Don't Miss!
- News
Ejipura Flyover: ಟೆಂಡರ್ ಕರೆಯಲು ಮೀರಿದ ಸಮಯ, ಸ್ಥಳೀಯರ ಆಕ್ರೋಶ
- Technology
PVRನಿಂದ ಭರ್ಜರಿ ಸಿಹಿಸುದ್ದಿ; ಸಿನಿಮಾ ಪ್ರಿಯರ ಕಣ್ಣಿಗೆ ಹಬ್ಬದ ಸಂಭ್ರಮ!
- Sports
Asia Cup 2023: ಪಾಕ್ನಲ್ಲಿ ಭಾರತ ಏಷ್ಯಾಕಪ್ ಆಡದಿದ್ದರೆ, ವಿಶ್ವಕಪ್ ಆಡಲ್ಲ; ಎಚ್ಚರಿಕೆ ನೀಡಿದ ಪಿಸಿಬಿ
- Automobiles
ಸೆಲ್ಟೋಸ್ನ ಗೇರ್ಬಾಕ್ಸ್ನಲ್ಲಿ ದೋಷ ಕಂಡು ಬಂದಾಗ ಉಚಿತವಾಗಿ ಬದಲಾಯಿಸಿ ಕೊಟ್ಟ ಕಿಯಾ
- Lifestyle
ಮಕ್ಕಳನ್ನು 'ಅಮ್ಮ' ದಡಾರದಿಂದ ರಕ್ಷಿಸಲು ಇದೇ ತಿಂಗಳು ತಪ್ಪದೆ ಕೊಡಿಸಿ MR ಲಸಿಕೆ
- Finance
Twitter: ಟ್ವಿಟ್ಟರ್ನಲ್ಲಿ ಗೋಲ್ಡ್ ಬ್ಯಾಡ್ಜ್ ಉಳಿಸಿಕೊಳ್ಳಬೇಕಾದರೆ ಇಷ್ಟು ಮೊತ್ತ ಪಾವತಿಸಿ!
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
ಪ್ಯಾನ್ ಇಂಡಿಯಾ ಸಿನಿಮಾ ನಿರ್ಮಾಣಕ್ಕೆ ಕೈ ಹಾಕಿದ ಸಂದೇಶ್ ನಾಗರಾಜ್: ಪ್ರಭುದೇವ ಹೀರೋ
ರಾಷ್ಟ್ರಪ್ರಶಸ್ತಿ ವಿಜೇತ ನಿರ್ಮಾಪಕ ಸಂದೇಶ್ ನಾಗರಾಜ್ ರಾಜಕೀಯದಿಂದ ಬಿಡುವು ಮಾಡಿಕೊಂಡು ಮತ್ತೆ ಸಿನಿಮಾ ನಿರ್ಮಾಣಕ್ಕೆ ಮುಂದಾಗಿದ್ದಾರೆ. ಬ್ಯಾಕ್ ಟು ಬ್ಯಾಕ್ ಸಿನಿಮಾಗಳನ್ನು ನಿರ್ಮಿಸಲು ಮುಂದಾಗಿದ್ದಾರೆ. ಈಗಾಗಲೇ ಶಿವಣ್ಣನ ಜೊತೆ ಒಂದು ಸಿನಿಮಾವನ್ನು ಘೋಷಣೆ ಮಾಡಿದ್ದಾರೆ. ಈ ಸಿನಿಮಾ ಚಿ. ಗುರುದತ್ ನಿರ್ಮಾಣ ಮಾಡಲಿದ್ದಾರೆ. ಅಷ್ಟರಲ್ಲೇ ಮತ್ತೊಂದು ಸಿನಿಮಾವನ್ನು ಘೋಷಣೆ ಮಾಡಿದ್ದಾರೆ.
Recommended Video
ಕೊರೊನಾ ಸಮಯದಲ್ಲಿ ಸಿನಿಮಾ ನಿರ್ಮಾಣಕ್ಕೆ ಎಲ್ಲರೂ ಹಿಂದೇಟು ಹಾಕುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಸಂದೇಶ್ ನಾಗರಾಜ್ ಒಂದರ ಹಿಂದೊಂದು ಸಿನಿಮಾವನ್ನು ಘೋಷಣೆ ಮಾಡುತ್ತಿದ್ದಾರೆ. ಅದೂ ಬಿಗ್ ಬಜೆಟ್ ಸಿನಿಮಾಗಳನ್ನು ಅನೌನ್ಸ್ ಮಾಡುತ್ತಿದ್ದಾರೆ. ಸದ್ಯ ಪ್ರಭುದೇವ ಜೊತೆ ಸಿನಿಮಾ ಅನೌನ್ಸ್ ಮಾಡಿರುವುದು ಕನ್ನಡ ಚಿತ್ರರಂಗದಲ್ಲಿ ಹೊಸ ಸಂಚಲನವನ್ನೇ ಸೃಷ್ಟಿಸಿದೆ.

ಪ್ರಭುದೇವ ಜೊತೆ ಸಂದೇಶ್ ಸಿನಿಮಾ
ಭಾರತದ ಮೈಕಲ್ ಜಾಕ್ಸನ್ ಎಂದೇ ಹೆಸರು ವಾಸಿಯಾಗಿರುವ ಪ್ರಭುದೇವ ಪ್ಯಾನ್ ಇಂಡಿಯಾ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಆ ಸಿನಿಮಾವನ್ನು ಕನ್ನಡದ ದುಬಾರಿ ನಿರ್ಮಾಪಕ ಸಂದೇಶ್ ನಾಗರಾಜ್ ನಿರ್ಮಾಣ ಮಾಡುತ್ತಿದ್ದಾರೆ. ಅಧಿಕೃತವಾಗಿ ಈ ವಿಷಯವನ್ನು ಸ್ವತಃ ಸಂದೇಶ್ ನಾಗರಾಜ್ ಅವರೇ ಘೋಷಣೆ ಮಾಡಿದ್ದಾರೆ. ಪ್ರಭುದೇವ ನಟನೆಯ ಈ ಸಿನಿಮಾ ಯಾವ ರೀತಿಯ ಸಿನಿಮಾ ಅನ್ನುವುದನ್ನು ಸಂದೇಶ್ ಪ್ರೊಡಕ್ಷನ್ ಇನ್ನೂ ಮಾಹಿತಿ ರವಾನಿಸಿಲ್ಲ.

ಮಾಹಿತಿ ಬಿಟ್ಟುಕೊಟ್ಟಿಲ್ಲ ನಿರ್ಮಾಪಕ ಸಂದೇಶ್
ಸಂದೇಶ್ ಪ್ರೊಡಕ್ಷನ್ಸ್ ಸಂಸ್ಥೆಯಿಂದ ಪ್ಯಾನ್ ಇಂಡಿಯಾ ಸಿನಿಮಾ ನಿರ್ಮಾಣ ಆಗುತ್ತಿದೆ. ಖ್ಯಾತ ಬಹುಭಾಷಾ ನಟ ಪ್ರಭುದೇವ ನಟಿಸುತ್ತಿದ್ದಾರೆ. ಇದು ಕನ್ನಡ, ತೆಲುಗು, ತಮಿಳು, ಮಲೆಯಾಳಂ ಹಾಗೂ ಹಿಂದಿ ಭಾಷೆಗಳಲ್ಲಿ ಈ ಚಿತ್ರ ಬರಲಿದೆ. ಖ್ಯಾತ ಬಹುಭಾಷಾ ನಟ ಹಾಗೂ ತಮ್ಮ ಅಮೋಘ ನೃತ್ಯದ ಮೂಲಕ ವಿಶ್ವದಾದ್ಯಂತ ಹೆಸರು ಮಾಡಿರುವ ಪ್ರಭುದೇವ ವಿಭಿನ್ನ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನುವ ವಿಷಯವಷ್ಟೇ ಹೊರಬಿದ್ದಿದೆ. ಸದ್ಯದಲ್ಲೇ ಈ ಚಿತ್ರದ ತಾರಾಬಳಗ ಹಾಗೂ ತಾಂತ್ರಿಕವರ್ಗದ ಮಾಹಿತಿ ನೀಡುವುದಾಗಿ ಸಂದೇಶ್ ನಾಗರಾಜ್ ತಿಳಿಸಿದ್ದಾರೆ.

ಶಿವಣ್ಣನೊಂದಿಗೆ ಮೊದಲ ಸಿನಿಮಾ
ಇತ್ತೀಚೆಗೆ ಸಂದೇಶ್ ನಾಗರಾಜ್ ಸೆಂಚುರಿ ಸ್ಟಾರ್ ಶಿವರಾಜ್ ಕುಮಾರ್ ಜೊತೆ ಸಿನಿಮಾ ಮಾಡುವುದಾಗಿ ಘೋಷಿಸಿದ್ದರು. ಹಿಂದೆಂದೂ ಶಿವಣ್ಣನೊಂದಿಗೆ ಸಿನಿಮಾ ಮಾಡಿರಲಿಲ್ಲ. ಇದೇ ಮೊದಲ ಬಾರಿಗೆ ಸಂದೇಶ್ ನಾಗರಾಜ್ ಶಿವಣ್ಣನಿಗೆ ಸಿನಿಮಾ ಮಾಡುತ್ತಿದ್ದು, ಅಭಿಮಾನಿಗಳು ಕಾತರದಿಂದ ಕಾದು ಕೂತಿದ್ದಾರೆ. ಚಿ. ಗುರುದತ್ ಈ ಸಿನಿಮಾವನ್ನು ನಿರ್ದೇಶನ ಮಾಡುತ್ತಿದ್ದಾರೆ. ಆದರೆ, ಈ ಸಿನಿಮಾ ಬಗ್ಗೆ ಇನ್ನೂ ಹೆಚ್ಚು ಮಾಹಿತಿಯನ್ನು ಸಂದೇಶ್ ನಾಗರಾಜ್ ನೀಡಿಲ್ಲ. ಚಿತ್ರದ ಟ್ರೈಟಲ್ ಹಾಗೂ ಶಿವಣ್ಣ ಪಾತ್ರದ ಬಗ್ಗೆ ಇನ್ನಷ್ಟೇ ಮಾಹಿತಿ ಹೊರಬೀಳಬೇಕಿದೆ.

ಸಂದೇಶ್ ನಿರ್ಮಿಸಿದ ಎರಡು ಸಿನಿಮಾ ಸೋಲು
ಸಂದೇಶ್ ನಾಗರಾಜ್ ನಿರ್ಮಾಣ ಸಂಸ್ಥೆಯಲ್ಲಿ ನಿರ್ಮಾಣಗೊಂಡ ಎರಡು ಸಿನಿಮಾಗಳು ಬಾಕ್ಸಾಫೀಸ್‌ನಲ್ಲಿ ಸೋತಿವೆ. ಡಾರ್ಲಿಂಗ್ ಕೃಷ್ಣ ಅಭಿನಯದ 'ಶ್ರೀಕೃಷ್ಣಜಿಮೇಲ್ ಡಾಟ್ ಕಾಮ್' ಹಾಗೂ ದರ್ಶನ್ ಅಭಿನಯದ 'ಒಡೆಯ' ಸಿನಿಮಾಗಳು ಬಾಕ್ಸಾಫೀಸ್‌ನಲ್ಲಿ ಸೋತಿವೆ. ಹೀಗಾಗಿ ಈ ಬಾರಿ ಗೆಲ್ಲಲೇ ಬೇಕು ಎನ್ನುವ ಹಠಕ್ಕೆ ಬಿದ್ದಿರುವ ಸಂದೇಶ್ ನಾಗರಾಜ್ ಎರಡು ಭರ್ಜರಿ ಸಿನಿಮಾಗಳನ್ನು ಘೋಷಣೆ ಮಾಡಿದ್ದಾರೆ.