For Quick Alerts
  ALLOW NOTIFICATIONS  
  For Daily Alerts

  ಹಿರಿಯ ಸಂಭಾಷಣೆಕಾರ, ನಿರ್ದೇಶಕ ನಾಗೇಶ್ ಬಾಬ ನಿಧನ

  |

  ಕನ್ನಡ ಹಿರಿಯ ಸಂಭಾಷಣೆಕಾರ, ನಿರ್ದೇಶಕ ಹಾಗೂ ನಿರ್ಮಾಪಕರಾಗಿದ್ದ ನಾಗೇಶ್ ಬಾಬ (82) ನಿಧನರಾಗಿದ್ದಾರೆ. ಕನ್ನಡ ಸಿನಿಮಾರಂಗಕ್ಕೆ ನೇರವಾಗಿ, ಪರೋಕ್ಷವಾಗಿ ನಾಗೇಶ್ ಬಾಬ ಅವರ ಕೊಡುಗೆ ಸ್ಮರಣೀಯ. ಇಂದು ಬೆಳಗ್ಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದ ನಾಗೇಶ್ ಬಾಬ ಅವರು ಪತ್ನಿ ಶ್ಯಾಮಲಾ ಹಾಗೂ ಮೂವರು ಮಕ್ಕಳನ್ನು ಅಗಲಿದ್ದಾರೆ. ನಾಗೇಶ್ ಬಾಬ ನಿಧನಕ್ಕೆ ಅನೇಕರು ಕಂಬನಿ ಮಿಡಿದಿದ್ದಾರೆ.

  1957ರಲ್ಲಿ ಆರ್ ನಾಗೇಂದ್ರ ರಾವ್ ನಿರ್ದೇಶನದ 'ಪ್ರೇಮದ ಪುತ್ರಿ' ಚಿತ್ರಕ್ಕೆ ಸಹಾಯಕ ನಿರ್ದೇಶಕರಾಗಿ ವೃತ್ತಿ ಆರಂಭಿಸಿದ ನಾಗೇಶ್ ಬಾಬ ನಂತರ 'ಬೆಟ್ಟದ ಕಳ್ಳ', 'ಪ್ರತಿಮಾ' ಚಿತ್ರಗಳಿಗೆ ಸಹಾಯಕ ನಿರ್ದೇಶಕರಾಗಿ ಕಾರ್ಯನಿರ್ವಹಿಸಿದರು. 'ಕೋಟಿ ಚೆನ್ನಯ' ಎಂಬ ತುಳು ಚಿತ್ರಕ್ಕೆ ತಾಂತ್ರಿಕ ನಿರ್ದೇಶಕರಾಗಿ ಸಹ ದುಡಿದಿದ್ದಾರೆ. ಮುಂದೆ ಓದಿ...

  'ಪ್ರೇಮದ ಪುತ್ರಿ' ಚಿತ್ರದಿಂದ ವೃತ್ತಿ ಆರಂಭ

  'ಪ್ರೇಮದ ಪುತ್ರಿ' ಚಿತ್ರದಿಂದ ವೃತ್ತಿ ಆರಂಭ

  ಮೂಲತಃ ಮಂಡ್ಯ ಜಿಲ್ಲೆ ಬೆಳಕವಾಡಿ ಅವರಾದ ನಾಗೇಶ್ ಬಾಬ ಬೆಂಗಳೂರಿನಲ್ಲಿ ಬಿಎಸ್ಸಿ ಪದವಿ ಮುಗಿಸಿದ್ದಾರೆ. ಚಿತ್ರರಂಗದಲ್ಲಿ ಕೆಲಸ ಮಾಡಬೇಕೆಂಬ ಗುರಿ ಹೊಂದಿದ್ದ ಅವರು 1956ರಲ್ಲಿ ಮದರಾಸಿಗೆ ಹೋದರು. ಆರ್.ನಾಗೇಂದ್ರರಾವ್ ನಿರ್ದೇಶನದ 'ಪ್ರೇಮದ ಪುತ್ರಿ' (1957) ಚಿತ್ರದ ಸಹಾಯಕ ನಿರ್ದೇಶಕರಾಗುವ ಮೂಲಕ ಚಿತ್ರರಂಗದ ನಂಟು ಆರಂಭವಾಯ್ತು. 'ಬೆಟ್ಟದ ಕಳ್ಳ', 'ಪ್ರತಿಮಾ' ಚಿತ್ರಗಳಿಗೆ ಸಹಾಯಕ ನಿರ್ದೇಶಕರಾಗಿ ಕಾರ್ಯನಿರ್ವಹಿಸಿದರು. 'ಕೋಟಿ ಚೆನ್ನಯ' ಎಂಬ ತುಳು ಚಿತ್ರಕ್ಕೆ ತಾಂತ್ರಿಕ ನಿರ್ದೇಶಕರಾಗಿ ಸಹ ದುಡಿದಿದ್ದಾರೆ. 'ತೂಗುದೀಪ', 'ನನ್ನ ಕರ್ತವ್ಯ' ಚಿತ್ರಗಳಿಗೆ ಸಂಭಾಷಣೆ ರಚಿಸಿದ್ದಾರೆ.

  2020ರಲ್ಲಿ ಮತ್ತೊಂದು ಸಾವು: ಖ್ಯಾತ ನಟ ವಿಶಾಲ್ ಆನಂದ್ ವಿಧಿವಶ

  'ಅನಿರೀಕ್ಷಿತ' ಚಿತ್ರಕ್ಕೆ ಐವತ್ತು ವರ್ಷ

  'ಅನಿರೀಕ್ಷಿತ' ಚಿತ್ರಕ್ಕೆ ಐವತ್ತು ವರ್ಷ

  'ಅನಿರೀಕ್ಷಿತ' (1970) ಚಿತ್ರವನ್ನು ನಿರ್ಮಿಸಿ, ನಿರ್ದೇಶಿಸಿದ್ದಾರೆ. ಕೃಷ್ಣಮೂರ್ತಿ ಪುರಾಣಿಕರ ‘ವಸುಂಧರೆ' ಕೃತಿಯನ್ನು ಆಧರಿಸಿದ ಪ್ರಯೋಗವಿದು. ಚಿತ್ರಕ್ಕೆ ವಿಜಯಭಾಸ್ಕರ್ ಸಂಯೋಜಿಸಿದ ಎರಡು ಟ್ಯೂನ್‌ಗಳಿಗೆ ಪ್ರೇಮಕವಿ ಕೆ.ಎಸ್.ನರಸಿಂಹಸ್ವಾಮಿ ಅವರು ಮದರಾಸಿಗೆ ತೆರಳಿ ಗೀತೆ ರಚಿಸಿಕೊಟ್ಟಿದ್ದು ವಿಶೇಷ. ಈ ಸಿನಿಮಾ ತೆರೆಕಂಡು ಈ ಹೊತ್ತಿಗೆ ಐವತ್ತು ವರ್ಷ.

  ಸ್ಥಿರಚಿತ್ರ ಛಾಯಾಗ್ರಹಣದಲ್ಲಿ ಅಪಾರ ಕೊಡುಗೆ

  ಸ್ಥಿರಚಿತ್ರ ಛಾಯಾಗ್ರಹಣದಲ್ಲಿ ಅಪಾರ ಕೊಡುಗೆ

  ಕನ್ನಡ ಸಿನಿಮಾ ಸ್ಥಿರಚಿತ್ರ ಛಾಯಾಗ್ರಹಣ ವಿಭಾಗದಲ್ಲಿ ನಾಗೇಶ್ ಬಾಬ ಅವರ ಕೊಡುಗೆ ಸ್ಮರಣೀಯ. ಮದರಾಸಿನಲ್ಲಿ ವೆಂಕಟೇಶ್ವರನ್ ಅವರೊಡಗೂಡಿ 'ತ್ರೀ ಸ್ಟಾರ್ಸ್' ಸ್ಥಿರಚಿತ್ರ ಛಾಯಾಗ್ರಹಣ ಸಂಸ್ಥೆ ಆರಂಭಿಸಿದರು (1964). ಮುಂದೆ ಬೆಂಗಳೂರಿಗೆ ಮರಳಿದ ನಂತರ ಗಾಂಧಿನಗರದ 6ನೇ ಕ್ರಾಸ್‌ನಲ್ಲಿ 'ಪ್ರಗತಿ' ಸ್ಟುಡಿಯೋ ಆರಂಭಿಸಿದರು (1972). ಸಹೋದರ (ಚಿಕ್ಕಪ್ಪನ ಮಗ) ಅಶ್ವತ್ಥ ನಾರಾಯಣ ಅವರು ನಾಗೇಶ್ ಬಾಬರಿಗೆ ಇಲ್ಲಿ ಜೊತೆಯಾದರು. ಮುಂದೆ 'ಪ್ರಗತಿ' ಸ್ಟುಡಿಯೋ ಕನ್ನಡ ಚಿತ್ರರಂಗದ ಇತಿಹಾಸದಲ್ಲಿ ಸ್ಥಾನ ಪಡೆಯಿತು. ಸುಮಾರು 350ಕ್ಕೂ ಹೆಚ್ಚು ಸಿನಿಮಾಗಳಿಗೆ 'ಪ್ರಗತಿ'ಯ ಸ್ಥಿರಚಿತ್ರ ಛಾಯಾಗ್ರಾಹಣವಿದೆ. ಚಿತ್ರನಿರ್ದೇಶಕರು, ನಟ-ನಟಿಯರಿಗೆ 'ಪ್ರಗತಿ' ಆಗ ಮೀಟಿಂಗ್ ಪಾಯಿಂಟ್ ಆಗಿತ್ತು.

  ದಯವಿಟ್ಟು ಆ ವಿಡಿಯೋ, ಫೋಟೋಸ್ ನ ಲೀಕ್ ಮಾಡಬೇಡಿ ಎಂದು ಬೇಡಿಕೊಂಡ ಆಶಿಕಾ ರಂಗನಾಥ್ | Filmibeat Kannada
  ಕನ್ನಡ ಸಿನಿಮಾಗೆ ನಾಗೇಶ್ ಬಾಬ ಕೊಡುಗೆ ದೊಡ್ಡದಿದೆ

  ಕನ್ನಡ ಸಿನಿಮಾಗೆ ನಾಗೇಶ್ ಬಾಬ ಕೊಡುಗೆ ದೊಡ್ಡದಿದೆ

  ಚಿತ್ರರಂಗದಲ್ಲಿ ನೇರವಾಗಿ ತೊಡಗಿಸಿಕೊಂಡಿದ್ದಲ್ಲದೆ ತೆರೆಮರೆಯಲ್ಲಿ ಕನ್ನಡ ಸಿನಿಮಾಗೆ ನಾಗೇಶ್ ಬಾಬ ಅವರ ಕೊಡುಗೆ ದೊಡ್ಡದಿದೆ. ಹಲವು ವರ್ಷಗಳ ಕಾಲ ಅವರು ಮದರಾಸಿನಲ್ಲಿದ್ದ ದಕ್ಷಿಣ ಭಾರತ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಸೂಪರಿಂಟೆಂಡ್ ಆಗಿ ಕಾರ್ಯನಿರ್ವಹಿದ್ದರು. ಆಗೆಲ್ಲಾ ಕನ್ನಡ ನಿರ್ಮಾಪಕರು, ನಿರ್ದೇಶಕರಿಗೆ ತಮ್ಮ ಶಿಫಾರಸು ಬಳಸಿ ಕಚ್ಛಾ ಫಿಲ್ಮ್ ದೊರಕಿಸಿಕೊಡುವಲ್ಲಿ ನೆರವಾಗುತ್ತಿದ್ದರು. 2005ರಲ್ಲಿ 'ಪ್ರಗತಿ' ಸ್ಟುಡಿಯೋ ಕಾರ್ಯ ಸ್ಥಗಿತಗೊಳಿಸಿದ ನಂತರ ಅವರು ಚಿತ್ರರಂಗದಿಂದ ದೂರವೇ ಉಳಿದಿದ್ದರು. ಅದ್ವೈತವನ್ನು ಪ್ರತಿಪಾದಿಸಿದ ನಿಸರ್ಗದತ್ತ ಮಹಾರಾಜ್ ಅವರ ಕುರಿತು ನಾಗೇಶ್ ಬಾಬ ಅವರು ತಯಾರಿಸಿದ (2009) ‘ತತ್ವಮಸಿ - ಯು ಆರ್ ದಟ್' 87 ನಿಮಿಷಗಳ ಇಂಗ್ಲಿಷ್ ಸಾಕ್ಷ್ಯಚಿತ್ರ ಅಂತಾರಾಷ್ಟ್ರೀಯ ವೇದಿಕೆಗಳಲ್ಲಿ ಪ್ರದರ್ಶನಗೊಂಡಿದೆ.

  (ಮಾಹಿತಿ ಕೃಪೆ- Shashidhara Chitradurga ಫೇಸ್‌ಬುಕ್ ಖಾತೆ)

  English summary
  Kannada Senior Writer, Director Nagesh Baba Passed Away on Monday.

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X