KCC: ಈ ಸಲ ಧನಂಜಯ್ ಟೀಮ್ ಚಾಂಪಿಯನ್ಸ್; ಕಳೆದ ಬಾರಿ ಯಶ್ ತಂಡವನ್ನು ಸೋಲಿಸಿ ಕಪ್ ಗೆದ್ದವರಾರು?

ಕಳೆದ ಎರಡು ದಿನಗಳ ಕಾಲ ನಡೆದ ಕನ್ನಡ ಚಲನಚಿತ್ರ ಕಪ್ ಕ್ರಿಕೆಟ್ ಟೂರ್ನಿಯ ಮೂರನೇ ಆವೃತ್ತಿ ನಿನ್ನೆ ( ಫೆಬ್ರವರಿ 25 ) ನಡೆದ ಫೈನಲ್ ಪಂದ್ಯದ ಮೂಲಕ ಮುಕ್ತಾಯಗೊಂಡಿದೆ. ಆರು ತಂಡಗಳ ನಡುವೆ ನಡೆದ ಸೆಣಸಾಟದಲ್ಲಿ ಅಂತಿಮವಾಗಿ ಧನಂಜಯ್ ನಾಯಕತ್ವದ ಗಂಗಾ ವಾರಿಯರ್ಸ್ ತಂಡ ಉಪೇಂದ್ರ ನಾಯಕತ್ವದ ವಿಜಯನಗರ ಪೇಟ್ರಿಯಾಟ್ಸ್ ವಿರುದ್ಧ ಭರ್ಜರಿ ಗೆಲುವು ಸಾಧಿಸುವುದರ ಮೂಲಕ ಚಾಂಪಿಯನ್ಸ್ ಆಗಿ ಹೊರಹೊಮ್ಮಿದೆ.

ಇನ್ನು ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದ ಗಂಗಾ ವಾರಿಯರ್ಸ್ ಫೀಲ್ಡಿಂಗ್ ಆಯ್ದುಕೊಂಡು ಎದುರಾಳಿ ವಿಜಯನಗರ ಪೇಟ್ರಿಯಾಟ್ಸ್ ತಂಡವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿತು. ಅದರಂತೆ ವಿಜಯನಗರ ಪೇಟ್ರಿಯಾಟ್ಸ್ ತಂಡ 10 ಓವರ್‌ಗಳಲ್ಲಿ 8 ವಿಕೆಟ್ ಕಳೆದುಕೊಂಡು 81 ರನ್ ಕಲೆಹಾಕಿ ಗಂಗಾ ವಾರಿಯರ್ಸ್ ತಂಡಕ್ಕೆ 82 ರನ್‌ಗಳ ಗುರಿಯನ್ನು ನೀಡಿತು. ಇನ್ನು ಈ ಗುರಿಯನ್ನು ಧನಂಜಯ್ ನಾಯಕತ್ವದ ಗಂಗಾ ವಾರಿಯರ್ಸ್ ಯಶಸ್ವಿಯಾಗಿ ಬೆನ್ನತ್ತಿ ಗೆಲುವನ್ನು ಕಂಡು ಚಾಂಪಿಯನ್ ಎನಿಸಿಕೊಂಡಿದೆ. ಈ ಮೂಲಕ ಉಪೇಂದ್ರ ನಾಯಕತ್ವದ ವಿಜಯನಗರ ಪೇಟ್ರಿಯಾಟ್ಸ್ ರನ್ನರ್ ಅಪ್ ಆಗಿ ಹೊರಹೊಮ್ಮಿದೆ.

KCC: List of winners and runner up teams in Kannada Chalanachitra Cup history

ಹೀಗೆ ಈ ಬಾರಿಯ ಕನ್ನಡ ಚಲನಚಿತ್ರ ಕಪ್ ಕ್ರಿಕೆಟ್ ಟೂರ್ನಿ ಅಂತ್ಯಗೊಂಡಿದ್ದು, ಗೆದ್ದ ಪ್ರಶಸ್ತಿಯನ್ನು ಗಂಗಾ ವಾರಿಯರ್ಸ್ ತಂಡ ಕರ್ನಾಟಕ ರತ್ನ ಡಾ ಪುನೀತ್ ರಾಜ್‌ಕುಮಾರ್ ಅವರಿಗೆ ಅರ್ಪಿಸಿದೆ. ಸದ್ಯ ಈ ಬಾರಿಯ ವಿನ್ನರ್ ಹಾಗೂ ರನ್ನರ್‌ಗಳ ಚರ್ಚೆ ಸಾಮಾಜಿಕ ಜಾಲತಾಣದಲ್ಲಿ ಏರ್ಪಡುತ್ತಿದ್ದು, ಕಳೆದ ಬಾರಿ ಯಾವ ತಂಡಗಳು ಫೈನಲ್ ಪಂದ್ಯದಲ್ಲಿ ಮುಖಾಮುಖಿಯಾಗಿದ್ದವು ಹಾಗೂ ಯಾವ ತಂಡ ಕಪ್ ಗೆದ್ದು ಚಾಂಪಿಯನ್ ಎನಿಸಿಕೊಂಡಿತ್ತು ಎಂಬ ಮಾಹಿತಿ ಈ ಕೆಳಕಂಡಂತಿದೆ..

ಕಳೆದ ಬಾರಿಯ ಕನ್ನಡ ಚಲನಚಿತ್ರ ಕಪ್ ಕ್ರಿಕೆಟ್ ಟೂರ್ನಿ ನಡೆದದ್ದು 2018ರಲ್ಲಿ. ಆ ಬಾರಿ ಫೈನಲ್‌ ಪಂದ್ಯದಲ್ಲಿ ಯಶ್ ನಾಯಕತ್ವದ ರಾಷ್ಟ್ರಕೂಟ ಪ್ಯಾಂಥರ್ಸ್ ಹಾಗೂ ಗಣೇಶ್ ನಾಯಕತ್ವದ ಒಡೆಯರ್ ಚಾರ್ಜರ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಟಾಸ್ ಗೆದ್ದಿದ್ದ ಗಣೇಶ್ ನಾಯಕತ್ವದ ಒಡೆಯರ್ ಚಾರ್ಜರ್ಸ್ ಫೀಲ್ಡಿಂಗ್ ಆಯ್ದುಕೊಂಡು ಎದುರಾಳಿ ರಾಷ್ಟ್ರಕೂಟ ಪ್ಯಾಂಥರ್ಸ್ ತಂಡವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿತ್ತು. ರಾಷ್ಟ್ರಕೂಟ ಪ್ಯಾಂಥರ್ಸ್ 10 ಓವರ್‌ಗಳಲ್ಲಿ 122 ರನ್ ಕಲೆ ಹಾಕಿ ಎದುರಾಳಿ ಒಡೆಯರ್ ಚಾರ್ಜರ್ಸ್‌ಗೆ 123 ರನ್‌ಗಳ ಕಠಿಣ ಗುರಿಯನ್ನು ನೀಡಿತ್ತು.

KCC: List of winners and runner up teams in Kannada Chalanachitra Cup history

ಈ ಗುರಿಯನ್ನು ಬೆನ್ನತ್ತಿದ ಒಡೆಯರ್ ಚಾರ್ಜರ್ಸ್ 9.5 ಓವರ್‌ಗಳಲ್ಲಿ 121 ರನ್ ಗಳಿಸಿತ್ತು. ಕೊನೆಯ ಒಂದು ಎಸೆತಕ್ಕೆ ಎರಡು ರನ್‌ಗಳ ಅಗತ್ಯವಿದ್ದಾಗ ಒಡೆಯರ್ ಚಾರ್ಜರ್ಸ್ ತಂಡದ ಆಟಗಾರ ರಿತೇಶ್ ಭಟ್ಕಳ್ ಸಿಕ್ಸರ್ ಚಚ್ಚುವ ಮೂಲಕ ರೋಚಕ ಜಯವನ್ನು ತಂದಿಟ್ಟಿದ್ದರು. ಈ ಮೂಲಕ ಕಳೆದ ಬಾರಿ ಗಣೇಶ್ ನಾಯಕತ್ವದ ಒಡೆಯರ್ ಚಾರ್ಜರ್ಸ್ ಯಶ್ ನಾಯಕತ್ವದ ರಾಷ್ಟ್ರಕೂಟ ಪ್ಯಾಂಥರ್ಸ್ ತಂಡವನ್ನು ಸೋಲಿಸಿ ಚಾಂಪಿಯನ್ ಆಗಿ ಹೊರಹೊಮ್ಮಿತ್ತು. ಯಶ್ ತಂಡ ರಾಷ್ಟ್ರಕೂಟ ಪ್ಯಾಂಥರ್ಸ್ ರನ್ನರ್ ಅಪ್ ತಂಡವಾಗಿ ತೃಪ್ತಿಪಟ್ಟುಕೊಂಡಿತ್ತು.

More from Filmibeat

English summary
KCC: List of winners and runner up teams in Kannada Chalanachitra Cup history. Read on
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X