For Quick Alerts
  ALLOW NOTIFICATIONS  
  For Daily Alerts

  'ಹುಟ್ಟುಹಬ್ಬದ ಶುಭಾಶಯ' ಹೇಳಲು ಬಂದ್ರು ಕವಿತಾ ಗೌಡ

  |

  ಕಿರುತೆರೆ ಮೂಲಕ ಕನ್ನಡ ಪ್ರೇಕ್ಷಕರ ಮನಗೆದಿದ್ದ ನಟಿ ಕವಿತಾ ಗೌಡ ಈಗ ಬೆಳ್ಳೆ ಪರದೆ ಮೇಲೆ ಮಿಂಚುತ್ತಿದ್ದಾರೆ. ಬಿಗ್ ಬಾಸ್ ರಿಯಾಲಿಟಿ ಶೋನಲ್ಲಿ ಭಾಗಿಯಾಗಿ ತನ್ನ ಖ್ಯಾತಿಯನ್ನು ಮತ್ತಷ್ಟು ಹೆಚ್ಚಿಸಿಕೊಂಡಿರುವ ಕವಿತಾ ಈಗ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಸದ್ಯ ಕವಿತಾ 'ಹುಟ್ಟುಹಬ್ಬದ ಶುಭಾಶಯಗಳು' ಹೇಳಲು ಬರ್ತಿದ್ದಾರೆ.

  ಹೌದು ಸ್ಯಾಂಡಲ್ ವುಡ್ ನ ದೂದ್ ಪೇಡ ದಿಗಂತ್ ಅಭಿನಯದ ಹೊಸ ಸಿನಿಮಾ 'ಹುಟ್ಟುಹಬ್ಬದ ಶುಭಾಶಯಗಳು' ಚಿತ್ರಕ್ಕೆ ಕವಿತಾ ನಾಯಕಿಯಾಗಿ ಆಯ್ಕೆ ಆಗಿದ್ದಾರೆ. ಮೊದಲ ಬಾರಿಗೆ ಕವಿತಾ ದಿಗಂತ್ ಜೊತೆ ತೆರೆಹಂಚಿಕೊಳ್ಳುತ್ತಿದ್ದಾರೆ. ಈ ಫ್ರೆಶ್ ಪೇರ್ ನೋಡಲು ಪ್ರೇಕ್ಷಕರು ಕಾತುರರಾಗಿದ್ದಾರೆ.

  'ಹೀರೋ' ವಿಜಯ್ ದೇವರಕೊಂಡ ಸಿನಿಮಾದಲ್ಲಿ ದಿಗಂತ್

  ದಿಗಂತ್ ವರ್ಷದ ಬಳಿಕ 'ಹುಟ್ಟುಹಬ್ಬದ ಶುಭಾಶಯಗಳು' ಸಿನಿಮಾಗೆ ಗ್ರೀನ್ ಸಿಗ್ನಲ್ ನೀಡಿದ್ದಾರೆ. ಮದುವೆ ನಂತರ ಕೊಂಚ ಬ್ರೇಕ್ ತೆಗೆದು ಕೊಂಡಿದ್ದ ದಿಗಂತ್ ಈಗ ಹೊಸ ಸಿನಿಮಾ ಮೂಲಕ ಅಭಿಮಾನಿಗಳ ಮುಂದೆ ಬರಲು ಸಜ್ಜಾಗಿದ್ದಾರೆ. ಇನ್ನು ಕವಿತಾ ಗೌಡ ಬಿಗ್ ಬಾಸ್ ನಿಂದ ಹೊರ ಬಂದ ನಂತರ 'ಗುಬ್ಬಿ ಮೇಲೆ ಬ್ರಹ್ಮಾತ್ರ' ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ. 'ಹುಟ್ಟುಹಬ್ಬದ ಶುಭಾಶಯಗಳು' ಕವಿತಾ ಅವರ ಎರಡನೆ ಸಿನಿಮಾ ಆಗಿದೆ.

  ಅಂದ್ಹಾಗೆ ಈ ಚಿತ್ರವನ್ನು ಯುವ ನಿರ್ದೇಶಕ ನಾಗರಾಜ್ ಬೇತೂರ್ ನಿರ್ದೇಶನ ಮಾಡುತ್ತಿದ್ದಾರೆ. ಇನ್ನು ಈ ಚಿತ್ರಕ್ಕೆ 'ಚಮಕ್' ಮತ್ತು 'ಅಯೋಗ್ಯ' ಅಂತಹ ಸೂಪರ್ ಹಿಟ್ ಚಿತ್ರಗಳನ್ನು ನೀಡಿರುವ ನಿರ್ಮಾಪಕ ಟಿ.ಆರ್ ಚಂದ್ರಶೇಖರ್ ಬಂಡವಾಳ ಹೂಡುತ್ತಿದ್ದಾರೆ. 'ಹುಟ್ಟುಹಬ್ಬದ ಶುಭಾಶಯಗಳು' ಕಾಮಿಡಿ ಥ್ರಿಲ್ಲಿಂಗ್ ಸಿನಿಮಾ ಆಗಿದೆ.

  English summary
  Small screen famous actress Kavitha Gowda paired opposite actor Diganth in 'Huttuhabbada Shubhashayagalu' movie. This movie is directed by Nagaraj.

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X