Just In
Don't Miss!
- Education
NIA Recruitment 2021: 15 ಡೆಪ್ಯುರಿಟಿ ಸೂಪರಿಂಟೆಂಡೆಂಟ್ ಆಫ್ ಪೊಲೀಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Automobiles
ಬೇಡಿಕೆ ಹೆಚ್ಚಿದಂತೆ ನಿಸ್ಸಾನ್ ಮ್ಯಾಗ್ನೈಟ್ ಕಾರಿನ ಕಾಯುವಿಕೆ ಅವಧಿಯಲ್ಲಿ ಮತ್ತಷ್ಟು ಹೆಚ್ಚಳ
- Finance
ತನ್ನ ಗೌಪ್ಯತೆ ನೀತಿ ಮತ್ತು ಸೇವಾ ನಿಯಮಗಳ ನವೀಕರಣವನ್ನು ಮುಂದೂಡಿದ ವಾಟ್ಸಾಪ್
- News
ಕೊವಿಡ್-19 ಲಸಿಕೆ ಬೇಕೇ; ಈ ದಾಖಲೆಗಳೊಂದಿಗೆ ನಿಯಮ ಅನುಸರಿಸಿ!
- Sports
ಐಪಿಎಲ್ ಹರಾಜಿಗೆ ಅರ್ಜುನ್ ತೆಂಡೂಲ್ಕರ್ ಅರ್ಹ, ಎಂಐ ಆರಿಸುತ್ತಾ?
- Lifestyle
ಜ. 16ರಿಂದ ಭಾರತದಲ್ಲಿ ಕೋವಿಡ್ 19 ಲಸಿಕೆ: ಇದರ ಕುರಿತ ಪ್ರಮುಖ 10 ಮಾಹಿತಿ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಬೆಂಗಳೂರು ಅಂತರರಾಷ್ಟ್ರೀಯ ಸಿನಿಮೋತ್ಸವ ಆಯೋಜನೆ: ನಿಯೋಗದಿಂದ ಸಿಎಂ ಭೇಟಿ
ಹದಿಮೂರನೇ ಬೆಂಗಳೂರು ಅಂತರರಾಷ್ಟ್ರೀಯ ಸಿನಿಮೋತ್ಸವ ಆಯೋಜಿಸಲು ಅನುಮತಿ ನೀಡುವಂತೆ ಕೋರಿ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಸುನಿಲ್ ಪುರಾಣಿಕ್ ಸೇರಿ ಹಲವು ಪ್ರಮುಖರು ಸಿಎಂ ಯಡಿಯೂರಪ್ಪ ಅವರನ್ನು ಭೇಟಿ ಮಾಡಿದರು.
ಪ್ರೇಕ್ಷಕರನ್ನು ಮತ್ತೆ ಚಿತ್ರಮಂದಿರಗಳತ್ತ ಸೆಳೆಯಲು 13ನೇ ಬೆಂಗಳೂರು ಅಂತರರಾಷ್ಟ್ರೀಯ ಸಿನಿಮೋತ್ಸವ ಪೂರಕ ವಾತಾವರಣವನ್ನು ನಿರ್ಮಿಸಲಿದೆ. ಆದಕಾರಣ, 2021ರ ಫೆಬ್ರವರಿ ಮೂರು ಅಥವಾ ನಾಲ್ಕನೇ ವಾರದಲ್ಲಿ ಸಿನಿಮೋತ್ಸವವನ್ನು ಆಯೋಜಿಸಲು ಅನುಮತಿ ನೀಡುವಂತೆ ಕರ್ನಾಟಕ ಚಲನಚಿತ್ರ ಅಕಾಡೆಮಿಯ ಅಧ್ಯಕ್ಷ ಸುನಿಲ್ ಪುರಾಣಿಕ್ ಅವರ ನೇತೃತ್ವದ ನಿಯೋಗವು ಬಿ.ಎಸ್.ಯಡಿಯೂರಪ್ಪ ಅವರಲ್ಲಿ ಮನವಿ ಮಾಡಿದ್ದು, ಮುಖ್ಯಮಂತ್ರಿಗಳು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎನ್ನಲಾಗಿದೆ.
ಬೆಂಗಳೂರು ಅಂತರರಾಷ್ಟ್ರೀಯ ಸಿನಿಮೋತ್ಸವ ಸತತ ಕಳೆದ 12 ವರ್ಷಗಳ ಕಾಲ ಯಶಸ್ಸನ್ನು ಕಂಡಿದೆ. ವಿಶ್ವದಲ್ಲಿ 5000 ಸ್ಥಳಗಳಲ್ಲಿ ಚಲನಚಿತ್ರೋತ್ಸವಗಳು ನಡೆಯುತ್ತವೆ. ಆದರೆ, ಅವುಗಳಲ್ಲಿ ಕೇವಲ 45 ಚಲನಚಿತ್ರೋತ್ಸವಗಳಿಗೆ ಅಂತರರಾಷ್ಟ್ರೀಯ ಮಾನ್ಯತೆ ದೊರೆತಿದೆ.

ಮಾನ್ಯತೆ ಗಳಿಸಲು ಚಿತ್ರೋತ್ಸವ ಆಯೋಜಿಸಲೇಬೇಕು
ಇದೀಗ ಬೆಂಗಳೂರು ಅಂತರರಾಷ್ಟ್ರೀಯ ಸಿನಿಮೋತ್ಸವಕ್ಕೆ ಅಂತರರಾಷ್ಟ್ರೀಯ ಮಾನ್ಯತೆ ದೊರೆಯುವ ಲಕ್ಷಣಗಳು ಗೋಚರಿಸುತ್ತಿವೆ. ಒಂದು ವೇಳೆ ಮಾನ್ಯತೆ ದೊರೆತಲ್ಲಿ ಇದು ವಿಶ್ವದಲ್ಲಿ 46ನೇ ಮಾನ್ಯತೆ ಪಡೆದ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ ಎಂಬ ಹೆಗ್ಗಳಿಕೆಗೆ ಪಾತ್ರವಾಗುತ್ತದೆ. ಆದ್ದರಿಂದ 13 ನೇ ಬೆಂಗಳೂರು ಅಂತರರಾಷ್ಟ್ರೀಯ ಸಿನಿಮೋತ್ಸವವನ್ನು ಆಯೋಜಿಸಲು ಸಮ್ಮತಿ ನೀಡುವಂತೆಯೂ ಹಾಗೂ ಅದಕ್ಕೆ ಅಗತ್ಯ ಅನುದಾನವನ್ನು ದೊರಕಿಸಿಕೊಡುವಂತೆಯೂ ನಿಯೋಗವು ಮುಖ್ಯಮಂತ್ರಿಗೆ ಮನವಿ ಸಲ್ಲಿಸಿತು.

ಭಾರತದಲ್ಲಿ ಕೇವಲ ನಾಲ್ಕು ಸ್ಥಳಗಳಲ್ಲಿ ಚಿತ್ರೋತ್ಸವ
ಭಾರತದಲ್ಲಿ ಕೇವಲ ನಾಲ್ಕು ಸ್ಥಳಗಳಲ್ಲಿ ಚಲನಚಿತ್ರೋತ್ಸವಗಳು ನಡೆಯುತ್ತವೆ. ಗೋವಾದಲ್ಲಿ ಭಾರತ ಸರ್ಕಾರ ಚಲನಚಿತ್ರೋತ್ಸವವನ್ನು ಆಯೋಜಿಸುತ್ತದೆ. ಉಳಿದಂತೆ ಪಶ್ಚಿಮ ಬಂಗಾಳ, ಕರ್ನಾಟಕ ಮತ್ತು ಕೇರಳ ರಾಜ್ಯ ಸರ್ಕಾರಗಳು ಚಲನನಚಿತ್ರೋತ್ಸವಗಳನ್ನು ಆಯೋಜಿಸುತ್ತಿವೆ ಎಂಬ ಅಂಶವನ್ನು ನಿಯೋಗವು ಮುಖ್ಯಮಂತ್ರಿಯವರ ಗಮನಕ್ಕೆ ತಂದಿತು.

ನಿಯೋಗದಲ್ಲಿದ್ದ ಪ್ರಮುಖರು
ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷ ಡಿ.ಆರ್.ಜಯರಾಜ್, ಕಲಾನಿರ್ದೇಶಕ ಎನ್. ವಿದ್ಯಾಶಂಕರ್, ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಅಧ್ಯಕ್ಷರೂ ಹಾಗೂ ಹೆಸರಾಂತ ಚಿತ್ರನಟಿ ಶ್ರೀಮತಿ ಶೃತಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತ ಡಾ.ಪಿ.ಎಸ್.ಹರ್ಷ, ಹಿರಿಯ ಪತ್ರಕರ್ತ ಮತ್ತು ಚಿತ್ರ ವಿಮರ್ಶಕ ಮುರಳೀಧರ್ ಖಜಾನೆ ಹಾಗೂ ಕರ್ನಾಟಕ ಚಲನಚಿತ್ರ ಅಕಾಡೆಮಿ ರಿಜಿಸ್ಟ್ರಾರ್ ಜಿ.ಹಿಮಂತರಾಜು ಅವರು ಈ ನಿಯೋಗದಲ್ಲಿದ್ದರು.

ಫೆಬ್ರವರಿ 26 ಕ್ಕೆ ಆರಂಭಗೊಂಡಿದ್ದ ಚಿತ್ರೋತ್ಸವ
2020 ರ ಫೆಬ್ರವರಿಯಲ್ಲಿ 12ನೇ ಬೆಂಗಳೂರು ಚಲನಚಿತ್ರೋತ್ಸವವು ಸಾಂಗವಾಗಿ ನೆರವೇರಿತು. ಯಡಿಯೂರಪ್ಪ ಅವರು ಉದ್ಘಾಟಿಸಿದ ಚಿತ್ರೋತ್ಸವವು ಫೆಬ್ರವರಿ 26 ಕ್ಕೆ ಪ್ರಾರಂಭಗೊಂಡು ಮಾರ್ಚ್ 4 ರ ವರೆಗೆ ನಡೆದಿತ್ತು. ಸುಮಾರು 200 ಕ್ಕೂ ಹೆಚ್ಚು ಸಿನಿಮಾಗಳು ಫಿಲ್ಮ್ ಫೆಸ್ಟ್‌ನಲ್ಲಿ ಪ್ರದರ್ಶನಗೊಂಡವು.