twitter
    For Quick Alerts
    ALLOW NOTIFICATIONS  
    For Daily Alerts

    ಚಿತ್ರಮಂದಿರಗಳ ಮನವಿಗೆ ಸ್ಪಂದಿಸಿದ ರಾಜ್ಯ ಸರ್ಕಾರ

    |

    ರಾಜ್ಯದ ಸಿಂಗಲ್ ಸ್ಕ್ರೀನ್ ಚಿತ್ರಮಂದಿರಗಳ ಮನವಿಗೆ ಕೊನೆಗೂ ಸರ್ಕಾರ ಸ್ಪಂದಿಸಿದೆ. ಲಾಕ್‌ಡೌನ್‌ನಿಂದಾಗಿ ಕಳೆದ ವರ್ಷದಿಂದಲೂ ಚಿತ್ರಮಂದಿರಗಳು ಬಹುತೇಕ ಬಂದ್ ಆಗಿದ್ದವು. ಆದರೆ ಆಸ್ತಿ ತೆರಿಗೆ, ವಿದ್ಯುತ್ ಶುಲ್ಕ ಇನ್ನಿತರೆ ಶುಲ್ಕಗಳನ್ನು ಪಾವತಿಸಲೇ ಬೇಕಿತ್ತು.

    ವರ್ಷದಿಂದಲೂ ಸಂಕಷ್ಟದಲ್ಲಿರುವ ಚಿತ್ರಮಂದಿರಗಳಿಗೆ ಆಸ್ತಿ ತೆರಿಗೆ, ವಿದ್ಯುತ್ ಶುಲ್ಕ ಪಾವತಿ ರದ್ದು ಮಾಡಬೇಕು ಎಂದು ಚಿತ್ರಮಂದಿರಗಳ ಮಾಲೀಕರ ಸಂಘವು ಸರ್ಕಾರವನ್ನು ವಿನಂತಿಸಿತ್ತು. ಅದಕ್ಕೀಗ ಸರ್ಕಾರ ಸ್ಪಂದಿಸಿದೆ.

    ಫಿಲಂ ಚೇಂಬರ್ ನಿಯೋಗದಿಂದ ಸಿಎಂ ಭೇಟಿ: ಚಿತ್ರಮಂದಿರ ತೆರೆಯಲು ಮನವಿಫಿಲಂ ಚೇಂಬರ್ ನಿಯೋಗದಿಂದ ಸಿಎಂ ಭೇಟಿ: ಚಿತ್ರಮಂದಿರ ತೆರೆಯಲು ಮನವಿ

    ರಾಜ್ಯದ ಎಲ್ಲ ಸಿಂಗಲ್ ಸ್ಕ್ರೀನ್ ಚಿತ್ರಮಂದಿರಗಳು 2021-22ನೇ ಸಾಲಿನ ಆಸ್ತಿ ತೆರಿಗೆಯನ್ನು ಪಾವತಿಸುವ ಅಗತ್ಯವಿಲ್ಲ ಎಂದು ರಾಜ್ಯ ಸರ್ಕಾರ ಹೇಳಿದೆ.

    Karnataka Government Gave Exemption In Property Tax For Single Screen Theaters

    ಕೋವಿಡ್ ಮಹಾಮಾರಿಯಿಂದ ರಾಜ್ಯದಲ್ಲಿ ಸಂಕಷ್ಟಕ್ಕೆ ಒಳಗಾಗಿರುವ ಏಕಪರದೆ ಚಿತ್ರಮಂದಿರ ನೌಕರರು, ಮಾಲೀಕರ ಹಿತದೃಷ್ಟಿಯಿಂದಾಗಿ ಈ ಕ್ರಮ ಕೈಗೊಂಡಿರುವುದಾಗಿ ಸರ್ಕಾರವು ಇಂದು (ಜುಲೈ 07) ಹೊರಡಿಸಿರುವ ಆದೇಶದಲ್ಲಿ ತಿಳಿಸಿದೆ.

    ರಾಜ್ಯದಲ್ಲಿ 630 ಏಕಪರದೆ ಚಿತ್ರಮಂದಿರಗಳು ಕಾರ್ಯನಿರ್ವಹಿಸುತ್ತಿವೆ. ಎಲ್ಲ ಏಕಪರದೆ ಚಿತ್ರಮಂದಿರಗಳಿಗೂ 2021-22 ನೇ ಸಾಲಿನ ಆಸ್ತಿ ತೆರಿಗೆಯಿಂದ ವಿನಾಯಿತಿ ದೊರೆತಿದೆ. ಆದರೆ ಮಲ್ಟಿಫ್ಲೆಕ್ಸ್‌ಗಳಿಗೆ ಯಾವುದೇ ವಿನಾಯಿತಿಯನ್ನು ಸರ್ಕಾರ ನೀಡಿಲ್ಲ.

    Recommended Video

    ಅಂತರಾಷ್ಟ್ರೀಯ ಮಟ್ಟದಲ್ಲಿ ಶ್ರೇಷ್ಟ ನಟಿಯಾದ ಹರಿಪ್ರಿಯಾ | Filmibeat Kannada

    ಕಳೆದ ವರ್ಷ ರಾಜ್ಯದಲ್ಲಿ ಕೊರೊನಾ ಲಾಕ್‌ಡೌನ್ ಪ್ರಾರಂಭವಾದಾಗಿನಿಂದಲೂ ಚಿತ್ರಮಂದಿರಗಳು ಬಂದ್ ಆಗಿವೆ. ಕಳೆದ ವರ್ಷದ ಅಂತ್ಯದಲ್ಲಿ ಚಿತ್ರಮಂದಿರಗಳು ಪುನಃ ಪ್ರಾರಂಭವಾದವಾದರೂ ಪೂರ್ಣ ಸೀಟು ಸಾಮರ್ಥ್ಯದೊಂದಿಗೆ ಸಿನಿಮಾ ಪ್ರದರ್ಶನಕ್ಕೆ ಅವಕಾಶ ನೀಡಲಾಗಿರಲಿಲ್ಲ. ಪೂರ್ಣ ಸೀಟು ಸಾಮರ್ಥ್ಯದೊಂದಿಗೆ ಸಿನಿಮಾ ಪ್ರದರ್ಶನಕ್ಕೆ ಅವಕಾಶ ಸಿಕ್ಕ ಕೆಲವೇ ದಿನಗಳಲ್ಲಿ ಕೊರೊನಾ ಎರಡನೇ ಅಲೆ ಪ್ರರಂಭವಾಗಿ ಮತ್ತೆ ಚಿತ್ರಮಂದಿರಗಳನ್ನು ಬಂದ್ ಮಾಡಲಾಯಿತು. ಪ್ರಸ್ತುತ ರಾಜ್ಯದಲ್ಲಿ ಯಾವುದೇ ಚಿತ್ರಮಂದಿರಗಳು ಕಾರ್ಯನಿರ್ವಹಿಸುತ್ತಿಲ್ಲ. ಮುಂದಿನ ವಾರದಿಂದ 50% ಸೀಟು ಸಾಮರ್ಥ್ಯದೊಂದಿಗೆ ಚಿತ್ರಮಂದಿರಗಳು ತೆರೆಯಲು ಅನುಮತಿ ನೀಡುವ ನಿರೀಕ್ಷೆ ಇದೆ.

    English summary
    Karnataka state government gave exemption in property tax for single screen theaters for the year 2021-22.
    Thursday, July 8, 2021, 9:36
    IIFA

    Kannada Photos

    Go to : More Photos
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X
    X