For Quick Alerts
  ALLOW NOTIFICATIONS  
  For Daily Alerts

  ಕನಗನಮರಡಿ ಬಸ್ ದುರಂತ: ಚಲನಚಿತ್ರ ಪ್ರಶಸ್ತಿ ಸಮಾರಂಭ ಮುಂದಕ್ಕೆ

  |

  2017ನೇ ಸಾಲಿನ ಕರ್ನಾಟಕ ಚಲನಚಿತ್ರ ಪ್ರಶಸ್ತಿ ಸಮಾರಂಭ ಇಂದು ಸಂಜೆ ನಡೆಯಬೇಕಿತ್ತು. ಆದ್ರೆ, ಪಾಂಡವಪುರದಲ್ಲಿ ಸಂಭವಿಸಿದ ಬಸ್ ದುರಂತದ ಪರಿಣಾಮ ಚಲನಚಿತ್ರ ಪ್ರಶಸ್ತಿ ವಿತರಣೆ ಕಾರ್ಯಕ್ರಮವನ್ನ ಮುಂದೂಡಲಾಗಿದೆ.

  ಈ ಬಗ್ಗೆ ಮುಖ್ಯಮಂತ್ರಿಗಳ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಖಚಿತಪಡಿಸಿದ್ದಾರೆ. ದುರಂತ ನಡೆದ ಸ್ಥಳಕ್ಕೆ ಸಿಎಂ ಕುಮಾರಸ್ವಾಮಿ ಹೋಗುತ್ತಿರುವ ಕಾರಣ ಸಿನಿಮಾ ಕಾರ್ಯಕ್ರಮವನ್ನ ಸದ್ಯಕ್ಕೆ ರದ್ದುಗೊಳಿಸಲಾಗಿದೆ.

  Big Breaking: ಮಂಡ್ಯದಲ್ಲಿ ಭೀಕರ ಬಸ್ ಅಪಘಾತ: 20 ಕ್ಕೂ ಹೆಚ್ಚು ಜನ ಸಾವು

  ಅಂದ್ಹಾಗೆ, ಪಾಂಡವಪುರದಿಂದ ಮಂಡ್ಯಕ್ಕೆ ಹೋಗುತ್ತಿದ್ದ ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಕನಗನಮರಡಿ ಗ್ರಾಮದ ಬಳಿ ನಾಲೆಗೆ ಬಿದ್ದು ಪೂರ್ತಿ ಮುಳುಗಿದೆ. ಈ ದುರಂತದಲ್ಲಿ ಸುಮಾರು 20ಕ್ಕೂ ಅಧಿಕ ಜನರು ಮೃತಪಟ್ಟಿದ್ದಾರೆ.

  'ಶುದ್ಧಿ'ಗೆ ರಾಜ್ಯ ಪ್ರಶಸ್ತಿ, ಆಸ್ಕರ್ ಸಿಕ್ಕಷ್ಟೇ ಸಂಭ್ರಮ ಪಟ್ಟ ನಿರ್ದೇಶಕ ಆದರ್ಶ್

  ಈ ಘಟನೆ ತಿಳಿದ ಕೂಡಲೇ ಮುಖ್ಯಮಂತ್ರಿ ಕುಮಾರಸ್ವಾಮಿ ಘಟನ ಸ್ಥಳಕ್ಕೆ ಭೇಟಿ ನೀಡಲು ಮುಂದಾಗಿದ್ದು, ಇಂದು ನಿಗದಿಯಾಗಿದ್ದ ಎಲ್ಲಾ ಕಾರ್ಯಕ್ರಮಗಳನ್ನ ರದ್ದುಗೊಳಿಸಿ ಎಂದು ಸೂಚಿಸಿದ್ದಾರೆ.

  2017ನೇ ಸಾಲಿನ ರಾಜ್ಯ ಪ್ರಶಸ್ತಿ ಪ್ರಕಟ: ಸಂಪೂರ್ಣ ಪಟ್ಟಿ ಇಲ್ಲಿದೆ

  ಹೆಬ್ಬಾಳದ ಬಳಿಯಿರುವ ಜಿಕೆವಿಕೆಯಲ್ಲಿ 2017ನೇ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿ ವಿತರಣೆ ಸಮಾರಂಭ ಆಯೋಜನೆ ಮಾಡಲಾಗಿತ್ತು.

  English summary
  Karnataka state film awards presentation ceremony postponed. because chief minister hd kumaraswamy will visit to karaganamaradi village.

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X