Just In
Don't Miss!
- News
ಪಶ್ಚಿಮ ಬಂಗಾಳ ಚುನಾವಣೆ; ಈ ಬಾರಿ ಅಭ್ಯರ್ಥಿಗಳ ಆಯ್ಕೆಯಲ್ಲೂ ಬದಲಾವಣೆ
- Education
IIMB Recruitment 2021: ಅಕಾಡೆಮಿಕ್ ಅಸೋಸಿಯೇಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Automobiles
ಬಿಡುಗಡೆಯ ನಂತರ ಎರಡನೇ ಬಾರಿಗೆ ಬೆಲೆ ಹೆಚ್ಚಳ ಪಡೆದುಕೊಂಡ ನಿಸ್ಸಾನ್ ಮ್ಯಾಗ್ನೈಟ್
- Sports
ಐಪಿಎಲ್ 2021: ಹೊಸ ಆವೃತ್ತಿಗೆ ಸಿದ್ಧತೆ, ಚೆನ್ನೈಗೆ ಬಂದಿಳಿದ ಧೋನಿ, ರಾಯುಡು
- Finance
ಚಿನ್ನದ ಬೆಲೆ ಇಳಿಕೆ: ಗರಿಷ್ಠ ಮಟ್ಟಕ್ಕಿಂತ 11,500 ರೂ. ಕಡಿಮೆ
- Lifestyle
ರಾತ್ರಿ ವೇಳೆ ಬೇಳೆಕಾಳು ತಿನ್ನಬೇಕೋ ಬೇಡವೋ, ಆಯುರ್ವೇದ ಏನು ಹೇಳುತ್ತದೆ?
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಕನ್ನಡದ ಈ ಸ್ಟಾರ್ ಪತ್ನಿಯರು ಯಾರಿಗೂ ಕಡಿಮೆ ಇಲ್ಲ!

ಚಿತ್ರರಂಗದಲ್ಲಿ ಸ್ಟಾರ್ ನಟರಿಗೆ ಸಿಕ್ಕಾಪಟ್ಟೆ ಅಭಿಮಾನಿಗಳು ಇರುತ್ತಾರೆ. ಸಾಮಾಜಿಕ ಜಾಲತಾಣದಲ್ಲಿ ಅವರನ್ನು ಅನೇಕರು ಫಾಲೋ ಮಾಡುತ್ತಿರುತ್ತಾರೆ. ಕನ್ನಡದಲ್ಲಿ ಈಗೀಗ ಬಹುತೇಕ ಸ್ಟಾರ್ ನಟರು ಸೋಷಿಯಲ್ ಮೀಡಿಯಾದಲ್ಲಿ ಸಕ್ರೀಯರಾಗಿದ್ದಾರೆ. ಅಷ್ಟೆ ಅಲ್ಲದೆ ಸ್ಟಾರ್ ನಟರ ಪತ್ನಿಯರು ಕೂಡ ಸಾಮಾಜಿಕ ಜಾಲತಾಣದಲ್ಲಿ ಸೌಂಡ್ ಮಾಡುತ್ತಿದ್ದಾರೆ.
ಕನ್ನಡದ ಕೆಲವು ನಟರ ಪತ್ನಿಯರು ಚಿತ್ರರಂಗದಲ್ಲಿ ತೊಡಗಿಸಿಕೊಂಡಿಲ್ಲ. ಸಿನಿಮಾದಲ್ಲಿ ಹೀರೋಯಿನ್ ಆಗದಿದ್ದರೂ ಕೂಡ ಇವರು ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ಫೇಮಸ್ ಆಗಿದ್ದಾರೆ. ಟ್ವಿಟ್ಟರ್ ಖಾತೆಗಳಲ್ಲಿ ಸಾಕಷ್ಟು ಫಾಲೋವರ್ಸ್ ಗಳನ್ನು ಹೊಂದಿದ್ದಾರೆ. ತಮ್ಮ ಪತಿಯ ಸಿನಿಮಾಗಳ ಮತ್ತು ಕುಟುಂಬದ ವಿಷಯಗಳನ್ನು ಟ್ವಿಟ್ಟರ್ ನಲ್ಲಿ ಹಂಚಿಕೊಳ್ಳುವ ಇವರು ಅಭಿಮಾನಿಗಳ ಜೊತೆ ಸದಾ ಸಂಪರ್ಕದಲ್ಲಿ ಇದ್ದಾರೆ. ಈ ಪೈಕಿ ಸುದೀಪ್ ಪತ್ನಿ ಪ್ರಿಯಾ ಸುದೀಪ್ ಅತಿ ಹೆಚ್ಚು ಫಾಲೋವರ್ಸ್ ಗಳನ್ನು ಹೊಂದಿದ್ದಾರೆ. ಮುಂದೆ ಓದಿ...

ಪ್ರಿಯಾ ಸುದೀಪ್
ನಟ ಸುದೀಪ್ ಟ್ವಿಟ್ಟರ್ ನಲ್ಲಿ ಅತಿ ಹೆಚ್ಚು ಫಾಲೋವರ್ಸ್ ಹೊಂದಿರುವ ಕನ್ನಡ ನಟನಾಗಿದ್ದಾರೆ. ಅದೇ ರೀತಿ ಅವರ ಪತ್ನಿ ಪ್ರಿಯಾ ಕೂಡ ಟ್ವಿಟ್ಟರ್ ನಲ್ಲಿ ಸದ್ಯ 65.8 ಸಾವಿರ ಫಾಲೋವರ್ಸ್ ಗಳನ್ನು ಹೊಂದಿದ್ದಾರೆ. ಸುದೀಪ್ ಸಿನಿಮಾಗಳ ಜೊತೆಗೆ ತಮ್ಮ ಕುಟುಂಬದ ಕೆಲ ಸಂತಸದ ವಿಷಯಗಳನ್ನು ಪ್ರಿಯಾ ಸುದೀಪ್ ಟ್ವಿಟ್ಟರ್ ನಲ್ಲಿ ಹಂಚಿಕೊಳ್ಳುತ್ತಾ ಇರುತ್ತಾರೆ.

ಪರಿಮಳ ಜಗ್ಗೇಶ್
ನವರಸ ನಾಯಕ ಜಗ್ಗೇಶ್ ರಂತೆ ಅವರ ಪತ್ನಿ ಪರಿಮಳ ಜಗ್ಗೇಶ್ ಕೂಡ ಟ್ವಿಟ್ಟರ್ ಹೆಚ್ಚು ಸಕ್ರೀಯರಾಗಿದ್ದಾರೆ. ಸದ್ಯ ಅವರ ಟ್ವಿಟ್ಟರ್ ಖಾತೆಯಲ್ಲಿ 9 ಸಾವಿರಕ್ಕೂ ಹೆಚ್ಚು ಫಾಲೋವರ್ಸ್ ಇದ್ದಾರೆ. ಇನ್ನು ಪರಿಮಳ ಜಗ್ಗೇಶ್ ತಮ್ಮ ಕಿರುತೆರೆಯ ಕಾರ್ಯಕ್ರಮವನ್ನು ಸದ್ಯದಲ್ಲಿಯೇ ಶುರು ಮಾಡಲಿದ್ದಾರೆ.
ಕಿರುತೆರೆಯಲ್ಲಿ ಕೆರಿಯರ್ ಶುರು ಮಾಡಿದ ಜಗ್ಗೇಶ್ ಪತ್ನಿ

ವಿಜಯಲಕ್ಷ್ಮಿ ದರ್ಶನ್
ಚಾಲೆಂಜಿಂಗ್ ಸ್ಟಾರ್ ದರ್ಶನ್ ಪತ್ನಿ ವಿಜಯಲಕ್ಷ್ಮಿ 17 ಸಾವಿರ ಟ್ವಿಟ್ಟರ್ ಫಾಲೋವರ್ಸ್ ಗಳನ್ನು ಹೊಂದಿದ್ದಾರೆ. ದರ್ಶನ್ ಅವರ ಸಾವಿರಾರು ಅಭಿಮಾನಿಗಳು ಅವರನ್ನು ಫಾಲೋ ಮಾಡುತ್ತಿದ್ದಾರೆ.
ಹಣ ಪಡೆಯದೆ ಟಿವಿ ಕಾರ್ಯಕ್ರಮದಲ್ಲಿ ಜಗ್ಗೇಶ್ ಪತ್ನಿ ಭಾಗಿ

ವಿದ್ಯಾ ಶ್ರೀಮುರಳಿ
ರೋರಿಂಗ್ ಸ್ಟಾರ್ ಶ್ರೀಮುರಳಿ ಪತ್ನಿ ವಿದ್ಯಾ ಹೆಚ್ಚಾಗಿ ಯಾವುದೇ ಕಾರ್ಯಕ್ರಮಗಳಲ್ಲಿ ಕಾಣಿಸಿಕೊಳ್ಳುವುದಿಲ್ಲ. ಆದರೆ ಟ್ವಿಟ್ಟರ್ ನಲ್ಲಿ ಸಖತ್ ಆಕ್ಟಿವ್ ಆಗಿರುವ ಅವರು ಸದ್ಯ 5 ಸಾವಿರ ಫಾಲೋವರ್ಸ್ ಹೊಂದಿದ್ದಾರೆ.

ಶಿಲ್ಪಾ ಗಣೇಶ್
ನಟ ಗಣೇಶ್ ಪತ್ನಿ ಶಿಲ್ಪಾ ಗಣೇಶ್ ಟ್ವಿಟ್ಟರ್ ನಲ್ಲಿ ಹೆಚ್ಚಿನ ಫಾಲೋವರ್ಸ್ ಹೊಂದಿದ್ದಾರೆ. 53 ಸಾವಿರಕ್ಕೂ ಹೆಚ್ಚಿನ ಜನರು ಅವರನ್ನು ಟ್ವಿಟ್ಟರ್ ನಲ್ಲಿ ಹಿಂಬಾಲಿಸುತ್ತಿದ್ದಾರೆ. ಬಿ.ಜೆ.ಪಿ ರಾಜ್ಯ ಮಹಿಳಾ ಮೋಕ್ಷ ಉಪಾಧ್ಯಕ್ಷೆ ಆಗಿರುವ ಕಾರಣ ಅವರ ಫಾಲೋವರ್ಸ್ ಸಂಖ್ಯೆ ಕೂಡ ಹೆಚ್ಚಿದೆ.