸೆ.26) ಬೆಂಗಳೂರಿನಲ್ಲಿ ಡಾ.ರಾಜ್ ಕುಮಾರ್ ಅಭಿಮಾನಿಗಳ ಸಂಘದ ಅಧ್ಯಕ್ಷ ಸಾ.ರಾ. ಗೋವಿಂದು ಸುದ್ದಿಗೋಷ್ಠಿ ಕರೆದಿದ್ದರು. ಕೇಂದ್ರ ಸರ್ಕಾರದ ಮಲತಾಯಿ ಧೋರಣೆಯನ್ನು ಖಂಡಿಸಿ ಅಕ್ಟೋಬರ್ 6ರಂದು ಕನ್ನಡ ಚಿತ್ರೋದ್ಯಮ ಬಂದ್ ಆಗಲಿದೆ ಎಂದು ಅವರು ವಿವರ ನೀಡಿದರು.
ಕೇಂದ್ರ ಸರ್ಕಾರವು ರಾಜ್ಯಕ್ಕೆ ಆಗಿಂದಾಗ್ಗೆ ಅನ್ಯಾಯ ಮಾಡುತ್ತಲೇ ಇದೆ. ಈಗ 9 ಸಾವಿರ ಕ್ಯೂಸೆಕ್ಸ್ ನೀರನ್ನು ತಮಿಳುನಾಡಿಗೆ ಬಿಡಬೇಕು ಎಂದು ಪ್ರಧಾನಿ ನೇತೃತ್ವದ ಕಾವೇರಿ ನದಿ ನೀರು ಪ್ರಾಧಿಕಾರ ಸೂಚಿಸಿದೆ. ಈ ಮೂಲಕ ರಾಜ್ಯಕ್ಕೆ ಅನ್ಯಾಯವಾಗಿದೆ.
ರಾಜ್ಯಕ್ಕೆ ಅನ್ಯಾಯವಾಗುವಂತೆ ನಡೆದುಕೊಂಡಿರುವ ಪ್ರಧಾನಿ ಮನಮೋಹನ್ ಸಿಂಗ್ ಅವರು ಕ್ಷಮೆಯಾಚಿಸಬೇಕು ಎಂದು ಕನ್ನಡ ಒಕ್ಕೂಟದ ಮುಖಂಡರೂ ಆಗಿರುವ ಸಾ.ರಾ. ಗೋವಿಂದು ಆಗ್ರಹಿಸಿದ್ದಾರೆ. (ಏಜೆನ್ಸೀಸ್)


Click it and Unblock the Notifications











