ಡ್ರಗ್ಸ್ ಪ್ರಕರಣ: ರಾಗಿಣಿ-ಸಂಜನಾ ಜಾಮೀನು ಅರ್ಜಿ ವಜಾಗೊಳಿಸಿದ ಹೈ ಕೋರ್ಟ್

ಡ್ರಗ್ಸ್ ಪ್ರಕರಣದಲ್ಲಿ ಜೈಲಿನಲ್ಲಿರುವ ನಟಿ ರಾಗಿಣಿ ದ್ವಿವೇದಿ ಮತ್ತು ಸಂಜನಾ ಗಲ್ರಾನಿ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಹೈ ಕೋರ್ಟ್ ಮಂಗಳವಾರ ವಜಾಗೊಳಿಸಿದೆ.

ಸಂಜನಾ ಮತ್ತು ರಾಗಿಣಿ ಸೇರಿದಂತೆ ಇತರೆ ಆರೋಪಿಗಳಿಗೆ ಜಾಮೀನು ನೀಡಲು ಸಾಧ್ಯವಿಲ್ಲ ಎಂದು ಹೈ ಕೋರ್ಟ್ ವಿಭಾಗೀಯ ಪೀಠ ಸ್ಪಷ್ಟಪಡಿಸಿದೆ.

ಸಂಜನಾ, ರಾಗಿಣಿ ಮತ್ತು ಪ್ರಶಾಂತ್ ರಂಕು ಜಾಮೀನಿಗಾಗಿ ಹೈ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಆರೋಪಿಗಳು ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಅಕ್ಟೋಬರ್ 24 ರಂದು ಪೂರ್ಣಗೊಳಿಸಿದ್ದ ಹೈ ಕೋರ್ಟ್ ಆದೇಶ ಕಾಯ್ದಿರಿಸಿತ್ತು.

Karnataka HC denied bail to actors Ragini Dwivedi and Sanjana Galrani

ಈ ಹಿನ್ನೆಲೆ ಮಂಗಳವಾರ ಆದೇಶ ನೀಡಿದ್ದು, ಜಾಮೀನು ವಜಾಗೊಳಿಸಿದೆ. ಹೈ ಕೋರ್ಟ್‌ನಲ್ಲಿ ಜಾಮೀನು ಸಿಗದ ಕಾರಣ ನಟಿಯ ಪರ ವಕೀಲರು ಸುಪ್ರೀಂ ಕೋರ್ಟ್‌ಗೆ ಹೋಗುವ ಸಾಧ್ಯತೆ ಇದೆ.

ಇದಕ್ಕೂ ಮುಂಚೆ ಎನ್‌ಡಿಪಿಎಸ್ ವಿಶೇಷ ನ್ಯಾಯಾಲದಲ್ಲಿ ಸಂಜನಾ ಮತ್ತು ರಾಗಿಣಿ ಪರ ವಕೀಲರು ಜಾಮೀನು ಅರ್ಜಿ ಸಲ್ಲಿಸಿದ್ದರು. ಆದ್ರೆ, ನಟಿಯರಿಬ್ಬರ ಜಾಮೀನು ಅರ್ಜಿ ಎನ್‌ಡಿಪಿಎಸ್ ನ್ಯಾಯಾಲಯದಲ್ಲಿ ತಿರಸ್ಕೃತವಾಗಿತ್ತು.

ಅಂದ್ಹಾಗೆ, ಡ್ರಗ್ಸ್ ಪ್ರಕರಣದಲ್ಲಿ ನಟಿ ರಾಗಿಣಿ ದ್ವಿವೇದಿ ಅವರನ್ನು ಸೆಪ್ಟೆಂಬರ್ 4 ರಂದು ಸಿಸಿಬಿ ಪೊಲೀಸರು ಬಂಧಿಸಿದ್ದರು. ಸೆಪ್ಟೆಂಬರ್ 8 ರಂದು ನಟಿ ಸಂಜನಾ ಅವರನ್ನು ವಶಕ್ಕೆ ಪಡೆದುಕೊಂಡಿದ್ದರು. ಸದ್ಯ, ಇಬ್ಬರು ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ.

Recommended Video

ಶ್ರೀನಿವಾಸ್​ ಹರೀಶ್​ ಕುಮಾರ್​ ಕಯ್ಯಲ್ಲಿ ಸಂಜನಾ, ರಾಗಿಣಿ ಭವಿಷ್ಯ | Sanjjanna & Ragini bai

More from Filmibeat

English summary
Sandalwood drug case: Karnataka HC denied bail to actors Ragini Dwivedi, Sanjana Galrani, other accused Prashanth Ranka.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X