"ಗಡಿಪಾರು ಮಾಡುವ ಅತಿರೇಕಕ್ಕೆ ಹೋಗುವ ಬದಲು?": ಚೇತನ್ ವೀಸಾ ರದ್ದು ವಿಚಾರದ ಬಗ್ಗೆ ಕಿಶೋರ್ ಪ್ರಶ್ನೆ

ನಟ ಚೇತನ್ ಅಹಿಂಸಾ ವೀಸಾ ರದ್ದುಗೊಳಿಸಿದ್ದು, ಕೇಂದ್ರ ಗೃಹ ಇಲಾಖೆ ಈಗಾಗಲೇ ನೋಟಿಸ್ ಜಾರಿ ಆಗಿದೆ. ಇನ್ನು ಚೇತನ್‌ಗೆ ನೀಡಿದ್ದ ಭಾರತೀಯ ಸಾಗರೋತ್ತರ ಪೌರತ್ವವನ್ನು ಕೂಡ ರದ್ದುಗೊಳಿಸಿದ್ದಾಗಿ ವರದಿಯಾಗಿತ್ತು. ಈ ಸಂಬಂಧ ಅವರು ಇತ್ತೀಚೆಗೆ ಸುದ್ದಿಗೋಷ್ಠಿ ನಡೆಸಿ ಕೇಂದ್ರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ಇದೇ ವಿಚಾರದ ಬಗ್ಗೆ ನಟ ಕಿಶೋರ್ ಈಗ ಪ್ರತಿಕ್ರಿಯಿಸಿದ್ದಾರೆ.

ವಿವಾದಾತ್ಮಕ ಹೇಳಿಕೆಗಳಿಂದ, ಸೋಶಿಯಲ್ ಮೀಡಿಯಾ ಪೋಸ್ಟ್‌ಗಳಿಂದ ನಟ ಚೇತನ್ ಪದೇ ಪದೇ ಸುದ್ದಿ ಆಗುತ್ತಾರೆ. ಹಿಂದುತ್ವದ ಬಗ್ಗೆ ಪೋಸ್ಟ್ ಮಾಡಿದ್ದಕ್ಕೆ ಅವರನ್ನು ಬಂಧಿಸಲಾಗಿತ್ತು. ಇದೀಗ ವೀಸಾ ರದ್ದು, OCI ಕ್ಯಾನ್ಸಲ್ ಮಾಡಿ ನೋಟಿಸ್ ನೀಡಲಾಗಿದೆ. ಈ ಬಗ್ಗೆ ಕಿಶೋರ್ ಇನ್‌ಸ್ಟಾಗ್ರಾಮ್‌ನಲ್ಲಿ ತಮ್ಮ ಅಭಿಪ್ರಾಯ ಬರೆದುಕೊಂಡಿದ್ದಾರೆ. ಈ ಪೋಸ್ಟ್ ಬಗ್ಗೆಯೂ ಪರ ವಿರೋಧ ಚರ್ಚೆ ನಡೀತಿದೆ. ಇನ್ನು ಕಿಶೋರ್ ಅವರು ತಮ್ಮ ಬಗ್ಗೆ ಮಾತನಾಡಿದ್ದಕ್ಕೆ ನಟ ಚೇತನ್‌ ಧನ್ಯವಾದ ತಿಳಿಸಿದ್ದಾರೆ. ಸದ್ಯ ಈ ಪೋಸ್ಟ್‌ಗಳು ಸಖತ್ ವೈರಲ್ ಆಗ್ತಿದೆ.

 Kantara Actor Kishore Reacts To Actor Chetan Ahimsas Visa Cancelled issue

"ಹಿಂದುತ್ವ' ಅನ್ನುವ ಪದ ವರ್ತಮಾನದ ರಾಜಕೀಯ ಪರಿಸ್ಥಿತಿಯಲ್ಲಿ ಹಿಂದೂ ಧರ್ಮ ಅಲ್ಲ. ನಿಜವಾದ ಹಿಂದೂ ಧರ್ಮ, ಸಕಲರನ್ನೂ ಒಳಗೊಂಡ ವಸುಧೆಯೇ ಒಂದು ಕುಟುಂಬವೆಂದು ನೋಡುವ ವಿಶಾಲ ಮನೋಸ್ಥಿತಿ.
ಆದರೆ 'ಹಿಂದುತ್ವ' ಎನ್ನುವ ಪದ ಬಳಕೆಯಾಗುತ್ತಿರುವುದು ಒಂದು ಪಕ್ಷದ, ಒಂದು ಸಂಘದ, ಅಧಿಕಾರಕ್ಕಾಗಿ ಒಡೆದಾಳುವ, ಪರದ್ವೇಷದ, ಮೂಲಭೂತವಾದಿ ವೈದಿಕ ಸಂಪ್ರದಾಯದ ಸಂಕುಚಿತ ಪರಿಕಲ್ಪನೆಯಾಗಿಯಷ್ಟೆ."

ಹಾಗಾಗಿ ಈ ಜೀವ ವಿರೋಧಿ ರಾಜಕೀಯದ ಟೀಕೆಯಿಂದ ಹಿಂದೂಗಳಿಗೆಲ್ಲರಿಗೂ ಅಪಮಾನವಾಯಿತೆನ್ನುವುದು ಎಷ್ಟು ಉಚಿತ?? ಹಾಗೆ ಅವಮಾನ ಪಡಲೇಬೇಕೆಂದರೆ ವೈದಿಕ ಪರಂಪರೆ ಇಂದಿಗೂ ಪ್ರತಿಪಾದಿಸುತ್ತಿರುವ ನಮ್ಮಲ್ಲೇ ಇರುವ ಜಾತಿ ಪದ್ಧತಿ, ಅಸ್ಪೃಶ್ಯತೆ, ಲಿಂಗ ಬೇಧ ಇವುಗಳಿಂದಲ್ಲವೇ? ಆ ನಿಟ್ಟಿನಲ್ಲಿ ನಮ್ಮನ್ನು ನಾವು ತಿದ್ದಿಕೊಂಡು ಹಿಂದೂ ಧರ್ಮವನ್ನು ಎಲ್ಲರಿಗೂ ಮಾದರಿಯಾಗಿಸಬೇಕಲ್ಲವೇ? ನಮ್ಮ ತಪ್ಪುಗಳನ್ನು ಎತ್ತಿ ತೋರಿಸುವ ನಮ್ಮದೇ ಜನರನ್ನು ನಿಂದಿಸುವ, ಆರೋಪಿಸುವ, ಜೈಲಿಗೆ ಹಾಕುವ ಅಥವಾ ಗಡಿಪಾರು ಮಾಡುವ ಅತಿರೇಕಕ್ಕೆ ಹೋಗುವ ಬದಲು?" ಎಂದು ಕಿಶೋರ್ ಪ್ರಶ್ನಿಸಿದ್ದಾರೆ.

 Kantara Actor Kishore Reacts To Actor Chetan Ahimsas Visa Cancelled issue

ತಮ್ಮ ವೀಸಾ ಹಾಗೂ OCI ಕ್ಯಾನ್ಸಲ್ ವಿಚಾರವಾಗಿ ಏಪ್ರಿಲ್ 15ರಂದು ಸುದ್ದಿಗೋಷ್ಠಿ ನಡೆಸಿ ಚೇತನ್ ಆಕ್ರೋಶ ವ್ಯಕ್ತಪಡಿಸಿದ್ದರು. "ಸತ್ಯದ ಟ್ವೀಟ್ ಮಾಡಿದ್ದಕ್ಕೆ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದೇನೆ ಅಂತ 3 ದಿನ ಜೈಲಿಗೆ ಕಳಿಸಿದ್ರು. OCI ಕಾರ್ಡ್ ನನಗೆ ನೀಡಿದ್ದಾರೆ. ಇದರಲ್ಲಿ ಮತ ಹಾಕೋದು, ಚುನಾವಣೆ ನಿಲ್ಲುವುದು, ಸರ್ಕಾರಿ ನೌಕರನಾಗಿ ಕೆಲಸ ಮಾಡೋದು ಬಿಟ್ಟು ಉಳಿದ ಎಲ್ಲಾ ಹಕ್ಕು ನನಗೆ ಇದೆ. ನೀವು ತುಂಬ ಕ್ರಿಮಿನಲ್ ಕೆಲಸಗಳಲ್ಲಿ ಭಾಗಿಯಾಗುತ್ತಿದ್ದೀರಾ. ಆದ್ದರಿಂದ ನಿಮ್ಮ ವೀಸಾ ಯಾಕೆ ರದ್ದು ಮಾಡಬಾರದು ಅಂತ 10 ತಿಂಗಳ ಹಿಂದೆ ಶೋಕಾಸ್ ನೋಟೀಸ್ ನೀಡಿದ್ದರು. ಆಗ ಗೃಹ ಇಲಾಖೆಗೆ ಹೋಗಿ ಎಲ್ಲ ದಾಖಲೆ ಸಲ್ಲಿಸಿ ಬಂದಿದ್ದೆ"

"ನನ್ನ ತಂದೆ ಮತ್ತು ತಾಯಿ ಭಾರತದವರೇ ಆಗಿರೋದು 2018ರಲ್ಲಿ OCI ಕೊಟ್ಟರು. ಅದರ ಜೊತೆಗೆ ನನ್ನ ಬಳಿ ಪ್ಯಾನ್ ಕಾರ್ಡ್, ಆಧಾರ್ ಕಾರ್ಡ್ ಎಲ್ಲವೂ ಇದೆ. ನಾನು ಕೂಡ ದೇಶಕ್ಕೆ ಟ್ಯಾಕ್ಸ್ ಕಟ್ಟುತ್ತೇನೆ. ಈಗ ತಕ್ಷಣವೇ OCI ರದ್ದು ಮಾಡಿದ್ದೇವೆ ಅಂತ ನೋಟಿಸ್ ನೀಡಿದ್ದಾರೆ. ಇದರಲ್ಲಿ ಯಾವುದೇ ಅರ್ಥ ಇಲ್ಲ. ನಾನು ಇದೇ ದೇಶದವನು, ನನಗೆ ಅಮೆರಿಕಕ್ಕೆ ಹೋಗುವ ಮನಸ್ಸಿಲ್ಲ" ಎಂದು ಚೇತನ್ ಅಹಿಂಸಾ ಹೇಳಿದ್ದರು.

More from Filmibeat

English summary
Kantara Actor Kishore Reacts To Actor Chetan Ahimsa's Visa Cancelled issue. He Asks Instead of going to the extremes of vilifying, accusing, imprisoning or deporting our own people who point out our faults?. know more.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X