ಹಿರಿಯ ಕಲಾವಿದ ಶನಿ ಮಹಾದೇವಪ್ಪ ನಿಧನ: ಪುನೀತ್, ಸುದೀಪ್ ಸಂತಾಪ

2021ನೇ ವರ್ಷದ ಆರಂಭದಲ್ಲೇ ಬೇಸರ ಸುದ್ದಿಯೊಂದು ವರದಿಯಾಗಿದೆ. ಕನ್ನಡ ಚಿತ್ರರಂಗದ ಹಿರಿಯ ಕಲಾವಿದ ಶನಿ ಮಹಾದೇವಪ್ಪ ಅವರು ಕೊರೊನಾದಿಂದ ಸಾವನ್ನಪ್ಪಿದ್ದಾರೆ. ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

Recommended Video

550 ಸಿನಿಮಾಗಳಲ್ಲಿ ನಟಿಸಿದ್ದ ಶನಿ ಮಹಾದೇವಪ್ಪ ಇನ್ನಿಲ್ಲ | Filmibeat Kannada

ಕೊವಿಡ್ ಸೋಂಕಿಗೆ ತುತ್ತಾಗಿದ್ದ 90 ವರ್ಷದ ಶನಿ ಮಹಾದೇವಪ್ಪ ಅವರು ಇಂದು ಸಂಜೆ ಬೆಂಗಳೂರಿನ ಕೆಸಿ ಜನರಲ್ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ ಎಂದು ತಿಳಿದು ಬಂದಿದೆ.

ಕನ್ನಡ ಸಿನಿಮಾರಂಗದಲ್ಲಿ ಸುಮಾರು 550ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದಾರೆ. ಕವಿರತ್ನ ಕಾಳಿದಾಸ, ಭಕ್ತ ಕುಂಬಾರ, ಶ್ರೀನಿವಾಸ ಕಲ್ಯಾಣ, ಮೂರುವರೆ ವಜ್ರಗಳು ಸೇರಿದಂತೆ ಪೌರಾಣಿಕ, ಐತಿಹಾಸಿಕ, ಸಾಮಾಜಿಕ ಹೀಗೆ ಎಲ್ಲ ರೀತಿ ಸಿನಿಮಾಗಳಲ್ಲಿಯೂ ಬಣ್ಣ ಹಚ್ಚಿದ್ದರು. ಅದರಲ್ಲೂ ವರನಟ ಡಾ ರಾಜ್ ಕುಮಾರ್ ಜೊತೆ ಹೆಚ್ಚು ಸಿನಿಮಾಗಳಲ್ಲಿ ಅಭಿನಯಿಸಿದ್ದರು. ಕಲಾವಿದ ಶನಿ ಮಹಾದೇವಪ್ಪನವರು ಡಾ.ರಾಜ್ ಕುಮಾರ್ ಜೊತೆಯಲ್ಲಿಯೇ 150ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿರುವ ಬಗ್ಗೆ ಮಾಹಿತಿ ಇದೆ.

kannada-senior-actor-shani-mahadevappa-dies-of-covid19

ಶನಿಮಹಾದೇವಪ್ಪ ಅವರ ನಿಧನಕ್ಕೆ ಸ್ಯಾಂಡಲ್‌ವುಡ್ ಕಂಬನಿ ಮಿಡಿದಿದ್ದು, ನಟ ಪುನೀತ್ ರಾಜ್ ಕುಮಾರ್ ಟ್ವಿಟ್ಟರ್ ಮೂಲಕ ಸಂತಾಪ ಸೂಚಿಸಿದ್ದಾರೆ. ''ಅಪ್ಪಾಜಿಯವರ ಜೊತೆ ಭಕ್ತ ಕುಂಬಾರ, ಶ್ರೀನಿವಾಸ ಕಲ್ಯಾಣ, ಕವಿರತ್ನ ಕಾಳಿದಾಸ, ಮೂರೂವರೆ ವಜ್ರಗಳು ಸೇರಿದಂತೆ ಅನೇಕ ಚಿತ್ರಗಳಲ್ಲಿ ನಟಿಸಿದ ಹಿರಿಯ ನಟರಾದ ಶನಿ ಮಹದೇವಪ್ಪನವರು ನಮ್ಮನ್ನು ಅಗಲಿದ್ದಾರೆ'' ಎಂದು ಟ್ವೀಟ್ ಮಾಡಿದ್ದಾರೆ.

ಕಿಚ್ಚ ಸುದೀಪ್ ಸಹ ಶನಿಮಹಾದೇವಪ್ಪ ನಿಧನಕ್ಕೆ ಟ್ವಿಟ್ಟರ್‌ನಲ್ಲಿ ಸಂತಾಪ ಸೂಚಿಸಿದ್ದಾರೆ.

ಸುಮಲತಾ ಅಂಬರೀಶ್ ಅವರು ಟ್ವೀಟ್ ಮಾಡಿ ''ಇಂದು ನಮ್ಮನ್ನೆಲ್ಲ ಅಗಲಿದ ಹಿರಿಯ ಕಲಾವಿದರಾದ ಶನಿ ಮಹಾದೇವಪ್ಪನವರ (90 ವರ್ಷ) ಆತ್ಮಕ್ಕೆ ಚಿರಶಾಂತಿ ಸಿಗಲೆಂದು ಪ್ರಾರ್ಥಿಸುವೆ. ಸರಿ ಸುಮಾರು 550 ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಸಿರುವ ಅವರ ಕಲಾಸೇವೆ ಚಿರಸ್ಥಾಯಿ. ಅವರ ಕುಟುಂಬ ಹಾಗೂ ಪ್ರೀತಿಪಾತ್ರರಿಗೆ ಈ ನೋವು ಭರಿಸುವ ಶಕ್ತಿಯನ್ನು ಭಗವಂತ ನೀಡಲಿ'' ಎಂದು ಸಂತಾಪ ಸೂಚಿಸಿದ್ದಾರೆ.

More from Filmibeat

English summary
Noted Kannada Senior Actor Shani mahadevappa dies of COVID19. He acted more than 20 movies with the most honour legendary actor dr rajkumar.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X