Don't Miss!
- News
ಫೆಬ್ರವರಿ 6ರಂದು 280 ರೈಲುಗಳನ್ನು ರದ್ದುಗೊಳಿಸಿದ ಭಾರತೀಯ ರೈಲ್ವೆ- ಸಂಪೂರ್ಣ ಪಟ್ಟಿ ಇಲ್ಲಿದೆ
- Sports
ಬಾರ್ಡರ್-ಗವಾಸ್ಕರ್ ಟ್ರೋಫಿ: ರೋಹಿತ್ ಬಳಗದ ಅಭ್ಯಾಸಕ್ಕೆ ಭಾನುವಾರ ರಜೆ ನೀಡಿದ ಕೋಚ್ ದ್ರಾವಿಡ್
- Lifestyle
Horoscope Today 6 Feb 2023: ಸೋಮವಾರ : ದ್ವಾದಶ ರಾಶಿಗಳ ರಾಶಿಫಲ ಹೇಗಿದೆ?
- Finance
ಆಧಾರ್ ಕಾರ್ಡ್ ಸಂಖ್ಯೆಯಿಂದ ನಿಮ್ಮ ಬ್ಯಾಂಕ್ ಬ್ಯಾಲೆನ್ಸ್ ಪರಿಶೀಲಿಸಿ, ಹೇಗೆ ಇಲ್ಲಿ ತಿಳಿಯಿರಿ
- Automobiles
ಹೆಚ್ಚಿನ ಮೈಲೇಜ್ ನೀಡುವ ಬಹುನಿರೀಕ್ಷಿತ ಟಾಟಾ ಆಲ್ಟ್ರೊಜ್ iCNG ಕಾರಿನ ವಿಶೇಷತೆಗಳು...
- Technology
ಇನ್ಮುಂದೆ ಟ್ವಿಟ್ಟರ್ನಲ್ಲೂ ಹಣ ಗಳಿಸಬಹುದು; ಮಸ್ಕ್ರ ಹೊಸ ನಿರ್ಧಾರ ಏನು!?
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ ಭಗವಾನ್‌ಗೆ ಅನಾರೋಗ್ಯ: ಜಯದೇವ ಆಸ್ಪತ್ರೆಗೆ ದಾಖಲು!
ಕನ್ನಡ ಚಿತ್ರರಂಗದಲ್ಲಿ ಸೂಪರ್ ಹಿಟ್ ಸಿನಿಮಾಗಳನ್ನು ನಿರ್ದೇಶಿಸಿರೊ ದೊರೈ-ಭಗವಾನ್ ಖ್ಯಾತಿಯ ಭಗವಾನ್ ಆರೋಗ್ಯದಲ್ಲಿ ಏರುಪೇರಾಗಿದೆ. ಈ ಸಂಬಂಧ ಬೆಂಗಳೂರಿನ ಜಯದೇವ ಆಸ್ಪತ್ರೆಗೆ ಅವರನ್ನು ದಾಖಲು ಮಾಡಲಾಗಿದೆ.
ಕಳೆದ ಕೆಲವು ದಿನಗಳಿಂದ ಅನಾರೋಗ್ಯ ಕಾಣಿಸಿಕೊಂಡಿತ್ತು. ಎರಡು ದಿನಗಳ ಹಿಂದೆ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಭಗವಾನ್ ಅವರನ್ನು ತಕ್ಷಣವೇ ಜಯದೇವ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎನ್ನಲಾಗಿದೆ. 89 ವರ್ಷದ ಹಿರಿಯರ ನಿರ್ದೇಶಕರಿಗೆ ಡಾ. ಮಂಜುನಾಥ್ ಚಿಕಿತ್ಸೆ ನೀಡುತ್ತಿದ್ದಾರೆ ಎನ್ನಲಾಗಿದೆ.
ಕನ್ನಡ ಸಿನಿಮಾಗಳಲ್ಲಿ ಭಗವಾನ್ ಎಂದೇ ಚಿರಪರಿಚಿತರು. ಹಲವು ಸೂಪರ್ ಹಿಟ್ ಸಿನಿಮಾಗಳನ್ನು ಕನ್ನಡ ಚಿತ್ರರಂಗಕ್ಕೆ ನೀಡಿದ ಹೆಗ್ಗಳಿಕೆ ಇವರದ್ದು. ಅಂದ್ಹಾಗೆ ಇವರ ಅಸಲಿ ಹೆಸರು ಶ್ರೀನಿವಾಸ ಕೃಷ್ಣ ಅಯ್ಯಂಗಾರ್ ಭಗವಾನ್. ನಾಟಕಗಳಲ್ಲಿ ಅಭಿನಯಿಸುತ್ತಿದ್ದ ಭಗವಾನ್ ಬಳಿಕ ನಿರ್ದೇಶನಕ್ಕೆ ಇಳಿದಿದ್ದರು.
ಮೊದಲ ಕಣಗಾಲ್ ಪ್ರಭಾಕರ ಶಾಸ್ತ್ರಿ ಅವರಿಗೆ ಸಹಾಯಕರಾಗಿದ್ದರು. ಇಲ್ಲಿಂದ ಚಿತ್ರರಂಗದ ಪಯಣ ಶುರುವಾಗಿತ್ತು. 'ಸಂಧ್ಯಾರಾಗ' ಸಿನಿಮಾಗೆ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಿದ್ದರು. ಆ ಬಳಿಕ ನಿರ್ದೇಶಕ ದೊರೈರಾಜ್ ಹಾಗೂ ಭಗವಾನ್ ಇಬ್ಬರೂ ಸೇರಿ ಸಿನಿಮಾವನ್ನು ನಿರ್ದೇಶನ ಮಾಡಲು ಆರಂಭಿಸಿದ್ದರು.
ಈ ಜೋಡಿ ಸುಮಾರು 55ಕ್ಕೂ ಅಧಿಕ ಸಿನಿಮಾಗಳನ್ನು ನಿರ್ದೇಶನ ಮಾಡಿದೆ. ದೊರೈರಾಜ್ ನಿಧನದ ಬಳಿಕ ಭಗವಾನ್ ಕೂಡ ಸಿನಿಮಾ ನಿರ್ದೇಶಿಸುವುದನ್ನು ಕಡಿಮೆ ಮಾಡಿದ್ದರು. 'ಜೇಡರಬಲೆ', 'ಗೋವಾದಲ್ಲಿ ಸಿಐಡಿ 999', 'ಕಸ್ತೂರಿ ನಿವಾಸ', 'ಎರಡು ಕನಸು', 'ಬಯಲುದಾರಿ', ವಸಂತಗೀತಾ, ಹೊಸ ಬೆಳಕು ಅಂತಹ ಸಿನಿಮಾಗಳನ್ನು ನಿರ್ದೇಶನ ಮಾಡಿದ್ದಾರೆ.

ದೊರೈ ಹಾಗೂ ಭಗವಾನ್ ಇಬ್ಬರೂ ಡಾ. ರಾಜ್‌ಕುಮಾರ್ ಅವರಿಗೆ ಹೆಚ್ಚು ಸಿನಿಮಾಗಳನ್ನು ನಿರ್ದೇಶನ ಮಾಡಿರೋದು ವಿಶೇಷ. ಇವರು ನಿರ್ದೇಶಿಸಿದ 55 ಸಿನಿಮಾಗಳಲ್ಲಿ ಸುಮಾರು 30ರಲ್ಲಿ ಅಣ್ಣಾವ್ರು ನಟಿಸಿದ್ದಾರೆ. ಭಗವಾನ್ ನಿರ್ದೇಶಕರಾಗಿ, ನಿರ್ಮಾಪಕರಾಗಿ ಹಾಗೂ ನಟರಾಗಿಯೂ ಜನಪ್ರಿಯಾಗಿದ್ದಾರೆ. 80ನೇ ವಯಸ್ಸಿನಲ್ಲಿಯೂ ಭಗವಾನ್ ಆಕ್ಟಿವ್ ಆಗಿ ಓಡಾಡಿಕೊಂಡಿದ್ದರು.