For Quick Alerts
  ALLOW NOTIFICATIONS  
  For Daily Alerts

  Breaking: 68ನೇ ರಾಷ್ಟ್ರಪ್ರಶಸ್ತಿ ಕನ್ನಡ ವಿಜೇತರಿಗೆ ಫಿಲ್ಮ್ ಚೇಂಬರ್ ವತಿಯಿಂದ ಸನ್ಮಾನ

  |

  68ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯಲ್ಲಿ ಕನ್ನಡಕ್ಕೆ ಕೆಲವು ಪ್ರಶಸ್ತಿಗಳು ಘೋಷಣೆಯಾಗಿತ್ತು. ವಿಶಿಷ್ಟ ಕಥಾಹಂದರದ 'ಡೊಳ್ಳು' ಚಿತ್ರಕ್ಕೆ ಅತ್ಯುತ್ತಮ ಕನ್ನಡ ಪ್ರಾದೇಶಿಕ ಸಿನಿಮಾ ಹಾಗೂ ಸಿಂಕ್ ಸೌಂಡ್ ವಿಭಾಗದಲ್ಲಿ ರಾಷ್ಟ್ರಪ್ರಶಸ್ತಿ ಸಿಕ್ಕಿತ್ತು. ಇನ್ನು ಪರಿಸರ ಕಾಳಜಿಯ ಕಥಾವಸ್ತುವುಳ್ಳ 'ತಲೆದಂಡ' ಚಿತ್ರಕ್ಕೆ ರಾಷ್ಟ್ರ ಪ್ರಶಸ್ತಿಯ ಗರಿ ಒಲಿದಿತ್ತು.

  ಇನ್ನು 'ಅತ್ಯುತ್ತಮ ಕಲೆ ಹಾಗೂ ಸಾಂಸ್ಕೃತಿಕ ಸಿನಿಮಾ' ವಿಭಾಗದಲ್ಲಿ ಗಿರೀಶ್​ ಕಾಸರವಳ್ಳಿ ನಿರ್ದೇಶನದ 'ನಾದದ ನವನೀತ' ಚಿತ್ರ ಪ್ರಶಸ್ತಿಗೆ ಭಾಜನವಾಗಿದ್ದರೆ, ತುಳು ಭಾಷೆಯ 'ಜೀಟಿಗೆ' ಸಿನಿಮಾ ಕೂಡ ರಾಷ್ಟ್ರ ಪ್ರಶಸ್ತಿ ಪಡೆದುಕೊಂಡಿದೆ. ಇಂದು (ಜುಲೈ 25) ಫಿಲ್ಮ್‌ ಚೇಂಬರ್ ವತಿಯಿಂದ ರಾಷ್ಟ್ರ ಪ್ರಶಸ್ತಿ ವಿಜೇತರಿಗಾಗಿ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

  'ಡೊಳ್ಳು' ಸಿನಿಮಾ ನಿರ್ಮಾಪಕರಾದ ಪವನ್ ಒಡೆಯರ್ ಹಾಗೂ ಅಪೇಕ್ಷಾ ಪುರೋಹಿತ್ ದಂಪತಿ, ಚಿತ್ರದ ನಿರ್ದೇಶಕ ಸಾಗರ್ ಪುರಾಣಿಕ್ ಹಾಗೂ 'ತಲೆದಂಡ' ಚಿತ್ರದ ನಿರ್ಮಾಪಕಿ ಡಾ. ಹೇಮಾಮಾಲಿನಿ ಕೃಪಾಕರ್ ಸೇರಿದಂತೆ ಈ ಬಾರಿ ಪ್ರಶಸ್ತಿ ವಿಜೇತರೆಲ್ಲರೂ ಸನ್ಮಾನ ಸ್ವೀಕರಿಸಿದರು. ಫಿಲ್ಮ್ ಚೇಂಬರ್‌ನಲ್ಲಿ ನಡೆದ ಸನ್ಮಾನ ಕಾರ್ಯಕ್ರಮದಲ್ಲಿ ಅಧ್ಯಕ್ಷರಾದ ಭಾ. ಮಾ ಹರೀಶ್, ಫಿಲ್ಮ್ ಚೇಂಬರ್ ಮಾಜಿ ಅಧ್ಯಕ್ಷ ಚಿನ್ನೇಗೌಡರು ಸೇರಿದಂತೆ ಪದಾಧಿಕಾರಿಗಳು ಭಾಗಿ ಆಗಿದ್ದರು.

  Recommended Video

  Niveditha Gowda ಹೊಸ ಸಾಧನೆಗೆ ಅಭಿಮಾನಿಗಳೆಲ್ಲಾ ಖುಷ್ *Sandalwood | Filmibeat Kannada
  English summary
  Karnataka Film Chamber Honored 68th National Film Award Winners. Know More.
  Monday, July 25, 2022, 14:33
  IIFA

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X