Shivarajkumar: ಶಿವಣ್ಣನ ಆರೋಗ್ಯದಲ್ಲಿ ವ್ಯತ್ಯಯ.. ಆತಂಕದಲ್ಲಿದ್ದ ಫ್ಯಾನ್ಸ್‌ಗೆ ವೈದ್ಯರು ಕೊಟ್ಟ ಮಾಹಿತಿ ಏನು?

ಸೆಂಚುರಿ ಸ್ಟಾರ್ ಶಿವರಾಜ್‌ಕುಮಾರ್ 61ನೇ ವಯಸ್ಸಿನಲ್ಲೂ ಎನರ್ಜಿಟಿಕ್ ಆಗಿರೋ ನಟ. ಈ ವಯಸ್ಸಿನಲ್ಲಿಯೂ ಶಿವಣ್ಣ ಆಕ್ಷನ್ ಸೀನ್‌ಗಳಲ್ಲಿ ನಿರಾಯಾಸವಾಗಿ ನಟಿಸುತ್ತಾರೆ. ಸಖತ್ ಆಗಿಯೇ ಹೆಜ್ಜೆ ಹಾಕುತ್ತಾರೆ. ಹೀಗೆ ಆಕ್ಟೀವ್ ಆಗಿರುವ ನಟ ಆರೋಗ್ಯ ವ್ಯತ್ಯಯದಿಂದ ಶಿವರಾಜ್‌ಕುಮಾರ್‌ ಆಸ್ಪತ್ರೆಗೆ ಹೋಗಿದ್ದರು.

ಶಿವಣ್ಣ ಆಸ್ಪತ್ರೆಗೆ ಹೋಗುತ್ತಿದ್ದಂತೆ ಇತ್ತ ಅವರ ಅಭಿಮಾನಿಗಳು ಆತಂಕಕ್ಕೆ ಒಳಗಾಗಿದ್ದರು. ಆದರೆ, ಶಿವಣ್ಣನ ಆರೋಗ್ಯದ ಬಗ್ಗೆ ವೈದ್ಯರು ಮಾಹಿತಿ ನೀಡುತ್ತಿದ್ದಂತೆ ನಿರಾಳರಾಗಿದ್ದಾರೆ. ಅಂದ್ಹಾಗೆ, ಶಿವರಾಜ್‌ಕುಮಾರ್ ಜ್ವರದಿಂದ ಬಳಲುತ್ತಿದ್ದಾರೆ. ಹೀಗಾಗಿ ಆಸ್ಪತ್ರೆಗೆ ದಾಖಲಾಗಿದ್ದರು ಎಂದು ವೈದ್ಯರು ಮಾಹಿತಿ ನೀಡಿದ್ದಾರೆ.

shivarajkumar-suffering-from-fever

ಕೆಲವು ದಿನಗಳಿಂದ ಶಿವಣ್ಣನ ಆರೋಗ್ಯದಲ್ಲಿ ಏರುಪೇರಾಗಿತ್ತು. ಆದರೆ, ಇಂದು (ನವೆಂಬರ್ 3) ಶಿವರಾಜ್‌ಕುಮಾರ್ ಹೆಚ್ಚು ಸುಸ್ತಾಗಿದ್ದರಿಂದ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಬಂದು ಚಿಕಿತ್ಸೆ ಕೊಡಿಸಲಾಗಿದೆ. ಬೆಂಗಳೂರಿನ ವೈದೇಹಿ ಆಸ್ಪತ್ರೆಯಲ್ಲಿ ಶಿವಣ್ಣನಿಗೆ ತಜ್ಞ ವೈದ್ಯರು ಚಿಕಿತ್ಸೆ ನೀಡಿದ್ದಾರೆ. ಜ್ವರದ ಜೊತೆಗೆ ಸಾಮಾನ್ಯ ಆರೋಗ್ಯ ತಪಾಸಣೆ ಕೂಡ ಮಾಡಿದ್ದಾರೆ ಎನ್ನಲಾಗಿದೆ.

ಜ್ವರಕ್ಕೆ ಸಂಬಂಧಿಸಿದಂತೆ ಚಿಕಿತ್ಸೆ ಪಡೆದ ಬಳಿಕ ಶಿವರಾಜ್‌ಕುಮಾರ್ ಅವರನ್ನು ಮಧ್ಯಾಹ್ನವೇ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ. ಸದ್ಯ ಶಿವಣ್ಣ ಮನೆಯಲ್ಲಿಯೇ ವಿಶ್ರಾಂತಿ ಪಡೆಯುತ್ತಿದ್ದಾರೆ. ಹೀಗಾಗಿ ಅಭಿಮಾನಿಗಳು ಆತಂಕ ಪಡೆಬೇಕಾದ ಅಗತ್ಯವಿಲ್ಲ ಎಂದು ವೈದ್ಯರೇ ಮಾಧ್ಯಮಗಳಿಗೆ ಮಾಹಿತಿಯನ್ನು ನೀಡಿದ್ದಾರೆ.

ಕೆಲವು ವರ್ಷಗಳ ಹಿಂದೆ ಶಿವಣ್ಣನಿಗೆ ಹೃದಯ ಸಂಬಂಧಿ ಸಮಸ್ಯೆ ಎದುರಾಗಿತ್ತು. ಹೀಗಾಗಿ ಶಸ್ತ್ರಚಿಕಿತ್ಸೆಗೂ ಒಳಗಾಗಿದ್ದರು. ಬೆಂಗಳೂರಿನ ಮಲ್ಯ ಆಸ್ಪತ್ರೆಯಲ್ಲಿ ಶಸ್ತ್ರ ಚಿಕಿತ್ಸೆ ಪಡೆದು ಕೆಲ ದಿನ ವೈದ್ಯರ ಸಲಹೆ ಮೇರೆಗೆ ಅಲ್ಲೇ ಇದ್ದರು. ಆ ವೇಳೆ ಅಭಿಮಾನಿಗಳು ಆಸ್ಪತ್ರೆ ಮುಂದೆ ಆತಂಕದಿಂದ ಜಮಾಯಿಸಿದ್ದರು.

ಇನ್ನೊಂದು ಸಂದರ್ಭದಲ್ಲಿ ಶಿವಣ್ಣ ಭುಜ ನೋವಿನಿಂದ ಬಳಲುತ್ತಿದ್ದರು. ಬಲಭುಜದ ನೋವು ಹೆಚ್ಚಾಗಿದ್ದರಿಂದ ಶೂಟಿಂಗ್‌ಗೆ ಬ್ರೇಕ್ ಕೊಟ್ಟು ಶಸ್ತ್ರ ಚಿಕಿತ್ಸೆಗೆಂದು ಲಂಡನ್‌ಗೆ ತೆರಳಿದ್ದರು. ಆ ಸಂದರ್ಭದಲ್ಲಿ ತಮ್ಮ 57ನೇ ಹುಟ್ಟುಹಬ್ಬವನ್ನೂ ಆಚರಿಸಿಕೊಂಡಿರಲಿಲ್ಲ. ಕೆಲವು ದಿನ ಲಂಡನ್‌ನಲ್ಲಿ ಚಿಕಿತ್ಸೆ ಪಡೆದ ಬಳಿಕ ಬೆಂಗಳೂರಿಗೆ ಹಿಂತಿರುಗಿದ್ದರು.

ಶಿವರಾಜ್‌ಕುಮಾರ್ ಸದ್ಯ ಯಶಸ್ಸಿನ ಅಲೆಯಲ್ಲಿ ತೇಲುತ್ತಿದ್ದಾರೆ. 'ಜೈಲರ್' ಸಿನಿಮಾದ ಚಿಕ್ಕದೊಂದು ಪಾತ್ರ ತಮಿಳುನಾಡಿನಲ್ಲಿಯೂ ಜನಪ್ರಿಯ ನಟನನ್ನಾಗಿ ಮಾಡಿತ್ತು. ಇನ್ನು ಇತ್ತೀಚೆಗೆ ತೆರೆಕಂಡಿರೋ 'ಘೋಸ್ಟ್' ಸಿನಿಮಾ ಕೂಡ ಬಾಕ್ಸಾಫೀಸ್‌ನಲ್ಲಿ ಉತ್ತಮ ಗಳಿಕೆಯನ್ನು ಕಂಡಿದೆ.

ಸದ್ಯ ಶಿವರಾಜ್‌ಕುಮಾರ್ 'ಮಫ್ತಿ' ನಿರ್ದೇಶಕ ನರ್ತನ್ ಆಕ್ಷನ್ ಕಟ್ ಹೇಳುತ್ತಿರುವ 'ಬೈರತಿ ರಣಗಲ್' ಸಿನಿಮಾದ ಶೂಟಿಂಗ್‌ನಲ್ಲಿ ಬ್ಯುಸಿಯಾಗಿದ್ದಾರೆ. ಒಂದರ ಹಿಂದೊಂದು ಸಿನಿಮಾಗಳಲ್ಲಿ ನಟಿಸುತ್ತಿರುವ ಶಿವಣ್ಣ ಸಿಕ್ಕಾಪಟ್ಟೆ ಬ್ಯುಸಿಯಾಗಿದ್ದಾರೆ. ಇದರೊಂದಿಗೆ 'ಜೈಲರ್' ಬಳಿಕ ತಮಿಳು ಸಿನಿಮಾಗಳಿಗೂ ಆಫರ್ ಬಂದಿದ್ದು, ಅಲ್ಲೂ ಕೆಲವು ಸಿನಿಮಾಗಳಿಗೆ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ. ಹೀಗಾಗಿ ಮುಂದಿನ ದಿನಗಳಲ್ಲಿ ಕನ್ನಡ ಹಾಗೂ ತಮಿಳು ಎರಡೂ ಭಾಷೆಯ ಸಿನಿಮಾಗಳಲ್ಲೂ ಬ್ಯುಸಿಯಾಗಿದ್ದಾರೆ.

More from Filmibeat

English summary
Kannada News: Shivarajkumar rushed to hospital to took treatment fans got tensed
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X