For Quick Alerts
  ALLOW NOTIFICATIONS  
  For Daily Alerts

  ಡ್ರಗ್ಸ್ ಪ್ರಕರಣ: 'ಕೆಂಪೇಗೌಡ' ಸಿನಿಮಾ ನಿರ್ಮಾಪಕ ಶಂಕರಗೌಡಗೆ 14 ದಿನ ನ್ಯಾಯಾಂಗ ಬಂಧನ

  |

  ಡ್ರಗ್ಸ್ ಪ್ರಕರಣ ಸಂಬಂಧ ಅರೆಸ್ಟ್ ಆಗಿರುವ ಸ್ಯಾಂಡಲ್ ವುಡ್‌ನ ನಿರ್ಮಾಪಕ ಶಂಕರಗೌಡ ಅವರಿಗೆ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಆದೇಶ ನೀಡಲಾಗಿದೆ. ಕೋರಮಂಗಲದಲ್ಲಿರುವ ಮ್ಯಾಜಿಸ್ಟ್ರೇಟ್ ನ್ಯಾಯಾಧೀಶರ ಆದೇಶ ನೀಡಿದ್ದಾರೆ.

  ಡ್ರಗ್ಸ್‌ ಕೇಸ್‌, ಸ್ಯಾಂಡಲ್‌ವುಡ್‌ ಚಿತ್ರ ನಿರ್ಮಾಪಕ ಶಂಕರ್‌ ಗೌಡ ಅರೆಸ್ಟ್‌ | Filmibeat Kannada

  ಡ್ರಗ್ಸ್ ಮಾರಾಟ ಮಾಡುತ್ತಿದ್ದ ಆರೋಪದಡಿ ನೈಜೀರಿಯಾ ಪ್ರಜೆಗಳು ಸೇರಿ ಹಲವರನ್ನು ಇತ್ತೀಚಿಗಷ್ಟೆ ಪೊಲೀಸರು ಬಂಧಿಸಿದ್ದರು. ಸುಮಾರು 4 ಕೋಟಿ ರೂ ಮೌಲ್ಯದ ಡ್ರಗ್ಸ್ ಜಪ್ತಿ ಮಾಡಿದ್ದರು. ಆರೋಪಿಗಳು ನೀಡಿದ್ದ ಮಾಹಿತಿ ಆಧರಿಸಿ ಬಿಗ್ ಬಾಸ್ ರಿಯಾಲಿಟಿ ಶೋ ಸ್ಪರ್ಧಿ ಮಸ್ತಾನ್ ಚಂದ್ರ ಹಾಗೂ ನಿರ್ಮಾಪಕ ಶಂಕರಗೌಡ ಕಚೇರಿ ಮೇಲೆ ದಾಳಿ ಮಾಡಿದ್ದರು.

  ಪ್ರಕರಣ ಸಂಬಂಧ ಶಂಕರಗೌಡ ಅವರನ್ನು ವಶಕ್ಕೆ ಪಡೆದಿದ್ದ ಪೊಲೀಸರು, ಹೆಚ್ಚಿನ ವಿಚಾರಣೆ ನಡೆಸಿ, ಸೂಕ್ತ ದಾಖಲೆ ಲಭ್ಯವಾದ ಬಳಿಕ ಶಂಕರಗೌಡ ಅವರನ್ನು ಬಂಧಿಸಿದ್ದರು.

  ಶಂಕರಗೌಡ, ಕೆಂಪೇಗೌಡ ಸೇರಿದಂತೆ ಹಲವು ಸಿನಿಮಾಗಳನ್ನು ನಿರ್ಮಾಣ ಮಾಡಿದ್ದಾರೆ. ಶಂಕರಗೌಡ, ತಮ್ಮದೇ ಕಚೇರಿ ಹಾಗೂ ಇತರೆಡೆ ಪಾರ್ಟಿಗಳನ್ನು ಆಯೋಜಿಸಿ, ಅಲ್ಲಿಗೆ ಬರುತ್ತಿದ್ದ ಅತಿಥಿಗಳಿಗೆ ಡ್ರಗ್ಸ್ ಕೊಡುತ್ತಿದ್ದರು. ಡ್ರಗ್ಸ್ ಖರೀದಿಸಲು ಹಣವನ್ನು ನೀಡುತ್ತಿದ್ದರು ಎಂಬುದು ಗೊತ್ತಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.

  ಆಂಧ್ರ, ದೆಹಲಿ, ಕೊಲ್ಕತ್ತಾ, ಮುಂಬೈ ಮೂಲದ ಸೆಲೆಬ್ರಿಟಿಗಳು, ಉದ್ಯಮಿಗಳು ಪಾರ್ಟಿಯಲ್ಲಿ ಭಾಗಿಯಾಗುತ್ತಿದ್ದರು ಎನ್ನುವ ಮಾಹಿತಿ ಲಭ್ಯವಾಗಿದೆ. ಹೈದರಾಬಾದ್ ಮೂಲದ ಸೆಲೆಬ್ರಿಟಿಗಳು ಮತ್ತು ಉದ್ಯಮಿಗಳೇ ಜಾಸ್ತಿ ಇರುತ್ತಿದ್ದರು ಎನ್ನುವ ಮಾಹಿತಿ ತಿಳಿದು ಬಂದಿದೆ.

  ಶಂಕರಗೌಡ ಮಾಹಿತಿ ಆಧರಿಸಿ ಗೋವಿಂದಪುರ ಪೊಲೀಸರು ಮತ್ತಷ್ಟು ಸೆಲೆಬ್ರಿಟಿಗಳಿಗೆ ನೋಟಿಸ್ ನೀಡುವ ಸಾಧ್ಯತೆ ಇದೆ.

  English summary
  Kempe Gowda movie producer Shankar Gowda arrested.

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X