For Quick Alerts
  ALLOW NOTIFICATIONS  
  For Daily Alerts

  ಚಿತ್ರೀಕರಣ ಮುಗಿಸಿದ 'ನ್ಯೂರಾನ್' ರಿಲೀಸ್ ಯಾವಾಗ.?

  |

  ವಿಭಿನ್ನ ಶೀರ್ಷಿಕೆಯ ಮೂಲಕವೇ ಸ್ಯಾಂಡಲ್ ವುಡ್ ನಲ್ಲಿ ಕುತೂಹಲ ಕೆರಳಿಸಿರುವ ಸಿನಿಮಾ 'ನ್ಯೂರಾನ್'. ವಿನಯ್ ಕುಮಾರ್ ನಿರ್ಮಿಸುತ್ತಿರುವ ನ್ಯೂರಾನ್ ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ಸದ್ಯ ಆಕಾಶ್ ರೆಕಾರ್ಡಿಂಗ್ ಸ್ಟುಡಿಯೋದಲ್ಲಿ ಮಾತಿನ ಜೋಡಣೆ ನಡೆಯುತ್ತಿದೆ.

  ಬೆಂಗಳೂರು, ಸಕಲೇಶಪುರ, ಮಡಿಕೇರಿ ಮುಂತಾದ ಕಡೆ 'ನ್ಯೂರಾನ್' ಚಿತ್ರೀಕರಣ ನಡೆದಿದೆ. ಏಪ್ರಿಲ್ ವೇಳೆಗೆ ಚಿತ್ರ ತೆರೆಗೆ ಬರಲಿದೆ.

  ನೈಜ ಘಟನೆ ಆಧಾರಿತ ಹಾಗೂ ಸಸ್ಪೆನ್ಸ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ ವಿಕಾಸ್ ಪುಷ್ಪಗಿರಿ. ಇದು ಅವರಿಗೆ ಚೊಚ್ಚಲ ನಿರ್ದೇಶನದ ಚಿತ್ರ.

  ಯುವ ಈ ಚಿತ್ರದ ಮೂಲಕ ನಾಯಕ ನಟನಾಗಿ ಚಿತ್ರರಂಗಕ್ಕೆ ಪರಿಚಯವಾಗುತ್ತಿದ್ದಾರೆ. ಇನ್ನುಳಿದಂತೆ ನೇಹಾ ಪಾಟೀಲ್ ನಾಯಕಿಯಾಗಿ ಕಾಣಿಸಿಕೊಂಡಿದ್ಧಾರೆ. ವೈಷ್ಣವಿ ಮೆನನ್ ಪ್ರಮುಖ ಪಾತ್ರದಲ್ಲಿದ್ದಾರೆ. ಜೈಜಗದೀಶ್, ಶಿಲ್ಪಾ ಶೆಟ್ಟಿ, ವರ್ಷ, ಅರವಿಂದ್ ರಾವ್, ಕಬೀರ್ ಸಿಂಗ್(ಬಾಂಬೆ), ರಾಕ್ ಲೈನ್ ಸುಧಾಕರ್, ಕಾರ್ತಿಕ್ ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ.

  ಗುರುಕಿರಣ್ ಸಂಗೀತ ನಿರ್ದೇಶನವಿರುವ ಈ ಚಿತ್ರಕ್ಕೆ ಹೈದರಾಬಾದ್ ನ ಶೋಯೆಬ್ ಅಹಮದ್ ಛಾಯಾಗ್ರಹಣ, ಶ್ರೀಧರ್ ಸಂಕಲನ, ಥ್ರಿಲ್ಲರ್ ಮಂಜು ಸಾಹಸ ನಿರ್ದೇಶನ ಹಾಗೂ ಶಿವಕುಮಾರ್ ಅವರ ಕಲಾ ನಿರ್ದೇಶನವಿದೆ. ವಿ.ನಾಗೇಂದ್ರ ಪ್ರಸಾದ್ ಚಿತ್ರದ ಹಾಡುಗಳನ್ನು ರಚಿಸಿದ್ದಾರೆ. ಶ್ರೀಹರ್ಷ ಸಂಭಾಷಣೆ ಬರೆದಿದ್ದಾರೆ.

  English summary
  Yuva and Neha Patil starrer Kannada Movie Neuron shooting completed.

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X