For Quick Alerts
  ALLOW NOTIFICATIONS  
  For Daily Alerts

  ಸಂಯುಕ್ತಾ ಹೆಗಡೆ ಮೇಲೆ ಹಲ್ಲೆ ಪ್ರಕರಣ: ಬಹಿರಂಗ ಕ್ಷಮೆ ಕೇಳಿದ ಕಾಂಗ್ರೆಸ್ ವಕ್ತಾರೆ ಕವಿತಾ ರೆಡ್ಡಿ

  |

  ನಟಿ ಸಂಯುಕ್ತಾ ಹೆಗಡೆ ಮತ್ತು ಸ್ನೇಹಿತರ ಮೇಲೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ವಕ್ತಾರೆ ಕವಿತಾ ರೆಡ್ಡಿ ಬಹಿರಂಗವಾಗಿ ಕ್ಷಮೆ ಕೇಳಿದ್ದಾರೆ. ಸಂಯುಕ್ತಾ ಮೇಲೆ ನಡೆದ ಹಲ್ಲೆ ಪ್ರಕರಣಕ್ಕೆ ವ್ಯಾಪಕ ಖಂಡನೆ ವ್ಯಕ್ತವಾಗಿತ್ತು.

  ದೀಪು ಸರ್ ಅಂತ ಕರೆಯೋದು ನಂಗೆ ಅಭ್ಯಾಸ | Sudheendra Venkatesh | Kiccha Sudeep | Filmibeat Kannada

  ಕವಿತಾ ರೆಡ್ಡಿಯನ್ನು ಬಂಧಿಸುವಂತೆ ಅನೇಕರು ಸಾಮಾಜಿಕ ಜಾಲತಾಣದಲ್ಲಿ ಒತ್ತಾಯ ಮಾಡುತ್ತಿದ್ದರು. ಹಿರಿಯ ನಟ ಜಗ್ಗೇಶ್, ನಟಿ ರಮ್ಯಾ, ನಿರ್ದೇಶಕರಾದ ಸಿಂಪಲ್ ಸುನಿ, ಸಂತೋಷ್ ಆನಂದ್ ರಾಮ್, ನಟಿ ಪಾರುಲ್ ಯಾದವ್ ಮತ್ತು ಮೇಘನಾ ಗಾಂವ್ಕರ್ ಸೇರಿದ್ದಂತೆ ಕಲಾವಿದರು ಮತ್ತು ರಾಜಕಾರಣಿಗಳು ಸಂಯುಕ್ತಾ ಬೆಂಬಲಕ್ಕೆ ನಿಂತಿದ್ದರು.

  ಸಂಯುಕ್ತಾ ಹೆಗ್ಡೆ ಮೇಲೆ ನೈತಿಕ ಪೊಲೀಸ್‌ಗಿರಿ: ನಟಿ ರಮ್ಯಾ ಹೇಳಿದ್ದು ಹೀಗೆ

  ಇದೀಗ ಕವಿತಾ ರೆಡ್ಡಿಗೆ ಮಾಡಿದ ತಪ್ಪಿನ ಅರಿವಾಗಿ ಕ್ಷಮೆ ಕೇಳಿ, ವಿಡಿಯೋವನ್ನು ಟ್ವಿಟ್ಟರ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

  "ನಾನು ಯಾವಾಗಲು ನೈತಿಕ ಪೊಲೀಸ್ ಗಿರಿಯನ್ನು ವಿರೋಧಿಸುತ್ತೇನೆ. ಮೊನ್ನೆ ನಡೆದ ಘಟನೆ ಬಗ್ಗೆ ಅರಿವಾಗಿದೆ. ನಾನು ಆಕ್ರಮಣಕಾರಿಯಾಗಿ ಪ್ರತಿಕ್ರಿಯಿಸಿದೆ. ಅದು ತಪ್ಪು ಎಂದು ಗೊತ್ತಾಗಿದೆ. ಜವಾಬ್ದಾರಿಯುತ ನಾಗರಿಕಳಾಗಿ ಮತ್ತು ಪ್ರಗತಿಪರ ಮಹಿಳೆಯಾಗಿ ನಾನು ಪ್ರಾಮಾಣಿಕವಾಗಿ ಸಂಯುಕ್ತಾ ಹೆಗಡೆ ಮತ್ತು ಅವರ ಸ್ನೇಹಿತರಲ್ಲಿ ಕ್ಷಮೆಯಾಚಿಸುತ್ತೇನೆ." ಎಂದು ಹೇಳಿದ್ದಾರೆ.

  "ಕವಿತಾ ರೆಡ್ಡಿ ಕ್ಷಮೆಯನ್ನು ಸ್ವೀಕರಿಸಿದ್ದೇನೆ. ಎಲ್ಲರೂ ಈ ಘಟನೆಯಿಂದ ಮುಂದುವರೆಯೋಣ. ಮಹಿಳೆಯರಿಗೆ ಸುರಕ್ಷಿತ ಭಾವನೆ ಮೂಡಿಸಬಹುದು ಎಂದು ನಾನು ಭಾವಿಸುತ್ತೇನೆ." ಎಂದು ನಟಿ ಸಂಯುಕ್ತಾ ಕ್ಷಮೆ ಸ್ವೀಕರಿಸಿ ಟ್ವೀಟ್ ಮಾಡಿದ್ದಾರೆ.

  ಸಂಯುಕ್ತಾ ಮತ್ತು ಸ್ನೇಹಿತರು ಪಾರ್ಕ್ ನಲ್ಲಿ ವರ್ಕೌಟ್ ಮಾಡುತ್ತಿದ್ದ ಸಮಯದಲ್ಲಿ ಸಂಯುಕ್ತ ಧರಿಸಿದ್ದ ಉಡುಪಿನ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿ, ಬೆದರಿಕೆ ಹಾಕಿ, ಸಂಯುಕ್ತಾ ಸ್ನೇಹಿತರ ಮೇಲೆ ಕವಿತಾ ರೆಡ್ಡಿ ಹಲ್ಲೆ ಮಾಡಿದ್ದರು. ಹಲ್ಲೆ ಮಾಡಿದ ವಿಡಿಯೋವನ್ನು ಹಾಗೂ ಆ ಘಟನೆಯ ವಿಡಿಯೋವನ್ನು ನಟಿ ಸಂಯುಕ್ತಾ ಹೆಗಡೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದರು.

  English summary
  Kavitha Reddy apologize for attacking Actress Samyuktha Hegde.

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X