Don't Miss!
- Sports 'ಟಿ20 ವಿಶ್ವಕಪ್ಗೆ ಈತನನ್ನು ಆಯ್ಕೆ ಮಾಡಿ'; ಅಜಿತ್ ಅಗರ್ಕರ್ಗೆ ಬಂತು ದೊಡ್ಡ ಮನವಿ!
- Finance ಡಾ. ರಾಜ್ಕುಮಾರ್ ಜನ್ಮದಿನದಂದು ಹೊಸ ಉದ್ಯಮ ಆರಂಭಿಸಿದ ಅಶ್ವಿನಿ ಪುನೀತ್ ರಾಜ್ಕುಮಾರ್
- Lifestyle ಮಲೆನಾಡ ಶೈಲಿನ ಮೃದುವಾದ ಕಡುಬು ಮಾಡೋದು ಹೇಗೆ.? ಸಿಂಪಲ್ ತಿಂಡಿ ರೆಸಿಪಿ
- News Realme Narzo 70: ಭರ್ಜರಿ ಕ್ಯಾಮೆರಾ ಫೀಚರ್ಗಳೊಂದಿಗೆ ರಿಯಲ್ಮಿ ನಾರ್ಜೊ 70 ಗ್ರ್ಯಾಂಡ್ ಲಾಂಚ್
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ದಯಾಳ್ 'ಹಗ್ಗದ ಕೊನೆ'ಗೆ ಫಾಲ್ಕೆ ಚಿತ್ರೋತ್ಸವ ಪ್ರಶಸ್ತಿ
ದಯಾಳ್ ಪದ್ಮನಾಭನ್ ನಿರ್ದೇಶನದ 'ಹಗ್ಗದ ಕೊನೆ' ಚಿತ್ರ ಈಗಾಗಲೆ ಹಲವಾರು ಪ್ರಶಸ್ತಿ ಪುರಸ್ಕಾರಗಳಿಗೆ ಭಾಜನವಾಗಿದ್ದು, ಇದೀಗ ಮತ್ತೊಂದು ಗರಿಮೆಗೆ ಪಾತ್ರವಾಗಿದೆ. ನವದೆಹಲಿಯಲ್ಲಿ ನಡೆಯುತ್ತಿರುವ '5ನೇ ದಾದಾ ಸಾಹೇಬ್ ಫಾಲ್ಕೆ ಚಿತ್ರೋತ್ಸವ'ದಲ್ಲಿ ಚಿತ್ರ ವಿಶೇಷ ಮನ್ನಣೆಗೆ ಪಾತ್ರವಾಗಿದೆ.
ಉಮೇಶ್ ಬಣಕಾರ್ ನಿರ್ಮಾಣದ ಈ ಚಿತ್ರ ತೀರ್ಪುಗಾರರ ವಿಶೇಷ ಮೆಚ್ಚುಗೆ ಪಡೆದಿದೆ. ಹಗ್ಗದ ಕೊನೆ ಚಿತ್ರ ಈ ಹಿಂದೆ ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವ ಸೇರಿದಂತೆ ದೆಹಲಿ, ಅಮೆರಿಕದ ನಾರ್ತ್ ಕೆರೊಲಿನಾ (ಗ್ಲೋಬಲ್ ಫೆಸ್ಟಿವಲ್), ನೊಯ್ಡಾ, ನಾಸಿಕ್ಗಳಲ್ಲಿ ನಡೆದ ಚಿತ್ರೋತ್ಸವಗಳಲ್ಲಿ ಪ್ರದರ್ಶನಗೊಂಡು ಚಿತ್ರರಸಿಕರ ಹೃನ್ಮನ ತಣಿಸಿತ್ತು. [ಹಗ್ಗದ ಕೊನೆ ಚಿತ್ರ ವಿಮರ್ಶೆ]
ಖ್ಯಾತ ನಾಟಕಕಾರ ಪರ್ವತವಾಣಿ ಅವರ ಅದೇ ಹೆಸರಿನ ನಾಟಕ ಆಧಾರಿತ ಈ ಚಿತ್ರದಲ್ಲಿ ನವೀನ್ ಕೃಷ್ಣ, ಸುಚೇಂದ್ರ ಪ್ರಸಾದ್, ಮೋಹನ್, ಶ್ರೀನಿವಾಸಮೂರ್ತಿ, ದತ್ತಣ್ಣ, ಸಿಹಿಕಹಿ ಗೀತಾ, ವಿ ಮನೋಹರ್, ಸರಿಗಮ ವಿಜಿ, ಸ್ವಸ್ತಿಕ್ ಶಂಕರ್ ಮುಂತಾದವರು ಅಭಿನಯಿಸಿದ್ದಾರೆ. (ಏಜನ್ಸೀಸ್)