»   » ಕರ್ನಾಟಕ ಬಂದ್ ಗೆ ಬೆಂಬಲ ಸೂಚಿಸಿದ ಕನ್ನಡ ಚಿತ್ರರಂಗ

ಕರ್ನಾಟಕ ಬಂದ್ ಗೆ ಬೆಂಬಲ ಸೂಚಿಸಿದ ಕನ್ನಡ ಚಿತ್ರರಂಗ

Posted By:
Subscribe to Filmibeat Kannada

ಇಂದು (ಜೂನ್ 12)ಕ್ಕೆ ನಡೆಯುತ್ತಿರುವ ಕರ್ನಾಟಕ ಬಂದ್ ಗೆ ಇಡೀ ಕನ್ನಡ ಚಿತ್ರರಂಗ ಬೆಂಬಲ ನೀಡಿದೆ. ಬಂದ್ ಹಿನ್ನಲೆಯಲ್ಲಿ ಇಂದು ಸಿನಿಮಾಗಳ ಪ್ರದರ್ಶನ ಮತ್ತು ಚಿತ್ರೀಕರಣವನ್ನು ಸಂಪೂರ್ಣವಾಗಿ ನಿಲ್ಲಿಸಲಾಗಿದೆ.

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಬಂದ್ ಗೆ ತನ್ನ ಸಾಥ್ ನೀಡಿದೆ. ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಸಾ.ರಾ.ಗೋವಿಂದು ಬಂದ್ ಬಗ್ಗೆ ಮಾತನಾಡಿ 'ಇಂದು ಯಾವುದೇ ಮಲ್ಟಿಪ್ಲೆಕ್ಸ್ ಮತ್ತು ಸಿಂಗಲ್ ಸ್ಕ್ರೀನ್ ನಲ್ಲಿ ಸಿನಿಮಾ ಪ್ರದರ್ಶನ ಇರುವುದಿಲ್ಲ ಮತ್ತು ಚಿತ್ರೀಕರಣ ಸಹ ನೆಡೆಯುವುದಿಲ್ಲ' ಎಂದು ಸ್ಪಷ್ಟಪಡಿಸಿದ್ದಾರೆ.

kannada film industry supports karnataka bandh

ಬಯಲು ಸೀಮೆಯ ಜನರ ಸಂಕಷ್ಟಕ್ಕೆ ಸ್ಪಂದಿಸುವ ದೃಷ್ಟಿಯಿಂದ ಇಂದು ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಕರ್ನಾಟಕ ಬಂದ್ ಗೆ ಕರೆ ಕೊಟ್ಟಿದ್ದರು. ಇದಕ್ಕೆ ಚಿತ್ರೋದ್ಯಮ ಸೇರಿದಂತೆ 2000ಕ್ಕೂ ಹೆಚ್ಚು ಸಂಘಟನೆಗಳು ಬೆಂಬಲಿಸಿದೆ.

English summary
Kannada Film shooting and Film show to be stopped today (June 12th) due to the Karnataka bandh.

ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ - Filmibeat Kannada