ಕರಾವಳಿ ಮತ್ತು ಮಲೆನಾಡು ಪ್ರವಾಸೋದ್ಯಮಕ್ಕೆ ರಿಷಬ್ ಶೆಟ್ಟಿ ರಾಯಬಾರಿ; ಶೆಟ್ರು ಇಟ್ಟ ಬೇಡಿಕೆ ಏನು?
ಡಿಕೆ ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿಯಾಗುತ್ತಿದ್ದಂತೆ ಸಾಕಷ್ಟು ಬದಲಾವಣೆಗಳು ಆಗುತ್ತಿವೆ. ತಮ್ಮ ಶಾಸಕರಿಗೆ ಹೊಸ ಖಾತೆಯನ್ನು ಹಂಚಿಕೆ ಮಾಡಿದ ಬಳಿಕ ಆಯಾ ಇಲಾಖೆಗೆ ಸಂಬಂಧಿಸಿದಂತೆ ಸಭೆಯನ್ನು ನಡೆಲಾಗುತ್ತಿದೆ. ಇಂದು (ಜೂನ್ 19) ಸಿಎಂ ಡಿಕೆ ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ಕರ್ನಾಟಕ ಪ್ರವಾಸೋದ್ಯಮಕ್ಕೆ ಸಂಬಂಧಿಸಿದಂತೆ ಸಭೆಯನ್ನು ನಡೆಸಲಾಯಿತು.
ಸಿಎಂ ಡಿಕೆ ಶಿವಕುಮಾರ್, ಪ್ರವಾಸೋದ್ಯಮ ಸಚಿವ ಕೆಜೆ ಜಾರ್ಜ್ ಹಾಗೂ ಅಧಿಕಾರಿಗಳ ಸಮ್ಮುಖದಲ್ಲಿ ನಡೆದ ಈ ಸಭೆಯಲ್ಲಿ ಕೆಲವು ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಲಾಯಿತು. ಅದರಲ್ಲಿ ಕರಾವಳಿ ಹಾಗೂ ಮಲೆನಾಡು ಭಾಗದ ಪ್ರವಾಸೋದ್ಯಮವನ್ನು ಉತ್ತೇಜಿಸುವುದಕ್ಕೆ ಕೆಲವು ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ. ಅದರಲ್ಲಿ 'ಕಾಂತಾರ' ಬಳಿಕ ಜನಪ್ರಿಯತೆಯ ಉತ್ತುಂಗದಲ್ಲಿರುವ ರಿಷಬ್ ಶೆಟ್ಟಿಯನ್ನು ರಾಯಬಾರಿಯನ್ನಾಗಿ ನೇಮಕ ಮಾಡುವುದು ಕೂಡ ಪ್ರಮುಖ ಅಂಶವಾಗಿದೆ.

ವಿಧಾನಸೌಧದ ಸಭಾಂಗಣದಲ್ಲಿ ಈ ಮಹತ್ವದ ಸಭೆಯನ್ನು ನಡೆಸಲಾಗಿತ್ತು. ಇದರಲ್ಲಿ ಕರಾವಳಿ ಮತ್ತು ಮಲೆನಾಡು ಪ್ರದೇಶಗಳ ಪ್ರವಾಸೋದ್ಯಮದ ಅಭಿವೃದ್ಧಿ ಪಡಿಸುವುದಕ್ಕೆ ಕೆಲವು ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ. ನಟ-ನಿರ್ದೇಶಕ ರಿಷಬ್ ಶೆಟ್ಟಿಯನ್ನು ಕರಾವಳಿ ಮತ್ತು ಮಲೆನಾಡು ಪ್ರವಾಸೋದ್ಯಮದ ಪ್ರಚಾರ ರಾಯಭಾರಿಯಾಗಿ ಅಧಿಕೃತವಾಗಿ ನೇಮಕ ಮಾಡಲಾಗಿದೆ. ಈ ವೇಳೆ ರಿಷಬ್ ಸಿಎಂ ಡಿಕೆ ಶಿವಕುಮಾರ್ ಮುಂದೆ ಕೆಲವು ಬೇಡಿಕೆಗಳನ್ನು ಇಟ್ಟಿದ್ದಾರೆ. ಅದೇನು ಎಂದು ನೋಡುವುದಾರೇ..
ಪ್ರವಾಸೋದ್ಯಮಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡುವುದಕ್ಕೆ ಕರ್ನಾಟಕ ಸರ್ಕಾರ ಮುಂದಾಗಿದೆ. ಅದರಲ್ಲೂ ಕರಾವಳಿ, ಮಲೆನಾಡು ಭಾಗದಲ್ಲಿರುವ ಹೋಮ್‌ಸ್ಟೇ ಉದ್ಯಮಕ್ಕೆ ಸಂಬಂಧಿಸಿದ ಹಲವು ವಿಷಯಗಳ ಬಗ್ಗೆ ಚರ್ಚೆ ಮಾಡಲಾಗಿದೆ. ಈ ಭಾಗಗಳಲ್ಲಿ ಹೋಮ್‌ಸ್ಟೇ ಉದ್ಯಮವೇ ಪ್ರಮುಖವಾಗಿದ್ದು, ಕೆಲವು ಕಠಿಣ ನಿಯಮಗಳಿಂದ ಉದ್ಯಮಿಗಳು ಕಷ್ಟದಲ್ಲಿ ಸಿಕ್ಕಿಕೊಂಡಿದ್ದರು. ಈ ಸಭೆಯಲ್ಲೂ ಅದೇ ತೀರ್ಮಾನಕ್ಕೆ ಬರಲಾಗಿದೆ.
ಹೀಗಾಗಿ ಕೆಲವು ಮಹತ್ವದ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದ್ದು, ರಿಷಬ್ ಶೆಟ್ಟಿ ಕರಾವಳಿ ಹಾಗೂ ಮಲೆನಾಡು ಭಾಗದ ರಾಯಬಾರಿ ಆಗಿದ್ದು ಹೈಲೈಟ್ ಆಗಿದೆ. ಈ ವೇಳೆ ರಿಷಬ್ ಶೆಟ್ಟಿ ಸರ್ಕಾರದ ಮುಂದೆ ಕೆಲವೇ ಬೇಡಿಕೆ ಇಟ್ಟಿದ್ದಾರೆ. ಅದರಲ್ಲೂ ಕರಾವಳಿ ಭಾಗದ ಜಾನಪದ ಕಲೆಗಳು, ಸಂಸ್ಕೃತಿ, ಪರಂಪರೆಗೆ ಹೆಚ್ಚಿನ ಪ್ರಾಮುಖ್ಯತೆ ನೀಡುವಂತೆ ಮನವಿ ಮಾಡಿಕೊಂಡಿದ್ದಾರೆ. ಹಾಗೇ ಚಿತ್ರೀಕರಣಕ್ಕೂ ಹೆಚ್ಚಿನ ಪ್ರಾಮುಖ್ಯತೆ ನೀಡಬೇಕು ಎಂದು ಹೇಳಿದ್ದಾರೆ. ಇದರಿಂದ ಕರ್ನಾಟಕ, ಕೇರಳ ಹಾಗೂ ಗೋವಾ ಸಿನಿಮಾ ಇಂಡಸ್ಟ್ರಿಗೆ ಹೆಚ್ಚು ಲಾಭ ಆಗಲಿದೆ ಎಂದೂ ಹೇಳಿದ್ದಾರೆ.
ಕರ್ನಾಟಕ ಪ್ರವಾಸೋದ್ಯಮಕ್ಕೆ ಸಂಬಂಧಿಸಿದಂತೆ ಇರುವ ಸಮಸ್ಯೆಗಳನ್ನು ಪಟ್ಟಿ ಮಾಡುವಂತೆ ಸಿಎಂ ಡಿಕೆ ಶಿವಕುಮಾರ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಸದ್ಯ ರಿಷಬ್ ಶೆಟ್ಟಿ ಪ್ರವಾಸೋದ್ಯಮ ರಾಯಬಾರಿ ಆಗಿದ್ದು ಹೊಸ ಹುರುಪು ಸಿಕ್ಕಂತಾಗಿದೆ. ಇತ್ತ ಸರ್ಕಾರ ಕೂಡ ಪ್ರವಾಸೋದ್ಯಮವನ್ನು ಗಂಭೀರವಾಗಿ ಪರಿಗಣಿಸಿದೆ. ಹೀಗಾಗಿ ಸಿನಿಮಾ ಮಂದಿಗೂ ಮುಂದಿನ ದಿನಗಳಲ್ಲಿ ಅನುಕೂಲ ಆಗುವ ಸಾಧ್ಯತೆಯಿದೆ.
ಇನ್ನು ರಿಷಬ್ ಶೆಟ್ಟಿ 'ಕಾಂತಾರ ಚಾಪ್ಟರ್ 1' ಬಳಿಕ ಸಿಕ್ಕಾಪಟ್ಟೆ ಬ್ಯುಸಿಯಾಗಿದ್ದಾರೆ. 'ಕಾಂತಾರ' ಯಶಸ್ಸಿನ ಬಳಿಕ ಪರಭಾಷೆಯ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ಇವರ ಕೈಯಲ್ಲಿ ಬಿಗ್ ಪ್ರಾಜೆಕ್ಟ್‌ಗಳಿದ್ದು, ಪ್ರಶಾಂತ್ ವರ್ಮಾ ನಿರ್ದೇಶಿಸುತ್ತಿರುವ 'ಜೈ ಹನುಮಾನ್' ಶೂಟಿಂಗ್ ನಡೆಯುತ್ತಿದೆ. ಹಾಗೇ 'ದಿ ಪ್ರೈಡ್ ಆಫ್ ಭಾರತ್-ಛತ್ರಪತಿ ಶ್ರಿವಾಜಿ ಮಹಾರಾಜ್' ಸಿನಿಮಾನೂ ಕೈಯಲ್ಲಿದೆ. ಇದು ಎರಡು ಭಾಗಗಳಾಗಿ ಬಿಡುಗಡೆಯಾಗಲಿದೆ. ಈ ಎರಡು ಪ್ರಾಜೆಕ್ಟ್ ಬಳಿಕ 'ಕಾಂತಾರ ಚಾಪ್ಟರ್ 3' ಸೆಟ್ಟೇರುವ ಸಾಧ್ಯತೆ ಇದೆ.


Click it and Unblock the Notifications