twitter
    For Quick Alerts
    ALLOW NOTIFICATIONS  
    For Daily Alerts

    ಕರ್ನಾಟಕ ಬಂದ್‌ಗೆ ಚಿತ್ರರಂಗ ಬೆಂಬಲ: ಡಿಸೆಂಬರ್ 31ಕ್ಕೆ ಚಿತ್ರೀಕರಣ ಇಲ್ಲ

    |

    ಮಹಾರಾಷ್ಟ್ರದಲ್ಲಿ ಕನ್ನಡಿಗರ ಮೇಲೆ ದಬ್ಬಾಳಿಕೆ, ಬೆಳಗಾವಿಯಲ್ಲಿ ಎಂಇಎಸ್ ಪುಂಡರ ಅಟ್ಟಹಾಸ, ಕೊಲ್ಲಾಪುರದಲ್ಲಿ ಕರ್ನಾಟಕ ಧ್ವಜ ಸುಟ್ಟ ಘಟನೆ ಖಂಡಿಸಿ ಡಿಸೆಂಬರ್ 31ಕ್ಕೆ ಕನ್ನಡ ಪರ ಸಂಘಟನೆಗಳು ರಾಜ್ಯ ಬಂದ್‌ಗೆ ಕರೆ ನೀಡಲಾಗಿದ್ದು, ಇದಕ್ಕೆ ಚಿತ್ರರಂಗವೂ ಬೆಂಬಲ ಸೂಚಿಸಿದೆ.

    ಡಿಸೆಂಬರ್ 31 ರಂದು ಚಿತ್ರೀಕರಣ ಸೇರಿದಂತೆ ಚಿತ್ರರಂಗದ ಎಲ್ಲ ಚಟುವಟಿಕೆಗಳು ಬಂದ್ ಆಗಿರಲಿವೆ ಎಂದು ನಿರ್ಮಾಪಕ, ಚಲನಚಿತ್ರ ವಾಣಿಜ್ಯ ಮಂಡಳಿ ಮುಖಂಡ ಸಾ.ರಾ.ಗೋವಿಂದು ಹೇಳಿದ್ದಾರೆ.

    ಇಂದು ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಸಭೆ ಸೇರಿದ್ದ ಕನ್ನಡಪರ ಸಂಘಟನೆಗಳು ಡಿಸೆಂಬರ್ 31 ಕ್ಕೆ ಕರ್ನಾಟಕ ಬಂದ್‌ಗೆ ಕರೆ ಕೊಟ್ಟಿದ್ದು, ಚಿತ್ರರಂಗವೂ ಸಹ ಡಿಸೆಂಬರ್ 31 ರಂದು ತನ್ನೆಲ್ಲ ಚಟುವಟಿಕೆಗಳನ್ನು ಸ್ಥಗಿತಗೊಳಿಸಿ ಬಂದ್‌ಗೆ ಬೆಂಬಲ ನೀಡುವುದಾಗಿ ಹೇಳಿದ್ದಾರೆ.

    Kannada Movie Industry Supporting Karnataka Bandh called On December 31

    ಕರ್ನಾಟಕ ಧ್ವಜವನ್ನು ಸುಟ್ಟ ವಿಚಾರವಾಗಿ ದ್ವನಿ ಎತ್ತಿದ ಮೊದಲಿಗರಲ್ಲಿ ಕನ್ನಡ ಚಿತ್ರರಂಗ ಸಹ ಒಂದಾಗಿದೆ. ಜಗ್ಗೇಶ್, ಶಿವರಾಜ್ ಕುಮಾರ್ ಅವರು ಟ್ವೀಟ್ ಮಾಡುವ ಮೂಲಕ ಕನ್ನಡ ಧ್ವಜ ಸುಟ್ಟ ಘಟನೆಯನ್ನು ತೀವ್ರವಾಗಿ ಖಂಡಿಸಿದ್ದರು. ಆ ನಂತರ ಈ ವಿಷಯ ಇನ್ನಷ್ಟು ಪ್ರಖರವಾಗುತ್ತಾ ಹೋಗಿ ಪ್ರತಿಭಟನೆಗಳು ನಡೆದು, ವಿಧಾನಸಭೆಯಲ್ಲಿ ಚರ್ಚೆಯಾಗಿ ಇದೀಗ ಬಂದ್ ವರೆಗೆ ಬಂದಿದೆ.

    ಡಿಸೆಂಬರ್ 31ರ ಕರ್ನಾಟಕ ಬಂದ್‌ಗೆ ಈಗಾಗಲೇ ಹಲವು ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿದೆ.ಸಾರಾ ಗೋವಿಂದು ಹೇಳಿರುವಂತೆ ಚಿತ್ರರಂಗ ಸಹ ಬಂದ್‌ಗೆ ಬೆಂಬಲ ವ್ಯಕ್ತಪಡಿಸಿದೆ. ಚಿತ್ರಮಂದಿರಗಳ ಮಾಲೀಕರ ಸಂಘವು ಸಹ ಬಂದ್‌ಗೆ ಬೆಂಬಲ ನೀಡುವ ಸಾಧ್ಯತೆ ಇದೆ. ಅವರ ನಿರ್ಣಯ ಇನ್ನಷ್ಟೆ ಹೊರಬೀಳಬೇಕಿದೆ.

    ಕರ್ನಾಟಕ ಧ್ವಜ ಸುಟ್ಟ ಘಟನೆಯನ್ನು ಉಗ್ರವಾಗಿ ಖಂಡಿಸಿದ್ದ ನಟ ಶಿವರಾಜ್ ಕುಮಾರ್, ''ಧ್ವಜ ಸುಡುವುದು ತಾಯಿಯನ್ನು ಸುಟ್ಟಂತೆ. ಆ ಘಟನೆ ನೋಡಿ ಮನಸ್ಸಿಗೆ ಬಹಳ ಬೇಸರವಾಯಿತು. ಭಾಷೆಯ ವಿಚಾರಕ್ಕೆ ನನ್ನ ಪ್ರಾಣ ಬೇಕಾದರೂ ಹೋಗಲಿ'' ಎಂದು ಉದ್ವೇಗದಿಂದ ಮಾತನಾಡಿದ್ದರು.

    ಶಿವರಾಜ್ ಕುಮಾರ್ ಟ್ವೀಟ್ ನಂತರ ನಟ ದರ್ಶನ್, ಶ್ರೀಮುರಳಿ, ಡಾಳಿ ಧನಂಜಯ್ ಇನ್ನೂ ಹಲವಾರು ಮಂದಿ ನಟ-ನಟಿಯರು ಧ್ವಜ ಸುಟ್ಟ ಘಟನೆಯನ್ನು ತೀವ್ರವಾಗಿ ಖಂಡಿಸಿದ್ದರು. ಕರ್ನಾಟಕದ ಅಸ್ಮಿತೆಗೆ ಧಕ್ಕೆ ತರುವಂಥ ಘಟನೆಗಳು ನಡೆದಾಗ ನೇರ ಹೋರಾಟಕ್ಕೆ ಧುಮುಕಲು ಸಿದ್ಧವೆಂದು ಕೆಲವು ನಟರು ಹೇಳಿದ್ದಾರೆ.

    English summary
    Sa Ra Govindu said Kannada movie industry is supporting Karnataka bandh which is happening on December 31.
    Wednesday, December 22, 2021, 14:46
    IIFA

    Kannada Photos

    Go to : More Photos
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X
    X