Just In
Don't Miss!
- News
ಉದ್ಯಮಿ ಅಜೀಂ ಪ್ರೇಮ್ಜಿ ವಿರುದ್ಧದ ಪ್ರಕರಣ ರದ್ದು
- Sports
ಐಎಸ್ಎಲ್: ಬೆಂಗಳೂರಿಗೆ ಸೋಲಿನ ಆಘಾತ ನೀಡಿದ ಕೇರಳ ಬ್ಲಾಸ್ಟರ್ಸ್
- Education
WAPCOS Recruitment 2021: 11 ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Finance
ಇಪ್ಪತ್ತು ದಿನದಲ್ಲಿ 47 ಪರ್ಸೆಂಟ್ ನಷ್ಟು ಏರಿಕೆ ಕಂಡ ಟಾಟಾ ಮೋಟಾರ್ಸ್ ಷೇರು
- Automobiles
ಡ್ಯುಯಲ್ ಟೋನ್ ಬಣ್ಣದ ಆಯ್ಕೆಯೊಂದಿಗೆ ರೋಡ್ ಟೆಸ್ಟಿಂಗ್ ನಡೆಸಿದ ಸಿಟ್ರನ್ ಸಿ5 ಏರ್ಕ್ರಾಸ್ ಕಾರು
- Lifestyle
ಯಾವಾಗ ಸಂಗಾತಿಗೆ ಮೋಸ ಮಾಡಿ ಅನೈತಿಕ ಸಂಬಂಧ ಬೆಳೆಸುತ್ತಾರೆ?
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಒಂದೇ ಚಿತ್ರಕ್ಕಾಗಿ ಎಂಟು ಅವತಾರವೆತ್ತಿದ ವಸಿಷ್ಠ ಎನ್ ಸಿಂಹ

ಅಭಿನಯ, ಕಂಚಿನ ಕಂಠದ ಧ್ವನಿಯಿಂದಲೇ ಚಿತ್ರರಂಗದಲ್ಲಿ ಗುರುತಿಸಿಕೊಂಡಿರುವ ನಟ ವಸಿಷ್ಠ ಎನ್ ಸಿಂಹ. ಚಿತ್ರರಂಗಕ್ಕೆ ಬಂದು ಸುಮಾರು ಆರು ವರ್ಷಗಳು ಕಳೆದಿದೆ. 12ಕ್ಕೂ ಹೆಚ್ಚು ಚಿತ್ರದಲ್ಲಿ ಅಭಿನಯಿಸಿರುವ ವಸಿಷ್ಠ ಪ್ರತಿ ಸಿನಿಮಾದಲ್ಲಿಯೂ ವಿಭಿನ್ನವಾಗಿರುವ ಪಾತ್ರವನ್ನೇ ಆಯ್ಕೆ ಮಾಡಿಕೊಳ್ಳುತ್ತಿದ್ದಾರೆ.
ಸದ್ಯ ವಸಿಷ್ಠ ಎನ್ ಸಿಂಹ ಪ್ರೇಕ್ಷಕರ ಮುಂದೆ ಎಂಟು ಅವತಾರದಲ್ಲಿ ಕಾಣಿಸಿಕೊಳ್ಳಲು ಸಜ್ಜಾಗಿದ್ದಾರೆ. ಸುಮಂತ್ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ಕಾಲಚಕ್ರ ಚಿತ್ರದಲ್ಲಿ ವಸಿಷ್ಠ ನಾಯಕನಾಗಿ ಅಭಿನಯಿಸುತ್ತಿದ್ದಾರೆ. ಚಿತ್ರದ ಫಸ್ಟ್ ಲುಕ್ ನಿಂದಲೇ ಸಖತ್ ಕ್ಯೂರಿಯಾಸಿಟಿ ಮೂಡಿಸಿದ್ದ ಕಾಲಚಕ್ರ ಚಿತ್ರತಂಡ ಸದ್ಯ ಸಿನಿಮಾದ ಮೋಷನ್ ಪೋಸ್ಟರ್ ಬಿಡುಗಡೆ ಮಾಡಿದೆ.
ಹೊಸ ಅವತಾರದಲ್ಲಿ ಜನರ ಮುಂದೆ ಬಂದ ನಟ ವಸಿಷ್ಠ ಸಿಂಹ
ಮೋಷನ್ ಪೋಸ್ಟರ್ ಮೂಲಕ ಕುತೂಹಲವನ್ನು ದುಪ್ಪಟ್ಟು ಮಾಡಿರುವ ಕಾಲಚಕ್ರ ಚಿತ್ರತಂಡ ಕಾಲಬದಲಾದಂತೆ ಮನುಷ್ಯ ಆಯಾ ಸಂದರ್ಭಕ್ಕೆ ತಕ್ಕಂತೆ ವರ್ತಿಸಬೇಕಾಗುತ್ತದೆ ಎನ್ನುವುದನ್ನು ಮೋಷನ್ ಪೋಸ್ಟರ್ ಮೂಲಕ ಹೇಳಲು ಹೊರಟಿರುವಂತಿದೆ.
ರಶ್ಮೀ ಫಿಲ್ಮ್ಸ್ ನಿರ್ಮಾಣದಲ್ಲಿ ತಯಾರಾಗಿರುವ ಕಾಲಚಕ್ರ ಚಿತ್ರವನ್ನು ನಾನಿ ಸಿನಿಮಾ ಖ್ಯಾತಿಯ ಸುಮಂತ್ ನಿರ್ದೇಶನ ಮಾಡಿದ್ದಾರೆ. ಚಿತ್ರೀಕರಣ ಮುಗಿಸಿ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಬ್ಯುಸಿ ಆಗಿರುವ ಚಿತ್ರತಂಡ ಜೂನ್ ಅಥವಾ ಜುಲೈನಲ್ಲಿ ಸಿನಿಮಾವನ್ನು ತೆರೆಗೆ ತರುವ ಪ್ರಯತ್ನದಲ್ಲಿದೆ. ಮೋಷನ್ ಪೋಸ್ಟರ್ ಮೂಲಕ ಕಾಲಚಕ್ರ ಪಾರ್ಟ್ 2 ಕೂಡ ಬರಬಹುದು ಎನ್ನುವ ನಿರೀಕ್ಷೆಯನ್ನೂ ಹುಟ್ಟುಹಾಕಿದ್ದಾರೆ.