twitter
    For Quick Alerts
    ALLOW NOTIFICATIONS  
    For Daily Alerts

    "ಕಾಲಾ" ಚಿತ್ರ ಬಿಡುಗಡೆ ವಿರೋಧಿಸಿ ಪ್ರತಿಭಟನೆ

    By Pavithra
    |

    Recommended Video

    ರಜನಿಕಾಂತ ಸಿನಿಮಾ ಬೇಡ ಅಂತ ಪ್ರತಿಭಟನೆ ಶುರುವಾಗಿದೆ | Filmibeat Kannada

    ಕಳೆದ ಒಂದು ವಾರದಿಂದ ಕಾಲಾ ಸಿನಿಮಾ ಬಿಡುಗಡೆ ಕುರಿತಾಗಿ ರಾಜ್ಯದ ಎಲ್ಲೆಡೆ ವಿರೋಧ ವ್ಯಕ್ತವಾಗುತ್ತಿದೆ. ಕರ್ನಾಟಕದಲ್ಲಿ "ಕಾಲಾ" ಸಿನಿಮಾ ಬಿಡುಗಡೆ ಮಾಡಬಾರದು ಎಂದು ಹಲವು ಸಂಘಟನೆಗಳು ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಗೆ ಮನವಿಯನ್ನು ನೀಡಿದ್ದರು.

    ರಜನಿಕಾಂತ್ ಅಭಿನಯದ ಕಾಲಾ ಸಿನಿಮಾ ಬಿಡುಗಡೆಯನ್ನು ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಪ್ರತಿಭಟನೆ ನಡೆಸಲಾಗುತ್ತಿದೆ.

    ಪ್ರವೀಣ್ ಶೆಟ್ಟಿ ನೇತೃತ್ವದಲ್ಲಿ ಚಲನಚಿತ್ರ ವಾಣಿಜ್ಯ ಮಂಡಳಿ ಎದುರು ಪ್ರೊಟೆಸ್ಟ್ ಮಾಡುತ್ತಿದ್ದಾರೆ.

    'ಕಾಲಾ' ವಿವಾದ: ಅವರು ಮಾಡಿದ್ರೆ ಸರಿ, ನಾವ್ ಮಾಡಿದ್ರೆ ತಪ್ಪಾ.?'ಕಾಲಾ' ವಿವಾದ: ಅವರು ಮಾಡಿದ್ರೆ ಸರಿ, ನಾವ್ ಮಾಡಿದ್ರೆ ತಪ್ಪಾ.?

    Karnataka Rakshana Vedike is protesting against the Kala film release

    ರಜನಿಕಾಂತ್ ಕನ್ನಡ ವಿರೋಧಿ, ಕಾವೇರಿ ವಿಚಾರದಲ್ಲಿ ಕರ್ನಾಟಕ ವಿರೋಧಿ ಹೇಳಿಕೆ ನೀಡಿದ್ದಾರೆ. ಹೀಗಾಗಿ ರಜನಿಕಾಂತ್ ಅಭಿನಯದ ಕಾಲಾ ಸಿನಿಮಾ ಕರ್ನಾಟಕದಲ್ಲಿ ಬಿಡುಗಡೆಗೆ ಅವಕಾಶ ಬಿಡಬಾರದೆಂದು ಆಗ್ರಹಿಸಿದ್ದಾರೆ.

    Karnataka Rakshana Vedike is protesting against the Kala film release

    ರಜನೀಕಾಂತ್ ವಿರುದ್ಧ ಘೋಷಣೆ ಕೂಗುವ ಮೂಲಕ ಕಾಲಾ ಚಿತ್ರ ಬಿಡುಗಡೆಯನ್ನು ವಿರೋಧಿಸಿದ್ದಾರೆ. ಚಿತ್ರದ ನಾಯಕ ರಜನಿಕಾಂತ್ ಸಿನಿಮಾ ಕರ್ನಾಟಕದಲ್ಲಿ ಬಿಡುಗಡೆ ಆಗುತ್ತದೆ ಎಂದು ನನಗೆ ಭರವಸೆ ಇದೆ ಎಂದಿದ್ದಾರೆ. ಇದೇ ವೇಳೆ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಸಾ ರಾ ಗೋವಿಂದು ಅವರಿಗೆ ಕರ್ನಾಟಕ ರಕ್ಷಣಾ ವೇದಿಕೆಯಿಂದ ಮನವಿ ನೀಡಲಾಯ್ತು.

    ಮನವಿ ಸ್ವೀಕರಿಸಿದ ಬಳಿಕ ಸಾ ರಾ ಗೋವಿಂದು "ರಜನಿಕಾಂತ್ ಕನ್ನಡ ವಿರೋಧಿ ಧೋರಣೆಯನ್ನು ನಾವು ಖಂಡಿಸುತ್ತೇವೆ. ಕಾಲಾ ಚಿತ್ರ ಬಿಡುಗಡೆಯಾಗದಂತೆ ವಾಣಿಜ್ಯ ಮಂಡಳಿ ಮೇಲೆ ಒತ್ತಡ ತರಲಾಗುತ್ತಿದೆ. ಸಾಕಷ್ಟು ಸಂಘಟನೆಗಳು ಮನವಿ ಸಲ್ಲಿಸಿವೆ. ಇದಕ್ಕೆ ಸಂಬಂಧಪಟ್ಟಂತೆ ಚರ್ಚೆ ಯನ್ನು ನಡೆಸಿದ್ದೇವೆ. ಸದ್ಯ ನೇರವಾಗಿ ನಾವು ನಿಷೇಧ ಹೇರಲು ಸಾಧ್ಯವಿಲ್ಲ, ವಿತರಣೆ ಹಕ್ಕು ಕೊಂಡುಕೊಳ್ಳದಿರಲು ವಿತರಕರು ತೀರ್ಮಾನಿಸಿದ್ದಾರೆ. ಚಿತ್ರಮಂದಿರದ ಮಾಲಿಕರು ಚಿತ್ರ ಪ್ರದರ್ಶನ ಮಾಡದಿರಲು ತೀರ್ಮಾನಿಸಿದ್ದಾರೆ ಹೀಗಾಗಿ ಕರ್ನಾಟಕದಲ್ಲಿ ಕಾಲಾ ಸಿನಿಮಾ ಬಿಡುಗಡೆಯಾಗುವುದಿಲ್ಲ". ಎಂದಿದ್ದಾರೆ

    English summary
    Karnataka Rakshana Vedike is protesting against the release of Rajanikanth's Kala Cinema. The Karnataka film industry is upset with Rajinikanth's reported statement that whichever government comes to power in Karnataka, it should implement the Supreme Court order on Cauvery water sharing.
    Wednesday, June 6, 2018, 10:31
    IIFA

    Kannada Photos

    Go to : More Photos
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X
    X