ಮಣ್ಣಲ್ಲಿ ಮಣ್ಣಾದ ಕನ್ನಡ ಚಿತ್ರರಂಗದ 'ವಜ್ರೇಶ್ವರಿ' ಪಾರ್ವತಮ್ಮ ರಾಜ್ ಕುಮಾರ್

By Harshitha

ಕನ್ನಡ ಚಿತ್ರರಂಗದ ಪಾಲಿನ 'ಅಮ್ಮ'... ವರನಟ ಡಾ.ರಾಜ್ ಕುಮಾರ್ ರವರ ಧರ್ಮಪತ್ನಿ... ಕನ್ನಡ ಚಲನಚಿತ್ರ ನಿರ್ಮಾಪಕಿ... ವಿತರಕಿ... ಚಂದನವನದ 'ವಜ್ರೇಶ್ವರಿ'... ಪಾರ್ವತಮ್ಮ ರಾಜ್ ಕುಮಾರ್ ರವರ ಅಂತ್ಯ ಸಂಸ್ಕಾರ ಇಂದು ಸಂಜೆ 5.30 ರ ಸುಮಾರಿಗೆ ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿ ನೆರವೇರಿತು.

ಕುಟುಂಬಸ್ಥರ ರೋಧನ, ಶೋಕತಪ್ತ ಸಾವಿರಾರು ಜನರ ಮಧ್ಯೆ ಹಿಂದು ಸಂಪ್ರದಾಯದಂತೆ, ದಾಸಯ್ಯ ಪದ್ಧತಿಯಂತೆ, ಸಕಲ ಸರ್ಕಾರಿ ಗೌರವಗಳೊಂದಿಗೆ ಪಾರ್ವತಮ್ಮ ರಾಜ್ ಕುಮಾರ್ ರವರ ಅಂತ್ಯಕ್ರಿಯೆ ನಡೆಯಿತು.

kannada-producer-parvathamma-rajkumar-cremation

ಅಂತಿಮ ವಿಧಿ ವಿಧಾನಗಳನ್ನ ಕಿರಿಯ ಪುತ್ರ ಪುನೀತ್ ರಾಜ್ ಕುಮಾರ್ ನೆರವೇರಿಸಿದರು. ಕಂಠೀರವ ಸ್ಟುಡಿಯೋದಲ್ಲಿ ಇರುವ ಪತಿ ಡಾ.ರಾಜ್ ಕುಮಾರ್ ಸಮಾಧಿಯ ಪಕ್ಕದಲ್ಲಿಯೇ ಪತ್ನಿ ಪಾರ್ವತಮ್ಮ ರಾಜ್ ಕುಮಾರ್ ಮಣ್ಣಲ್ಲಿ ಮಣ್ಣಾದರು.[ಡಾ.ರಾಜ್ ಸಮಾಧಿ ಪಕ್ಕದಲ್ಲಿಯೇ ಪತ್ನಿ ಪಾರ್ವತಮ್ಮ ಅಂತ್ಯಕ್ರಿಯೆ]

ಬ್ರೆಸ್ಟ್ ಕ್ಯಾನ್ಸರ್ ಹಾಗೂ ಬಹುಅಂಗಾಗ ವೈಫಲ್ಯದಿಂದ ಬಳಲುತ್ತಿದ್ದ ಪಾರ್ವತಮ್ಮ ರಾಜ್ ಕುಮಾರ್ ಇಂದು ಮುಂಜಾನೆ 4.40ರ ಸುಮಾರಿಗೆ ಹೃದಯಾಘಾತದಿಂದ ಕೊನೆಯುಸಿರೆಳೆದರು.[ಆರಿದ 'ದೊಡ್ಮನೆ' ದೀಪ: ನಿರ್ಮಾಪಕಿ ಪಾರ್ವತಮ್ಮ ರಾಜ್ ಕುಮಾರ್ ಇನ್ನಿಲ್ಲ]

kannada-producer-parvathamma-rajkumar-cremation

ಬೆಂಗಳೂರಿನ ಸದಾಶಿವನಗರದಲ್ಲಿರುವ ಅವರ ನಿವಾಸದಲ್ಲಿಯೇ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಕರ್ನಾಟಕ ರಾಜ್ಯ ಮುಖ್ಯಮಂತ್ರಿ ಸಿದ್ಧರಾಮಯ್ಯ ಸೇರಿದಂತೆ ಹಲವು ರಾಜಕೀಯ ಗಣ್ಯರು, ರೆಬೆಲ್ ಸ್ಟಾರ್ ಅಂಬರೀಶ್, ರಿಯಲ್ ಸ್ಟಾರ್ ಉಪೇಂದ್ರ, ಜಯಂತಿ, ಉಮಾಶ್ರೀ, ತಾರಾ, ಬಿ.ಸರೋಜ ದೇವಿ ಸೇರಿದಂತೆ ಅನೇಕ ತಾರೆಯರು, ಸಾವಿರಾರು ಜನರು ಪಾರ್ವತಮ್ಮ ರಾಜ್ ಕುಮಾರ್ ರವರ ಪಾರ್ಥೀವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿದರು.['ಶ್ರೇಷ್ಠ ಹೆಣ್ಣು' ಪಾರ್ವತಮ್ಮ ರನ್ನ ನೆನೆದು ಕಣ್ಣೀರಿಟ್ಟ ಹಿರಿಯ ನಟಿ ಲೀಲಾವತಿ]

kannada-producer-parvathamma-rajkumar-cremation

ಮಧ್ಯಾಹ್ನ 3.30ರ ಸುಮಾರಿಗೆ ಸದಾಶಿವನಗರದ ನಿವಾಸದಲ್ಲಿ ಸಾಂಪ್ರದಾಯಿಕ ವಿಧಿ ವಿಧಾನ ನೆರವೇರಿಸಿದ ಬಳಿಕ ಅಂತಿಮ ಯಾತ್ರೆ ಆರಂಭಗೊಂಡಿತು. ಸದಾಶಿವನಗರದಿಂದ ಮೇಖ್ರಿ ಸರ್ಕಲ್, ಯಶವಂತಪುರ, ಗೊರಗುಂಟೆ ಪಾಳ್ಯ ಮಾರ್ಗವಾಗಿ ಕಂಠೀರವ ಸ್ಟುಡಿಯೋವರೆಗೆ ಅಂತಿಮ ಯಾತ್ರೆ ಸಾಗಿತು.[ಪಾರ್ವತಮ್ಮ ಪಾರ್ಥೀವ ಶರೀರದ ಅಂತಿಮ ಯಾತ್ರೆ ಆರಂಭ]

ಕಂಠೀರವ ಸ್ಟುಡಿಯೋ ಒಳಗೆ ಡಾ.ರಾಜ್ ಕುಟುಂಬಸ್ಥರು, ಆಪ್ತರಿಗೆ ಮಾತ್ರ ಪ್ರವೇಶ ನೀಡಲಾಗಿತ್ತು. ಸಾರ್ವಜನಿಕರಿಗೆ ಕಂಠೀರವ ಸ್ಟುಡಿಯೋ ಒಳಗೆ ಪ್ರವೇಶ ನಿರ್ಬಂಧಿಸಲಾಗಿತ್ತು. ಆದರೂ ಸಹಸ್ರ ಸಂಖ್ಯೆಯಲ್ಲಿ ಸಾರ್ವಜನಿಕರು ಸೇರಿದ್ದರಿಂದ ಪೊಲೀಸರು ಹರಸಾಹಸ ಪಡಬೇಕಾಯಿತು.

kannada-producer-parvathamma-rajkumar-cremation

ದಾಸಯ್ಯ ಪದ್ಧತಿಯಂತೆ ಪಾರ್ವತಮ್ಮ ರಾಜ್ ಕುಮಾರ್ ರವರ ಪಾರ್ಥೀವ ಶರೀರಕ್ಕೆ ಕಿರಿಯ ಪುತ್ರ ಪುನೀತ್ ರಾಜ್ ಕುಮಾರ್ ಪೂಜೆ ಪುನಸ್ಕಾರ ಸಲ್ಲಿಸಿದ ಬಳಿಕ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಯಿತು.[ಪತಿಯ ಹಾದಿಯಲ್ಲಿ ಪತ್ನಿ: ಅಂಧರ ಬಾಳಲ್ಲಿ ಹೊಸಬೆಳಕು ಮೂಡಿಸಲಿರುವ 'ದೊಡ್ಮನೆ' ಅಮ್ಮ]

More from Filmibeat

English summary
The last rites of Parvathamma Rajkumar, wife of Dr.Rajkumar, Kannada Movie Producer carried according to Hindu Tradition at Kanteerava Studios, Bengaluru today (May 31st).
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X