ಈ ವಾರ ಕನ್ನಡದಲ್ಲಿ ನಾಲ್ಕು ಹೊಸ ಸಿನಿಮಾಗಳು ಬಿಡುಗಡೆ

ಸ್ಯಾಂಡಲ್‌ವುಡ್‌ನಲ್ಲಿ ಹಳೆಯ ದಿನಗಳು ಮತ್ತೆ ಬರ್ತಿದೆ. ಪ್ರತಿವಾರವೂ ಮೂರ್ನಾಲ್ಕು ಹೊಸ ಸಿನಿಮಾಗಳು ಚಿತ್ರಮಂದಿರಕ್ಕೆ ಲಗ್ಗೆಯಿಡ್ತಿದೆ. ಈ ವಾರ ನಾಲ್ಕು ಹೊಸ ಚಿತ್ರಗಳು ಥಿಯೇಟರ್‌ಗೆ ಎಂಟ್ರಿ ಕೊಡ್ತಿದೆ.

ಈ ನಾಲ್ಕು ಚಿತ್ರಗಳು ತಮ್ಮದೇ ವಿಭಿನ್ನ ಶೈಲಿಯಲ್ಲಿ ಪ್ರೇಕ್ಷಕರನ್ನು ರಂಜಿಸಲು ತಯಾರಾಗಿದೆ. ಅದರಲ್ಲಿ ಪ್ರಮುಖ ಸಿನಿಮಾ ವಿನೋದ್ ಪ್ರಭಾಕರ್ ನಟನೆಯ ಶ್ಯಾಡೋ.

ಮರಿಟೈಗರ್ ವಿನೋದ್ ಪ್ರಭಾಕರ್ ನಟನೆಯ ಶ್ಯಾಡೋ ಸಿನಿಮಾ ಈ ವಾರ ರಾಜ್ಯಾದ್ಯಂತ ರಿಲೀಸ್ ಆಗುತ್ತಿದೆ. ರವಿ ಗೌಡ ನಿರ್ದೇಶನದ ಈ ಚಿತ್ರದಲ್ಲಿ ವಿನೋದ್ ಪ್ರಭಾಕರ್ ಜೊತೆ ಶೋಭಿತಾ ರಾಣಾ ನಾಯಕಿಯಾಗಿ ನಟಿಸಿದ್ದಾರೆ.

Kannada Movies Releasing This Week (5 February 2021)

ಅಚ್ಚು ಅವರು ಸಂಗೀತ ಒದಗಿಸಿದ್ದು, ಮನೋಹರ್ ಜೋಶಿ ಛಾಯಾಗ್ರಹಣ, ಛೋಟಾ ಕೆ ಪ್ರಸಾದ್ ಸಂಕಲನ ಹಾಗೂ ವಿನೋದ್ ಅವರ ಸಾಹಸ ನಿರ್ದೇಶನವಿದೆ. ಚಕ್ರವರ್ತಿ ಸಿ.ಹೆಚ್‌ ಈ ಚಿತ್ರಕ್ಕೆ ಬಂಡವಾಳ ಹಾಕಿದ್ದು, ಶರತ್ ಲೋಹಿತಾಶ್ವ, ಶ್ರೀಗಿರಿ, ಗಿರಿಶಾಮ್, ಸತ್ಯದೇವ್, ಸಿರಿ ಸೇರಿದಂತೆ ಹಲವರು ನಟಿಸಿದ್ದಾರೆ.

ಬಿಗ್ ಬಾಸ್ ಖ್ಯಾತಿಯ ಚಂದನ್ ಆಚಾರ್ ನಾಯಕನಾಗಿ ನಟಿಸಿರುವ 'ಮಂಗಳವಾರ ರಜಾದಿನ' ಸಿನಿಮಾ ಈ ವಾರ ತೆರೆಗೆ ಬರ್ತಿದೆ. ಕ್ಷೌರಿಕನ ಸುತ್ತ ಇಡೀ ಕಥೆ ಹೆಣೆದಿದ್ದು, ಭರಪೂರ ಮನರಂಜನೆ ದೊರೆಯಲಿದೆಯಂತೆ.

Kannada Movies Releasing This Week (5 February 2021)

ಚಂದನ್ ಆಚಾರ್, ಲಾಸ್ಯ ನಾಗರಾಜ್, ಜಹಾಂಗೀರ್, ಹರಿಣಿ ಮತ್ತು ರಜನಿಕಾಂತ್ ಸೇರಿದಂತೆ ಹಲವರು ಈ ಚಿತ್ರದಲ್ಲಿ ನಟಿಸಿದ್ದಾರೆ.

ಹೊಸಬರು ನಟಿಸಿರುವ ಮಾಂಜ್ರಾ ಎಂಬ ಸಿನಿಮಾನೂ ಈ ವಾರ ತೆರೆಗೆ ಬರ್ತಿದೆ ಎಂಬ ಮಾಹಿತಿ ಇದೆ. ಆದರೆ, ಈ ಚಿತ್ರದ ಬಗ್ಗೆ ಪ್ರಚಾರ ಇರದ ಕಾರಣ ಅಷ್ಟಾಗಿ ಸದ್ದು ಮಾಡಿಲ್ಲ. ಈ ಮೂರು ಚಿತ್ರಗಳ ಜೊತೆ ಪ್ರಜ್ವಲ್ ದೇವರಾಜ್ ನಟನೆಯ ಚಿತ್ರವೂ ರಿಲೀಸ್ ಆಗುತ್ತಿದೆ.

More from Filmibeat

English summary
inspector vikram, mangalavara rajaadina, manjra and Shadow releasing this week.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X