'ಭಜರಂಗಿ' ಚಿತ್ರದಲ್ಲಿ ನಟಿಸಿ ಬಜರಂಗದಳ ನಿಷೇಧದ ಬಗ್ಗೆ ಏನಂತೀರಾ? ಕರ್ನಾಟಕಕ್ಕೆ ನಿಮ್ಮ ಕೊಡುಗೆ ಏನು?
ನಟ ಶಿವರಾಜ್‌ಕುಮಾರ್ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿ ಚುನಾವಣೆ ಪ್ರಚಾರ ನಡೆಸುತ್ತಿರುವುದಕ್ಕೆ ಟೀಕೆ ವ್ಯಕ್ತವಾಗುತ್ತಲೇ ಇದೆ. ಶಿವಣ್ಣ ಕೂಡ ಇದಕ್ಕೆಲ್ಲಾ ತಿರುಗೇಟು ಕೊಡುತ್ತಾ ಬರ್ತಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗಳ ಪರ ಪ್ರಚಾರ ಮುಂದುವರೆಸಿದ್ದಾರೆ. ಇದೇ ವಿಚಾರಕ್ಕೆ ಸಂಬಂಧಿಸಿ ಬಿಗ್‌ಬಾಸ್ ಖ್ಯಾತಿಯ ಪ್ರಶಾಂತ್ ಸಂಬರಗಿ ಇತ್ತೀಚಿಗೆ ಶಿವಣ್ಣನ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿದ್ದರು. ನಂತರ ಡಿಲೀಟ್ ಮಾಡಿದ್ದರು.
ಪ್ರಶಾಂತ್ ಸಂಬರಗಿ ಹೇಳಿಕೆ ವಾಪಸ್ ಪಡೆಯಬೇಕು ಎಂದು ಶಿವಣ್ಣ ಹುಬ್ಬಳ್ಳಿಯಲ್ಲಿ ಹೇಳಿದ್ದರು. ಇದೀಗ ಮತ್ತೆ 10 ಪ್ರಶ್ನೆಗಳನ್ನು ಕೇಳಿ ಶಿವಣ್ಣನನ್ನು ಪ್ರಶಾಂತ್ ಸಂಬರಗಿ ಕೆಣಕಿದ್ದಾರೆ.

ಶಿವಣ್ಣನಿಗೆ ಹತ್ತು ಪ್ರಶ್ನೆಗಳು.?
1.ನೀವೇ ಹಿಂದುವಾಗಿ 'ಭಜರಂಗಿ' ಹೆಸರಿನಲ್ಲಿ ನಟಿಸಿ ಕಾಂಗ್ರೆಸ್ ನವರ ಬಜರಂಗದಳದ ನಿಷೇಧದ ಬಗ್ಗೆ ತಮ್ಮ ನಿಲುವು ಏನು?
2. ಒಂದು ಉತ್ತಮ ಮತ್ತು ಸತ್ಯ ವಾದ ಚಿತ್ರವಾದ ದಿ ಕೇರಳ ಸ್ಟೋರಿ ಚಿತ್ರವನ್ನು ನಿಮ್ಮ ಕಾಂಗ್ರೆಸ್ ನಿಷೇದಿಸುವುದಕ್ಕೆ ಮುಂದಾಗಿದೆ ನೀವು ಕನ್ನಡದ ಮೇರು ನಟನಾಗಿ ಮತ್ತು ನಿರ್ಮಾಪನಾಗಿ ನಿಮ್ಮ ನಿಲುವೇನು?
3. ನೀವು ಚಿತ್ರರಂಗದಿಂದ ಬಂದವರು, ಬೆಂಗಳೂರಿನಲ್ಲಿ 'ದಿ ಕಾಶ್ಮೀರ್ ಫೈಲ್ಸ್' ಚಿತ್ರ ಪ್ರದರ್ಶಿಸಿದಾಗ ಕಾಂಗ್ರೆಸ್ ಅದಕ್ಕೆ ವಿರೋಧ ಪಡಿಸಿತ್ತು. ಆಗ ಏಕೆ ನಿಮ್ಮ ದಿವ್ಯ ಮೌನ?
4. ಕನ್ನಡಿಗರ ಪರವಾಗಿದ್ದ ಕನ್ನಡ ಡಬ್ಬಿಂಗ್ ವಿರೋಧಿಸಿ ಈಗ ಅನ್ಯ ಭಾಷೆಯ ಚಿತ್ರದಲ್ಲಿ ನಟಿಸುತಿದ್ದೀರಾ.. ಇದು ಸರಿನಾ?
5. ಡಾ ರಾಜಕುಮಾರ್ ನಮ್ಮ ಆರಾಧ್ಯ ದೈವ ಮತ್ತು ರಾಜಕೀಯದಿಂದ ದೂರವಾಗಿದ್ದರು ಗೋಕಾಕ್ ಚಳುವಳಿ ಮತ್ತು ಅವರ ಕನ್ನಡ ಪರ ಹೋರಾಟ ಎಲ್ಲರಿಗೂ ಗೊತ್ತಿರುವ ವಿಚಾರ,ಅವರ ಮಗನಾಗಿ ಕರ್ನಾಟಕಕ್ಕೆ ನಿಮ್ಮ ಕೊಡುಗೆ ಏನು?
6. 2020 ರಲ್ಲಿ ಸ್ಯಾಂಡಲ್ ಹುಡ್ ಡ್ರಗ್ ವಿಷಯದಲ್ಲಿ ನೀವು ಏಕೆ ಮೌನವಾಗಿದ್ದಿರಿ? ಕರ್ನಾಟಕವನ್ನು ಮಾದಕ ಮುಕ್ತ ಮಾಡಲು ನಮ್ಮ ಯುವ ಜನರಿಗೆ ತಮ್ಮ ಸಂದೇಶವೇನು?
7. ಪಿಎಫ್‌ಐ ಮತ್ತು ಜಿಹಾದಿ ಜನರಿಂದ ಆರ್‌ಎಸ್‌ಎಸ್ ಹಿಂದೂ ಕಾರ್ಯಕರ್ತರ ಹತ್ಯೆಗಳ ಬಗ್ಗೆ ನಿಮ್ಮ ನಿಲುವು ಏನು .?
8. ನಿಮ್ಮ ಎಲ್ಲಾ ಚಿತ್ರದಲ್ಲಿ ಹೆಣ್ಣು ಮಕ್ಕಳನ್ನು ಗೌರವಿಸುವ ಪಾತ್ರ ಮಾಡುವ ತಾವು ಲವ್ ಜಿಹಾದ್ ಮೇಲೆ ನಿಮ್ಮ ನಿಲುವೇನು?
9. ಡಿಕೆ ಶಿವಕುಮಾರ್ ಅವರ ಭ್ರಷ್ಟಾಚಾರ ಮತ್ತು ಆದಾಯ ತೆರಿಗೆ ಪ್ರಕರಣದ ಬಗ್ಗೆ ನಿಮ್ಮ ಅಭಿಪ್ರಾಯವೇನು?
10. ಮುಸ್ಲಿಂ ಓಲೈಕೆ ಕಾಂಗ್ರೆಸ್ ಮಂತ್ರವಾಗಿದೆ. ಇದರ ಬಗ್ಗೆ ತಮ್ಮ ಅಭಿಪ್ರಾಯ? ಹಿಂದೂಗಳು ನಿಮ್ಮ ಚಿತ್ರವನ್ನು ನೋಡಬಾರದಾ.?
ಹೀಗೆ 10 ಪ್ರಶ್ನೆಗಳನ್ನು ಕೇಳಿ ನಟ ಶಿವರಾಜ್‌ಕುಮಾರ್‌ಗೆ ಪ್ರಶಾಂತ್ ಸಂಬರಗಿ ಕೇಳಿದ್ದಾರೆ. ಇದಕ್ಕೆ ಶಿವಣ್ಣ ಉತ್ತರಿಸುತ್ತಾರಾ? ಕಾದು ನೋಡಬೇಕಿದೆ.
ಪ್ರಶಾಂತ್ ಹಿಂದಿನ ಪೋಸ್ಟ್‌ನಲ್ಲಿ ಏನಿತ್ತು?
"ಶಿವಣ್ಣ ಯಾವತ್ತೂ ಸ್ಕ್ರಿಪ್ಟ್ ಕೇಳೋದೇ ಇಲ್ಲ. ಆದರೆ, ಪೇಮೆಂಟ್ ತುಂಬಾನೇ ಮುಖ್ಯ. ಒಪ್ಪಿಕೊಂಡಿದ್ದ ಸಿನಿಮಾ ಮಾಡ್ತಾರೆ. ತುಂಬಾ ಎಮೋಷನಲ್ ಜೀವಿ ನಮ್ಮ ಶಿವಣ್ಣ. ಸಿನಿಮಾ ಫ್ಲಾಪ್ ಆದರೂ, ಅವರು ಕೇರ್ ಮಾಡಲ್ಲ. ಮತ್ತೆ ಪೇಮೆಂಟ್ ತಗೊಂಡು ಇನ್ನೊಂದು ಫಿಲ್ಮ್ ಗೆ ಸೈನ್ ಮಾಡ್ಬಿಡ್ತಾರೆ. ಅದೇ ಫಾರ್ಮುಲಾ ರಾಜಕೀಯದಲ್ಲೂ ಅನುಸರಿಸಿದ್ದಾರೆ. ಕ್ಯಾಂಡಿಡೇಟ್ ಗೆದ್ರೆ ಏನು ಸೋತ್ರೆ ಏನು ಎಲ್ಲಾ ಒಂದೇ. ಏನೋ ಹೇಳ್ತಾರಲ್ಲ ಗೆದ್ದರೆ ಬೆಟ್ಟ. ಇಲ್ಲ ಅಂದ್ರೆ.. ಬಂತಾ ಪ್ಯಾಕೆಟ್.. ಸರಿ ಆಲ್ ರೈಟ್ ಮುಂದೆ ಹೋಗೋಣ" ಎಂದು ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಿದ್ದರು.
ಸಂಬರಗಿಗೆ ಶಿವಣ್ಣನ ತಿರುಗೇಟು
ಹುಬ್ಬಳ್ಳಿಯಲ್ಲಿ ಚುನಾವಣೆ ಪ್ರಚಾರದ ವೇಳೆ ಸಂಬರಗಿ ಪೋಸ್ಟ್ ಬಗ್ಗೆ ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸಿದ್ದ ಶಿವಣ್ಣ "ಆ ರೀತಿ ಮಾತಾಡೋದು ಸರಿ ಅಲ್ಲ. ಆ ಮಾತನ್ನು ವಾಪಸ್ ತಗೆದುಕೊಳ್ಳಬೇಕು. ನಮ್ಮ ಹತ್ರ ಹಣನೇ ಇಲ್ವಾ? ನಾನು ಹಣ ಪಡೆದು ಇಲ್ಲಿ ಬಂದಿಲ್ಲ, ವ್ಯಾಪರಕ್ಕೆ ಬಂದಿಲ್ಲ. ಹೃದಯದಿಂದ ನಾನು ಬಂದಿರೋದು. ಮನುಷ್ಯನಿಗಾಗಿ ಬಂದಿದ್ದೇನೆ. ಯಾರನ್ನೂ ಟೀಕೆ ಮಾಡೋಕೆ ನಾನು ಬಂದಿಲ್ಲ. ಬೇರೆ ಯಾರನ್ನೂ ಟೀಕೆ ಮಾಡೋಕೆ ಬಂದಿಲ್ಲ. ನೀವ್ ಆನ್ಸರ್ ಮಾಡಿ ನೋಡೋಣ. ನಾನು ಎಲ್ಲ ಪ್ರಶ್ನೆಗೂ ಉತ್ತರ ಕೊಡಲ್ಲ" ಎಂದು ಹೇಳಿದ್ದರು.


Click it and Unblock the Notifications











