ವಿಜಯಲಕ್ಷ್ಮಿ ದರ್ಶನ್‌, ವಿನೀಶ್ ಬಗ್ಗೆ ಅಶ್ಲೀಲ ಕಾಮೆಂಟ್ಸ್; ಮಹಿಳಾ ಆಯೋಗದಿಂದ ದೂರು

ಸೋಶಿಯಲ್ ಮೀಡಿಯಾದಲ್ಲಿ ಕಿಡಿಗೇಡಿಗಳ ಅಟ್ಟಹಾಸ ಮಿತಿ ಮೀರುತ್ತಿದೆ. ಸೆಲೆಬ್ರೆಟಿಗಳನ್ನು ಅದರಲ್ಲೂ ಮುಖ್ಯವಾಗಿ ಮಹಿಳೆಯರನ್ನು ಗುರಿಯಾಗಿಸಿ ಅಶ್ಲೀಲವಾಗಿ ಟ್ರೋಲ್ ಮಾಡುವ ಹುಚ್ಚಾಟ ಹೆಚ್ಚುತ್ತಿದೆ. ಇತ್ತೀಚೆಗೆ ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಅವರ ಬಗ್ಗೆ ಕಿಡಿಗೇಡಿಗಳು ಸೋಶಿಯಲ್ ಮೀಡಿಯಾದಲ್ಲಿ ಕೆಟ್ಟದಾಗಿ ಕಾಮೆಂಟ್ಸ್ ಮಾಡಿ ಟ್ರೋಲ್ ಮಾಡಿದ್ದರು. ಈ ಬಗ್ಗೆ ದರ್ಶನ್ ಅಭಿಮಾನಿಗಳು ಅಸಮಾಧಾನ ವ್ಯಕ್ತಪಡಿಸಿದ್ದರು.

ವಿಜಯಲಕ್ಷ್ಮಿ ದರ್ಶನ್ ಹಾಗೂ ಪುತ್ರ ವಿನೀಶ್ ಬಗ್ಗೆ ಕೆಲವರು ಅವಹೇಳನಕಾರಿಯಾಗಿ ಪೋಸ್ಟ್ ಮಾಡುತ್ತಿರುವ ಬಗ್ಗೆ ಮಹಿಳಾ ಆಯೋಗ ಸ್ಪಂದಿಸಿದೆ. ಸಾಮಾಜಿಕ ಹೋರಾಟಗಾರ ಬಿ. ಆರ್ ಭಾಸ್ಕರ್ ರಾವ್ ಎಂಬುವವರು ನೀಡಿದ ದೂರು ಆಧರಿಸಿ ಇದೀಗ ಬೆಂಗಳೂರು ಪೊಲೀಸ್ ಆಯುಕ್ತರಿಗೆ ಮಹಿಳಾ ಆಯೋಗದ ಅಧ್ಯಕ್ಷರಾದ ಡಾ.ನಾಗಲಕ್ಷ್ಮಿ ಪತ್ರ ಬರೆದಿದ್ದಾರೆ. ಕೂಡಲೇ ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.

Karnataka Women s Commission Seeks Action Against Trolls Targeting Darshan s Wife Vijayalakshmi

ಸೆಲೆಬ್ರೆಟಿಗಳನ್ನು ಗುರಿಯಾಗಿಸಿ ಸೋಶಿಯಲ್ ಮೀಡಿಯಾದಲ್ಲಿ ಕೆಟ್ಟದಾಗಿ ಪೋಸ್ಟ್, ಕಾಮೆಂಟ್ಸ್, ಮೀಮ್ಸ್ ಕ್ರಿಯೇಟ್ ಮಾಡಿ ಟ್ರೋಲ್ ಮಾಡುವ ಪ್ರವೃತ್ತಿ ಇತ್ತೀಚೆಗೆ ಹೆಚ್ಚಾಗ್ತಿದೆ. ಇತ್ತೀಚೆಗೆ ನಟಿ ರಮ್ಯಾ ಅವರಿಗೆ ಕಿಡಿಗೇಡಿಗಳು ಇದೇ ರೀತಿ ಕಿರುಕುಳ ನೀಡಿದ್ದರು. ಆಕೆಗೆ ಇನ್‌ಸ್ಟಾಗ್ರಾಮ್‌ನಲ್ಲಿ ನೇರವಾಗಿ ಅಶ್ಲೀಲ ಮೆಸೇಜ್ ಕಳುಹಿಸಿದ್ದರು. ಆಗ ಕೂಡ ಮಹಿಳಾ ಆಯೋಗ ಪೊಲೀಸ್ ಆಯುಕ್ತರಿಗೆ ದೂರು ನೀಡಿತ್ತು. ಬಳಿಕ ನಟಿ ರಮ್ಯಾ ಕೂಡ ದೂರು ನೀಡಿ ಸೂಕ್ತ ಕ್ರಮಕ್ಕೆ ಆಗ್ರಹಿಸಿದ್ದರು.

ನಟಿ ರಮ್ಯಾ ನೀಡಿದ ದೂರು ಆಧರಿಸಿ ಪೊಲೀಸರು ಕೆಲ ಕಿಡಿಗೇಡಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. ಈ ಹಿಂದೆ ನಿರ್ಮಾಪಕಿ ಅಶ್ವಿನಿ ಪುನೀತ್ ರಾಜ್‌ಕುಮಾರ್ ಬಗ್ಗೆಯೂ ಕಿಡಿಗೇಡಿಗಳು ಕೆಟ್ಟದಾಗಿ ಕಾಮೆಂಟ್ ಮಾಡಿದ್ದ ವಿಚಾರದಲ್ಲಿ ಭಾರೀ ಚರ್ಚೆ ಹುಟ್ಟುಹಾಕಿತ್ತು. ಈ ಬಗ್ಗೆ ಸಿಎಂ ಸಿದ್ಧರಾಮಯ್ಯ ಕೂಡ ಟ್ವೀಟ್ ಮಾಡಿ "ಹೆಣ್ಣುಮಕ್ಕಳ ತುಚ್ಛೀಕರಣವನ್ನು ನಮ್ಮ ಸರ್ಕಾರ ಖಂಡಿತ ಸಹಿಸುವುದಿಲ್ಲ, ಇದಕ್ಕೆ ಕಾರಣಕರ್ತರಾದ ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು" ಎಂದು ಎಚ್ಚರಿಕೆ ನೀಡಿದ್ದರು.

ಸದ್ಯ ವಿಜಯಲಕ್ಷ್ಮಿ ದರ್ಶನ್ ಬಗ್ಗೆ ಕಿಡಿಗೇಡಿಗಳ ಟ್ರೋಲ್ ಬಗ್ಗೆ ಡಾ. ನಾಗಲಕ್ಷ್ಮಿ ಪತ್ರ ಬರೆದು "ಸಾಮಾಜಿಕ ಹೋರಾಟಗಾರರಾದ ಬಿ. ಆರ್ ಭಾಸ್ಕರ್ ಪುಸಾದ್ ಆಯೋಗಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿಯಲ್ಲಿ ಅರ್ಜಿದಾರರು ಖ್ಯಾತ ನಟ ದರ್ಶನ್ ರವರ ಧರ್ಮ ಪತ್ನಿಯಾದ ವಿಜಯಲಕ್ಷ್ಮೀ ದರ್ಶನ್ ಹಾಗೂ ಇವರ ಮಗನ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅಶ್ಲೀಲ ಹಾಗೂ ಅವಾಚ್ಯ ಶಬ್ದಗಳಿಂದ ನಿಂದಿಸಿ ಮಾನಸಿಕ ಕಿರುಕುಳ ನೀಡುತ್ತಿರುವುದಲ್ಲದೇ, ಸಾಮಾಜಿಕ ಜಾಲತಾಣಗಳಲ್ಲಿ ಹೆಣ್ಣಿನ ಸ್ವಾಭಿಮಾನ ಹಾಗೂ ಗೌರವಕ್ಕೆ ಧಕ್ಕೆ ತರುವಂತಹ ಪೋಸ್ಟ್ ಮಾಡುವವರ ವಿರುದ್ದ ಕಾನೂನು ಕ್ರಮ ಜರುಗಿಸಿ ನ್ಯಾಯ ಹಾಗೂ ರಕ್ಷಣೆ ಒದಗಿಸುವಂತೆ ಮನವಿ ಮಾಡಿರುತ್ತಾರೆ. ಸೂಕ್ತ ಕ್ರಮ ಕೈಗೊಂಡು, ಕೈಗೊಂಡ ಕ್ರಮದ ವರದಿಯನ್ನು ಆಯೋಗಕ್ಕೆ 15 ದಿನಗಳಲ್ಲಿ ಸಲ್ಲಿಸಿ" ಎಂದು ಪೊಲೀಸ್ ಆಯುಕ್ತರಲ್ಲಿ ಮನವಿ ಮಾಡಿದ್ದಾರೆ.

ಈ ಪತ್ರವನ್ನು ದರ್ಶನ್ ಅಭಿಮಾನಿಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಮಾಡುತ್ತಿದ್ದಾರೆ. ರೇಣುಕಾಸ್ವಾಮಿ ಪ್ರಕರಣದಲ್ಲಿ ವಿಚಾರಣಾಧೀನ ಕೈದಿಯಾಗಿ ನಟ ದರ್ಶನ್ ಮತ್ತೆ ಜೈಲು ಸೇರಿದ್ದಾರೆ. ಗಣೇಶ ಹಬ್ಬಕ್ಕೆ ಪತಿಯ ಜೊತೆಗಿನ ಫೋಟೊ ಹಂಚಿಕೊಂಡು ವಿಜಯಲಕ್ಷ್ಮಿ ದರ್ಶನ್ ಶುಭಾಶಯ ಕೋರಿದ್ದರು. ಇನ್ನು ದರ್ಶನ್ ನಟನೆಯ 'ಡೆವಿಲ್' ಸಿನಿಮಾ ಬಿಡುಗಡೆಗೆ ಸಜ್ಜಾಗುತ್ತಿದೆ. ಚಿತ್ರದ ಮೊದಲ ಹಾಡು ಬಿಡುಗಡೆಯಾಗಿ ಸಖತ್ ವೈರಲ್ ಆಗುತ್ತಿದೆ. ಪ್ರಕಾಶ್ ನಿರ್ದೇಶನದ ಸಿನಿಮಾ ಡಿಸೆಂಬರ್ 12ಕ್ಕೆ ತೆರೆಗೆ ಬರಲಿದೆ. ದರ್ಶನ್ ಈಗಾಗಲೇ ಚಿತ್ರದ ಚಿತ್ರೀಕರಣ ಹಾಗೂ ಡಬ್ಬಿಂಗ್ ಮುಗಿಸಿದ್ದಾರೆ.

More from Filmibeat

English summary
Karnataka Women’s Commission has urged Bengaluru Police to act against miscreants who trolled actor Darshan’s wife Vijayalakshmi
Read more about: darshan vijayalakshmi sandalwood
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X