»   » ಸಂಗೀತ ನಿರ್ದೇಶಕ ಗುರುಕಿರಣ್‌ಗೆ ಕೆಂಪೇಗೌಡ ಪ್ರಶಸ್ತಿ

ಸಂಗೀತ ನಿರ್ದೇಶಕ ಗುರುಕಿರಣ್‌ಗೆ ಕೆಂಪೇಗೌಡ ಪ್ರಶಸ್ತಿ

Posted By: ಒನ್‌ಇಂಡಿಯಾ ಪ್ರತಿನಿಧಿ
Subscribe to Filmibeat Kannada

ಚಿತ್ರರಂಗಕ್ಕೆ ಹಲವಾರು ಖ್ಯಾತನಾಮರನ್ನು ಕೊಟ್ಟಿರುವ ತುಳುನಾಡಿನ ಓರ್ವ ಪ್ರಖ್ಯಾತ ಸಂಗೀತ ನಿರ್ದೇಶಕ ಗುರುಕಿರಣ್ ಅವರಿಗೆ 2017 ನೇ ಸಾಲಿನ ಅತ್ಯಂತ ಪ್ರತಿಷ್ಠಿತ 'ಕೆಂಪೇಗೌಡ ಪ್ರಶಸ್ತಿ' ಪ್ರದಾನ ಮಾಡಲಾಯಿತು. ಈ ಮೂಲಕ ಅವರ ಪ್ರತಿಭೆಗೆ ಹೊಸದೊಂದು ಮನ್ನಣೆ ಸಿಕ್ಕಂತಾಗಿದೆ. ಈಗಾಗಲೇ ಮೂರು ಬಾರಿ ಫಿಲಂಫೇರ್ ಪ್ರಶಸ್ತಿಗೆ ಭಾಜನರಾಗಿ ರಾಜ್ಯ ಪ್ರಶಸ್ತಿಯನ್ನೂ ಗಳಿಸಿದ್ದಾರೆ. ಈಗ ಕೆಂಪೇಗೌಡ ಪ್ರಶಸ್ತಿ ಸಂದಿರುವುದು ಆ ಸಾಲಿಗೆ ಮತ್ತೊಂದು ಸೇರ್ಪಡೆ.

ಅತ್ಯಂತ ಯಶಸ್ವಿ ಸಂಗೀತ ನಿರ್ದೇಶಕರ ಸಾಲಿನಲ್ಲಿ ಗುರುತಿಸಿಕೊಂಡಿರುವ ಗುರುಕಿರಣ್ ರವರು ಹಲವಾರು ಟಿವಿ ರಿಯಾಲಿಟಿ ಶೋಗಳಲ್ಲೂ ತೀರ್ಪುಗಾರರಾಗಿದ್ದರು. ಒಂದು ಹಂತದಲ್ಲಿ ನಟನಾ ಕ್ಷೇತ್ರದಲ್ಲೂ ಮಿಂಚಿರುವ ಗುರುಕಿರಣ್ ತುಳುನಾಡಿನಿಂದಲೇ ಬೆಳೆದು ಬಂದಿರುವ ಪ್ರತಿಭೆ. ಇವರು ಈಗ ಪ್ರತ್ಯೇಕ ಸಂಗೀತ ತಂಡವೊಂದನ್ನು ಹೊಂದಿದ್ದು, ಅದಕ್ಕೆ ರಾಜ್ಯವ್ಯಾಪಿಯಾಗಿ ಭಾರೀ ಬೇಡಿಕೆಯಿದೆ. ಗುರುಕಿರಣ್ ರವರ ಸಂಗೀತ ಬ್ಯಾಂಡ್ ಗೆ ಒಪ್ಪಿಕೊಳ್ಳಲು ಸಾಧ್ಯವಿಲ್ಲದಷ್ಟು ಅವಕಾಶಗಳು ಬರುತ್ತಿರುವುದು ಇವರಿಗಿರುವ ಬೇಡಿಕೆ, ಅಭಿಮಾನಿ ವರ್ಗಕ್ಕೆ ಒಂದು ಉತ್ತಮ ಸಾಕ್ಷಿ.

Kempegowda Award distributed to Music director Gurukiran

ಕನ್ನಡ, ತಮಿಳು, ತೆಲುಗು, ಮಲಯಾಳಂ ಸೇರಿದಂತೆ ಹಲವಾರು ಭಾಷೆಗಳ ಸಿನಿಮಾಗಳಿಗೆ ಸಂಗೀತ ನಿರ್ದೇಶನ ನೀಡಿರುವ ಇವರು ಇನ್ನೂ ಕುಡ್ಲದ ಹುಡುಗನಾಗಿ ಸರಳತೆಯನ್ನು ಮೈಗೂಡಿಸಿಕೊಂಡಿದ್ದಾರೆ. ಮಂಗಳೂರಿಗೆ ಬಂದಾಗ ತನ್ನ ಹಳೆಯ ಗೆಳೆಯರನ್ನು ಭೇಟಿಯಾಗದೆ ಹೋಗುವುದೇ ಇಲ್ಲ. ಸಮಯ ಸಿಕ್ಕಾಗಲೆಲ್ಲ ಅವರೊಂದಿಗೆ ದೂರವಾಣಿ ಸಂಪರ್ಕದಲ್ಲೂ ಇರುವ ಇವರು ತುಳುನಾಡಿನ ಬಗ್ಗೆ ಅಪಾರ ಒಲವು, ಅಭಿಮಾನ, ಪ್ರೀತಿ ಹೊಂದಿರುವ ಕಲಾವಿದರು.

ಕೆಂಪೇಗೌಡ ಪ್ರಶಸ್ತಿಯಿಂದ ಅಲಂಕೃತವಾಗಿರುವ ಅವರಿಗೆ ನಾವೆಲ್ಲರೂ ಶುಭ ಕೋರುವುದರೊಂದಿಗೆ ಸಿನಿಮಾ ರಂಗದಲ್ಲಿ ಇನ್ನಷ್ಟು ಸಾಧನೆ ಮಾಡಲಿ. ರಾಷ್ಟ್ರಮಟ್ಟದ ಪ್ರತಿಷ್ಠಿತ ಪ್ರಶಸ್ತಿಗಳು ಗುರು ಕಿರಣ್ ರವರಿಗೆ ಲಭಿಸಲಿ ಎಂದು ಹಾರೈಸೋಣ.

English summary
Kempegowda Award distributed to Music director GuruKiran

Kannada Photos

Go to : More Photos

ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ - Filmibeat Kannada

X