For Quick Alerts
  ALLOW NOTIFICATIONS  
  For Daily Alerts

  ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವ: ಲಾಂಛನ ಬಿಡುಗಡೆ ಮಾಡಿದ ಸಿಎಂ

  |

  ಬೆಂಗಳೂರು, ಜ.09: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು 12ನೇ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ಲಾಂಛನವನ್ನು ಬಿಡುಗಡೆ ಮಾಡಿದರು.

  ಸಿಎಂ ಗೃಹ ಕಚೇರಿ ಕೃಷ್ಣದಲ್ಲಿ 12ನೇ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ಲಾಂಛನ ಬಿಡುಗಡೆ ಮಾಡಲಾಗಿದ್ದು, ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಸುನೀಲ್ ಪುರಾಣಿಕ್, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಅರಣ್ಯ ಸಚಿವ ಸಿ.ಸಿ.ಪಾಟೀಲ್, ಶಾಸಕ ಎಸ್.ಆರ್.ವಿಶ್ವನಾಥ್, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಮಹದೇವ್ ಪ್ರಕಾಶ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕಾರ್ಯದರ್ಶಿ ಪಿ.ಮಣಿವಣ್ಣನ್ ಉಪಸ್ಥಿತರಿದ್ದರು.

  11ನೇ ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಚಾಲನೆ ನೀಡಿದ ಸಿಎಂ

  ಫೆಬ್ರವರಿ 26 ರಂದು ಒರಾಯನ್ ಮಾಲ್ ನಲ್ಲಿ 12ನೇ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಚಾಲನೆ ಸಿಗಲಿದ್ದು, ಮಾರ್ಚ್ 4 ರವರೆಗೆ ಚಲನಚಿತ್ರ ಪ್ರದರ್ಶನ ನಡೆಯಲಿದೆ. ವಿಶ್ವದ 50 ದೇಶಗಳಿಂದ 200 ಸಮಕಾಲೀನ ಚಿತ್ರಗಳು ಪ್ರದರ್ಶನಗೊಳ್ಳಿಲಿದೆ.

  Shubman Gill was fined 100% match fee for dissent towards umpire Mohammad Rafi | GILL | ONEINDIA

  ಒರಾಯನ್ ಮಾಲ್ ನಲ್ಲಿರುವ ಪಿವಿಆರ್ 11 ಸ್ಕ್ರೀನ್ ನಲ್ಲಿ ಸಿನಿಮಾ ಪ್ರದರ್ಶನ ನಡೆಯಲಿದೆ. ಸಿನಿಮೋತ್ಸವಕ್ಕೆ ರೂ.800 ಶುಲ್ಕ, ಸಿನಿಮಾ ವಿದ್ಯಾರ್ಥಿಗಳಿಗೆ ರೂ.400 ಶುಲ್ಕ ವಿಧಿಸಲಾಗಿದೆ.

  English summary
  Karnataka Chief Minister BS Yediyurappa launches 12th Bengaluru International Film Festival logo.

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X