ಹಿರಿಯ ನಟಿ ಜಯಂತಿ ಅಸ್ವಸ್ಥ: ಬೆಂಗಳೂರಿನ ವಿಕ್ರಂ ಆಸ್ಪತ್ರೆಗೆ ದಾಖಲು

By Harshitha

Recommended Video

ಹಿರಿಯ ನಟಿ ಜಯಂತಿ ಆಸ್ಪತ್ರೆಗೆ ದಾಖಲು | Filmibeat Kannada

ಚಂದನವನದ 'ಅಭಿನಯ ಶಾರದೆ' ಜಯಂತಿ ಆರೋಗ್ಯದಲ್ಲಿ ಏರುಪೇರಾಗಿದೆ. ಅಸ್ತಮಾದಿಂದ ಬಳಲುತ್ತಿರುವ ನಟಿ ಜಯಂತಿ ನಿನ್ನೆ ರಾತ್ರಿ ತೀವ್ರ ಅಸ್ವಸ್ಥಗೊಂಡ ಹಿನ್ನೆಲೆ, ಅವರನ್ನ ಬೆಂಗಳೂರಿನ ಸಿದ್ವಿನ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.

ವೈದ್ಯರ ಸಲಹೆ ಮೇರೆಗೆ ಇಂದು ಬೆಳಗ್ಗೆ ನಟಿ ಜಯಂತಿ ಅವರನ್ನ ಬೆಂಗಳೂರಿನ ಕನ್ನಿಂಗ್ ಹ್ಯಾಂ ರಸ್ತೆ ಬಳಿ ಇರುವ ವಿಕ್ರಂ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ತೀವ್ರ ನಿಗಾ ಘಟಕದಲ್ಲಿ (ಐ.ಸಿ.ಯು) ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.

Kannada Veteran Actress Jayanthi unwell: admitted to Vikram Hospital

''35 ವರ್ಷಗಳಿಂದಲೂ ಅಮ್ಮ ಅಸ್ತಮಾದಿಂದ ಬಳಲುತ್ತಿದ್ದಾರೆ. ಪ್ರತಿನಿತ್ಯ ಇನ್ ಹೇಲರ್ ಬಳಸುತ್ತಿದ್ದರು. ಆದ್ರೆ ಆಸ್ಪತ್ರೆಗೆ ಯಾವತ್ತೂ ದಾಖಲಾಗಿರಲಿಲ್ಲ. ನಿನ್ನೆ ರಾತ್ರಿ ಅಸ್ವಸ್ಥಗೊಂಡರು. ತಕ್ಷಣ ಅವರನ್ನ ಸಿದ್ವಿನ್ ಆಸ್ಪತ್ರೆಗೆ ದಾಖಲು ಮಾಡಿದ್ವಿ. ಬೆಳಗ್ಗೆ ವೈದ್ಯರ ಸಲಹೆ ಮೇರೆಗೆ ವಿಕ್ರಂ ಆಸ್ಪತ್ರೆಗೆ ಶಿಫ್ಟ್ ಮಾಡಿದ್ದೇವೆ. ಡಾ.ಸತೀಶ್ ಚಿಕಿತ್ಸೆ ನೀಡುತ್ತಿದ್ದಾರೆ. ಮುಂದಿನ 24 ಗಂಟೆ observation ನಲ್ಲಿರಬೇಕು ಎಂದು ವೈದ್ಯರು ತಿಳಿಸಿದ್ದಾರೆ. ಸದ್ಯ ಅಮ್ಮ ವೆಂಟಿಲೇಟರ್ ನಲ್ಲಿದ್ದಾರೆ'' ಎಂದು ಜಯಂತಿ ಪುತ್ರ ಕೃಷ್ಣ ಕುಮಾರ್ ತಿಳಿಸಿದ್ದಾರೆ.

ಜಯಂತಿ ಕನ್ನಡ, ತೆಲುಗು, ತಮಿಳು, ಮಲಯಾಳಂ, ಹಿಂದಿ ಹಾಗೂ ಮರಾಠಿ ಭಾಷೆಯ 500ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ. ವರನಟ ಡಾ.ರಾಜ್ ಕುಮಾರ್ ಜೊತೆಗೆ ಅತಿ ಹೆಚ್ಚು ಚಿತ್ರಗಳಲ್ಲಿ ನಾಯಕಿ ಆಗಿ ಅಭಿನಯಿಸಿರುವ ಖ್ಯಾತಿ ಕೂಡ ಜಯಂತಿ ಅವರಿಗೆ ಸಲ್ಲುತ್ತದೆ.

ಡಾ.ರಾಜ್ ಕುಮಾರ್ ಪ್ರಶಸ್ತಿ, ರಾಜ್ಯ ಪ್ರಶಸ್ತಿ ಹಾಗೂ ಫಿಲ್ಮ್ ಫೇರ್ ಸೇರಿದಂತೆ ಹಲವಾರು ಪ್ರಶಸ್ತಿಗಳನ್ನು ನಟಿ ಜಯಂತಿ ಮುಡಿಗೇರಿಸಿಕೊಂಡಿದ್ದಾರೆ.

More from Filmibeat

English summary
Kannada Veteran Actress Jayanthi is suffering from Asthama. She has been admitted to Vikram Hospital, Bengaluru.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X