»   » ಪಾರ್ವತಮ್ಮ ರಾಜ್ ಕುಮಾರ್ ನಿಧನ ಹಿನ್ನಲೆಯಲ್ಲಿ ಇಂದು ಚಿತ್ರೋದ್ಯಮ ಬಂದ್

ಪಾರ್ವತಮ್ಮ ರಾಜ್ ಕುಮಾರ್ ನಿಧನ ಹಿನ್ನಲೆಯಲ್ಲಿ ಇಂದು ಚಿತ್ರೋದ್ಯಮ ಬಂದ್

Posted By:
Subscribe to Filmibeat Kannada

ಕನ್ನಡ ಚಿತ್ರರಂಗದ ಮಹಾ ತಾಯಿ ನಿರ್ಮಾಪಕಿ ಪಾರ್ವತಮ್ಮ ರಾಜ್ ಕುಮಾರ್ (78) ನಿಧನ ಹಿನ್ನಲೆಯಲ್ಲಿ ಕನ್ನಡ ಚಿತ್ರರಂಗದ ಗಣ್ಯರು ಕಂಬನಿ ಮಿಡಿದಿದ್ದಾರೆ. ಅಲ್ಲದೆ ಇಂದು ಕನ್ನಡ ಚಿತ್ರರಂಗದ ಎಲ್ಲ ಚಟುವಟಿಕೆಗಳು ಸಹ ಬಂದ್ ಆಗಲಿದೆ.

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಸಾ.ರಾ.ಗೋವಿಂದು ಇಂದು ಕನ್ನಡ ಚಿತ್ರರಂಗ ಬಂದ್ ಆಗಲಿದೆ ಅಂತ ಹೇಳಿದ್ದಾರೆ. ''ಇವತ್ತು ಯಾವುದೇ ಸಿನಿಮಾದ ಚಿತ್ರೀಕರಣಗಳು ನಡೆಯುತ್ತಿಲ್ಲ. ಜೊತೆಗೆ ಸಂಜೆ 6 ಗಂಟೆಯವರೆಗೆ ಚಿತ್ರ ಪ್ರದರ್ಶನಗಳನ್ನೂ ಸಹ ಮಾಡದಿರಲು ಪ್ರದರ್ಶಕರಿಗೆ ಮನವಿ ಮಾಡಿಕೊಳ್ಳುತ್ತಿದ್ದೇವೆ'' ಅಂತ ಸಾ.ರಾ.ಗೋವಿಂದು ತಿಳಿಸಿದ್ದಾರೆ.

kannada Film Industry will be bandh due to Parvathamma Rajkumar Death

ಸದಾಶಿವನಗರದ ಪೂರ್ಣಪ್ರಜ್ಞ ಶಾಲೆಗೆ ಇಂದು ರಜೆ ಘೋಷಿಸಲಾಗಿದೆ. ಅಲ್ಲದೆ ಸದಾಶಿವನಗರ ಪ್ರದೇಶದಲ್ಲಿ ಇರುವ ಶಾಲೆಗಳು ಇಂದು ಮುಚ್ಚಲ್ಪಡಲಿದ್ದು, ತಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸುವ ಮೊದಲು ಪೋಷಕರು ಶಾಲಾ ಅಧಿಕಾರಿಗಳೊಂದಿಗೆ ಪರೀಕ್ಷಿಸಬೇಕು ಎಂದು ಅಧಿಕಾರಿಗಳು ಹೇಳಿದ್ದಾರೆ. ಇಂದು ಸಂಜೆ ಕಂಠೀರವ ಸ್ಟುಡಿಯೋದಲ್ಲಿ ಪಾರ್ವತಮ್ಮ ರಾಜ್ ಕುಮಾರ್ ಅವರ ಅಂತ್ಯ ಸಂಸ್ಕಾರ ನಡೆಯಲಿದೆ.

English summary
kannada Film shooting and Exhibition of movies to be stopped today as a mark of respect to Parvathamma Rajkumar Death.

ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ - Filmibeat Kannada