For Quick Alerts
  ALLOW NOTIFICATIONS  
  For Daily Alerts

  BREAKING: ಹಿರಿಯ ನಿರ್ಮಾಪಕ ಬಿ.ವಿಜಯ್ ಕುಮಾರ್ ನಿಧನ

  |

  ಚಂದನವನದ ಹಿರಿಯ ನಿರ್ಮಾಪಕ, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಮಾಜಿ ಅಧ್ಯಕ್ಷ ಬಿ.ವಿಜಯ್ ಕುಮಾರ್ ಹೃದಯಾಘಾತದಿಂದ ನಿಧನರಾಗಿದ್ದಾರೆ.

  ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ವಿಜಯ್ ಕುಮಾರ್ ಕನ್ನಡದ ಹಲವು ಸಿನಿಮಾಗಳನ್ನು ನಿರ್ಮಿಸಿದ್ದರು. ವಿಷ್ಣುವರ್ಧನ್‌ಗೆ ಆಪ್ತರಾಗಿದ್ದ ವಿಜಯ್ ಕುಮಾರ್ ಸೂಪರ್ ಹಿಟ್ ಸಿನಿಮಾ 'ಸಿಂಹಾದ್ರಿಯ ಸಿಂಹ', 'ಲಯನ್ ಜಗಪತಿರಾವ್', 'ಸ್ವಚ್ಛ ಭಾರತ' ಸಿನಿಮಾ ಸೇರಿ ಇನ್ನೂ ಕೆಲವು ಸಿನಿಮಾ ನಿರ್ಮಾಣ ಮಾಡಿದ್ದರು.

  ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾಗಿದ್ದ ಸಂದರ್ಭದಲ್ಲಿಯೂ ಸಾಕಷ್ಟು ಉತ್ತಮ ಕಾರ್ಯಗಳನ್ನು ಮಾಡಿ ಗಮನ ಸೆಳೆದಿದ್ದರು.

  ವಿಜಯ್‌ ಕುಮಾರ್ ಅವರ ಜಯನಗರದ ನಿವಾಸಕ್ಕೆ ಪಾರ್ಥಿವ ಶರೀರ ರವಾನೆ ಮಾಡಿದ್ದು ಕೊರೊನಾ ಕಾರಣದಿಂದಾಗಿ ಕೆಲರಿಗಷ್ಟೆ ಅಂತಿಮ ಸಂಸ್ಕಾರಕ್ಕೆ ಅನುಮತಿ ನೀಡಲಾಗಿದೆ.

  English summary
  Kannada movie producer B Vijya Kumar passed away. He produced Simhadria Simha, Lion JagapatiRao and many more movies.

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X