ದಯಾಳ್ 'ಹಗ್ಗದ ಕೊನೆ'ಗೆ ಫಾಲ್ಕೆ ಚಿತ್ರೋತ್ಸವ ಪ್ರಶಸ್ತಿ

By Rajendra

ದಯಾಳ್ ಪದ್ಮನಾಭನ್ ನಿರ್ದೇಶನದ 'ಹಗ್ಗದ ಕೊನೆ' ಚಿತ್ರ ಈಗಾಗಲೆ ಹಲವಾರು ಪ್ರಶಸ್ತಿ ಪುರಸ್ಕಾರಗಳಿಗೆ ಭಾಜನವಾಗಿದ್ದು, ಇದೀಗ ಮತ್ತೊಂದು ಗರಿಮೆಗೆ ಪಾತ್ರವಾಗಿದೆ. ನವದೆಹಲಿಯಲ್ಲಿ ನಡೆಯುತ್ತಿರುವ '5ನೇ ದಾದಾ ಸಾಹೇಬ್ ಫಾಲ್ಕೆ ಚಿತ್ರೋತ್ಸವ'ದಲ್ಲಿ ಚಿತ್ರ ವಿಶೇಷ ಮನ್ನಣೆಗೆ ಪಾತ್ರವಾಗಿದೆ.

ಉಮೇಶ್ ಬಣಕಾರ್ ನಿರ್ಮಾಣದ ಈ ಚಿತ್ರ ತೀರ್ಪುಗಾರರ ವಿಶೇಷ ಮೆಚ್ಚುಗೆ ಪಡೆದಿದೆ. ಹಗ್ಗದ ಕೊನೆ ಚಿತ್ರ ಈ ಹಿಂದೆ ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವ ಸೇರಿದಂತೆ ದೆಹಲಿ, ಅಮೆರಿಕದ ನಾರ್ತ್ ಕೆರೊಲಿನಾ (ಗ್ಲೋಬಲ್ ಫೆಸ್ಟಿವಲ್), ನೊಯ್ಡಾ, ನಾಸಿಕ್​ಗಳಲ್ಲಿ ನಡೆದ ಚಿತ್ರೋತ್ಸವಗಳಲ್ಲಿ ಪ್ರದರ್ಶನಗೊಂಡು ಚಿತ್ರರಸಿಕರ ಹೃನ್ಮನ ತಣಿಸಿತ್ತು. [ಹಗ್ಗದ ಕೊನೆ ಚಿತ್ರ ವಿಮರ್ಶೆ]

Haggada Kone
ನೋಯ್ಡಾ ಹಾಗೂ ನಾನಿಕ್ ಚಲನಚಿತ್ರೋತ್ಸವಗಳಲ್ಲಿ ಕ್ರಮವಾಗಿ ಅತ್ಯುತ್ತಮ ಚಿತ್ರ ತೀರ್ಪಗಾರರ ಪ್ರಶಸ್ತಿ, ಅತ್ಯುತ್ತಮ ಪ್ರಾದೇಶಿಕ ಚಿತ್ರ ಪ್ರಶಸ್ತಿಗೆ ಭಾಜನವಾಗಿದೆ. ತಾನು ಪ್ರಶಸ್ತಿಗಾಗಿ ಬಯಸುತ್ತಿಲ್ಲ, ಕನ್ನಡದಲ್ಲಿ ಈ ರೀತಿಯ ಚಿತ್ರ ಬಂದಿದೆಯಲ್ಲಾ ಎಂಬುದು ಎಲ್ಲರಿಗೂ ಗೊತ್ತಾಗಬೇಕು. ಹಾಗಾಗಿ ಇನ್ನೂ ಸಾಕಷ್ಟು ಚಿತ್ರೋತ್ಸವಗಳಲ್ಲಿ ಪ್ರದರ್ಶಿಸುತ್ತೇನೆ ಎನ್ನುತ್ತಾರೆ ದಯಾಳ್ ಪದ್ಮನಾಭನ್.

ಖ್ಯಾತ ನಾಟಕಕಾರ ಪರ್ವತವಾಣಿ ಅವರ ಅದೇ ಹೆಸರಿನ ನಾಟಕ ಆಧಾರಿತ ಈ ಚಿತ್ರದಲ್ಲಿ ನವೀನ್ ಕೃಷ್ಣ, ಸುಚೇಂದ್ರ ಪ್ರಸಾದ್, ಮೋಹನ್, ಶ್ರೀನಿವಾಸಮೂರ್ತಿ, ದತ್ತಣ್ಣ, ಸಿಹಿಕಹಿ ಗೀತಾ, ವಿ ಮನೋಹರ್, ಸರಿಗಮ ವಿಜಿ, ಸ್ವಸ್ತಿಕ್ ಶಂಕರ್ ಮುಂತಾದವರು ಅಭಿನಯಿಸಿದ್ದಾರೆ. (ಏಜನ್ಸೀಸ್)

More from Filmibeat

English summary
Kannada movie Haggada Kone bagged the 'Festival Mention Jury' award in the 05th Dada Saheb Phalke festival in New Delhi. The film is a modern-day adaptation of a play of the same name written by Parvathavani, and features Krishna as Channa, a prisoner awaiting his execution.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X