Don't Miss!
- News Bengaluru Suburban Rail Project: ಈ ಭಾಗದಲ್ಲಿ ಭೂಸ್ವಾಧೀನ ಪ್ರಕ್ರಿಯೆ ಆರಂಭ, ಎಲ್ಲೆಲ್ಲಿ?-ಇಲ್ಲಿದೆ ಮಾಹಿತಿ
- Sports MI vs RCB: ಟಾಸ್ ಟ್ಯಾಂಪರಿಂಗ್ ಮಾಡಿದ್ರಾ ಮ್ಯಾಚ್ ರೆಫರಿ ಜಾವಗಲ್ ಶ್ರೀನಾಥ್?; ಇಲ್ಲಿದೆ ಪ್ಯಾಕ್ಟ್ ಚೆಕ್
- Lifestyle ಸಾಬುದಾನ ಪಾಯಸ ಟ್ರೈ ಮಾಡಿದ್ದೀರಾ? ಸೂಪರ್ ಆಗಿರುತ್ತೆ, ಇಲ್ಲಿದೆ ರೆಸಿಪಿ
- Technology ದುಬಾರಿ ಬೆಲೆಯ ಮೊಬೈಲ್ ಖರೀದಿಸಬೇಕೆ?..ಹಾಗಿದ್ರೆ, ಈ ಫೋನ್ ನಿಮಗೆ ಇಷ್ಟವಾಗುತ್ತೆ!
- Automobiles Vande Bharat Sleeper: ಮೊದಲ ವಂದೇ ಭಾರತ್ ಸ್ಲೀಪರ್ ರೈಲು ಶೀಘ್ರ ಸಂಚಾರ.. ಎಲ್ಲಿಂದ, ಎಲ್ಲಿಗೆ?
- Finance 'ಹೆಲ್ತ್ ಡ್ರಿಂಕ್ಸ್' ವರ್ಗದಿಂದ ಬೋರ್ನ್ವೀಟಾ ತೆಗೆದುಹಾಕುವಂತೆ ಕೇಂದ್ರ ಸರ್ಕಾರ ಆದೇಶ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಹಿರಿಯ ಕಲಾವಿದ ಶನಿ ಮಹಾದೇವಪ್ಪ ನಿಧನ: ಪುನೀತ್, ಸುದೀಪ್ ಸಂತಾಪ
2021ನೇ ವರ್ಷದ ಆರಂಭದಲ್ಲೇ ಬೇಸರ ಸುದ್ದಿಯೊಂದು ವರದಿಯಾಗಿದೆ. ಕನ್ನಡ ಚಿತ್ರರಂಗದ ಹಿರಿಯ ಕಲಾವಿದ ಶನಿ ಮಹಾದೇವಪ್ಪ ಅವರು ಕೊರೊನಾದಿಂದ ಸಾವನ್ನಪ್ಪಿದ್ದಾರೆ. ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.
Recommended Video
ಕೊವಿಡ್ ಸೋಂಕಿಗೆ ತುತ್ತಾಗಿದ್ದ 90 ವರ್ಷದ ಶನಿ ಮಹಾದೇವಪ್ಪ ಅವರು ಇಂದು ಸಂಜೆ ಬೆಂಗಳೂರಿನ ಕೆಸಿ ಜನರಲ್ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ ಎಂದು ತಿಳಿದು ಬಂದಿದೆ.
ಕನ್ನಡ ಸಿನಿಮಾರಂಗದಲ್ಲಿ ಸುಮಾರು 550ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದಾರೆ. ಕವಿರತ್ನ ಕಾಳಿದಾಸ, ಭಕ್ತ ಕುಂಬಾರ, ಶ್ರೀನಿವಾಸ ಕಲ್ಯಾಣ, ಮೂರುವರೆ ವಜ್ರಗಳು ಸೇರಿದಂತೆ ಪೌರಾಣಿಕ, ಐತಿಹಾಸಿಕ, ಸಾಮಾಜಿಕ ಹೀಗೆ ಎಲ್ಲ ರೀತಿ ಸಿನಿಮಾಗಳಲ್ಲಿಯೂ ಬಣ್ಣ ಹಚ್ಚಿದ್ದರು. ಅದರಲ್ಲೂ ವರನಟ ಡಾ ರಾಜ್ ಕುಮಾರ್ ಜೊತೆ ಹೆಚ್ಚು ಸಿನಿಮಾಗಳಲ್ಲಿ ಅಭಿನಯಿಸಿದ್ದರು. ಕಲಾವಿದ ಶನಿ ಮಹಾದೇವಪ್ಪನವರು ಡಾ.ರಾಜ್ ಕುಮಾರ್ ಜೊತೆಯಲ್ಲಿಯೇ 150ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿರುವ ಬಗ್ಗೆ ಮಾಹಿತಿ ಇದೆ.
ಶನಿಮಹಾದೇವಪ್ಪ ಅವರ ನಿಧನಕ್ಕೆ ಸ್ಯಾಂಡಲ್ವುಡ್ ಕಂಬನಿ ಮಿಡಿದಿದ್ದು, ನಟ ಪುನೀತ್ ರಾಜ್ ಕುಮಾರ್ ಟ್ವಿಟ್ಟರ್ ಮೂಲಕ ಸಂತಾಪ ಸೂಚಿಸಿದ್ದಾರೆ. ''ಅಪ್ಪಾಜಿಯವರ ಜೊತೆ ಭಕ್ತ ಕುಂಬಾರ, ಶ್ರೀನಿವಾಸ ಕಲ್ಯಾಣ, ಕವಿರತ್ನ ಕಾಳಿದಾಸ, ಮೂರೂವರೆ ವಜ್ರಗಳು ಸೇರಿದಂತೆ ಅನೇಕ ಚಿತ್ರಗಳಲ್ಲಿ ನಟಿಸಿದ ಹಿರಿಯ ನಟರಾದ ಶನಿ ಮಹದೇವಪ್ಪನವರು ನಮ್ಮನ್ನು ಅಗಲಿದ್ದಾರೆ'' ಎಂದು ಟ್ವೀಟ್ ಮಾಡಿದ್ದಾರೆ.
ಕಿಚ್ಚ ಸುದೀಪ್ ಸಹ ಶನಿಮಹಾದೇವಪ್ಪ ನಿಧನಕ್ಕೆ ಟ್ವಿಟ್ಟರ್ನಲ್ಲಿ ಸಂತಾಪ ಸೂಚಿಸಿದ್ದಾರೆ.
ಇಂದು ನಮ್ಮನ್ನೆಲ್ಲ ಅಗಲಿದ ಹಿರಿಯ ಕಲಾವಿದರಾದ ಶನಿ ಮಹಾದೇವಪ್ಪನವರ (90 ವರ್ಷ) ಆತ್ಮಕ್ಕೆ ಚಿರಶಾಂತಿ ಸಿಗಲೆಂದು ಪ್ರಾರ್ಥಿಸುವೆ. ಸರಿ ಸುಮಾರು 550 ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಸಿರುವ ಅವರ ಕಲಾಸೇವೆ ಚಿರಸ್ಥಾಯಿ. ಅವರ ಕುಟುಂಬ ಹಾಗೂ ಪ್ರೀತಿಪಾತ್ರರಿಗೆ ಈ ನೋವು ಭರಿಸುವ ಶಕ್ತಿಯನ್ನು ಭಗವಂತ ನೀಡಲಿ. 🙏🏼🙏🏼🙏🏼 pic.twitter.com/xubMEJcrxj
— Sumalatha Ambareesh 🇮🇳 ಸುಮಲತಾ ಅಂಬರೀಶ್ (@sumalathaA) January 3, 2021
ಸುಮಲತಾ ಅಂಬರೀಶ್ ಅವರು ಟ್ವೀಟ್ ಮಾಡಿ ''ಇಂದು ನಮ್ಮನ್ನೆಲ್ಲ ಅಗಲಿದ ಹಿರಿಯ ಕಲಾವಿದರಾದ ಶನಿ ಮಹಾದೇವಪ್ಪನವರ (90 ವರ್ಷ) ಆತ್ಮಕ್ಕೆ ಚಿರಶಾಂತಿ ಸಿಗಲೆಂದು ಪ್ರಾರ್ಥಿಸುವೆ. ಸರಿ ಸುಮಾರು 550 ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಸಿರುವ ಅವರ ಕಲಾಸೇವೆ ಚಿರಸ್ಥಾಯಿ. ಅವರ ಕುಟುಂಬ ಹಾಗೂ ಪ್ರೀತಿಪಾತ್ರರಿಗೆ ಈ ನೋವು ಭರಿಸುವ ಶಕ್ತಿಯನ್ನು ಭಗವಂತ ನೀಡಲಿ'' ಎಂದು ಸಂತಾಪ ಸೂಚಿಸಿದ್ದಾರೆ.