For Quick Alerts
  ALLOW NOTIFICATIONS  
  For Daily Alerts

  'KGF-2' ರಿಲೀಸ್ ಮುಂದಕ್ಕೆ: ಈ ವರ್ಷ ಯಶ್ ಸಿನಿಮಾ ಬಿಡುಗಡೆ ಆಗುವುದು ಅನುಮಾನ?

  By ಫಿಲ್ಮ್ ಡೆಸ್ಕ್
  |

  ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷೆಯ ಕೆಜಿಎಫ್-2 ಸಿನಿಮಾದ ಚಿತ್ರೀಕರಣ ಬಹುತೇಕ ಮುಕ್ತಾಯವಾಗಿದೆ. 20 ದಿನಗಳ ಚಿತ್ರೀಕರಣ ಬಾಕಿಯುಳಿಸಿಕೊಂಡಿರುವ ಸಿನಿಮಾತಂಡ ಇದೇ ತಿಂಗಳು 15ರ ನಂತರ ಚಿತ್ರೀಕರಣಕ್ಕೆ ಹೊರಡಲು ಸಿದ್ಧರಾಗುತ್ತಿದ್ದಾರೆ ಎನ್ನುವ ಮಾತು ಕೇಳಿಬರುತ್ತಿದೆ.

  Sushant ತಂದೆ ಪ್ರಕಾರ ಕೊಲೆ , Police report ಪ್ರಕಾರ ಆತ್ಮಹತ್ಯೆ | Filmibeat Kannada

  ಅಂದುಕೊಂಡಂತೆ ಆಗಿದ್ದರೆ ಸಿನಿಮಾ ಈಗಾಗಲೆ ಚಿತ್ರೀಕರಣ ಮುಗಿಸಿ ಪೋಸ್ಟ್ ಪ್ರೊಡಕ್ಷನ್ ಕೆಲಸ ಜೋರಾಗಿ ನಡೆಯಬೇಕಿತ್ತು. ಆದರೆ ಕೊರೊನಾ ಹಾವಳಿಯ ಪರಿಣಾಮ ಸಿನಿಮಾ ಲೆಕ್ಕಾಚಾರಗಳೆಲ್ಲವೂ ತಲೆಕೆಳಗಾಗಿದೆ.

  ಅಂದ್ಹಾಗೆ ಕೆಜಿಎಫ್-2 2020 ಅಕ್ಟೋಬರ್ 23ಕ್ಕೆ ರಿಲೀಸ್ ರಿಲೀಸ್ ಮಾಡುವುದಾಗಿ ಅನೌನ್ಸ್ ಮಾಡಿತ್ತು. ಕನ್ನಡ ಸಿನಿಪ್ರಿಯರು ಮಾತ್ರವಲ್ಲದೆ ಇಡೀ ಭಾರತ ಅಕ್ಟೋಬರ್ 23ಕ್ಕಾಗಿ ಕಾದುಕುಳಿತಿತ್ತು. ಆದರೀಗ ಕೆಜಿಎಫ್ ಅಂದುಕೊಂಡ ದಿನಕ್ಕೆ ಬಿಡುಗಡೆಯಾಗುವುದು ಅನುಮಾನ ಎಂದು ಹೇಳಲಾಗುತ್ತಿದೆ.

  ಈಗಾಗಲೆ ಸಾಕಷ್ಟು ದೊಡ್ಡ ದೊಡ್ಡ ಸಿನಿಮಾಗಳ ರಿಲೀಸ್ ಮುಂದಕ್ಕೆ ಹೋಗಿವೆ. ಕೆಜಿಎಫ್ ಸಹ ಮುಂದಿನ ವರ್ಷ ತೆರೆಗೆ ಬರಲಿದೆ ಎನ್ನುವ ಮಾತು ಕೇಳಿಬರುತ್ತಿದೆ. ಬಹುನಿರೀಕ್ಷೆಯ ಕೆಜಿಎಫ್ 2021 ಸಂಕ್ರಾಂತಿಗೆ ರಿಲೀಸ್ ಆಗಲಿದೆಯಂತೆ. ಸಂಕ್ರಾಂತಿ ರಿಲೀಸ್ ಗೆ ಸಿನಿಮಾತಂಡ ಪ್ಲಾನ್ ಮಾಡುತ್ತಿದೆಯಂತೆ. ಆದರೆ ಈ ಬಗ್ಗೆ ಸಿನಿಮಾತಂಡ ಯಾವುದೆ ಅಧಿಕೃತ ಮಾಹಿತಿ ಬಹಿರಂಗಪಡಿಸಿಲ್ಲ.

  ಇತ್ತೀಚಿಗಷ್ಟೆ -2 ಸಿನಿಮಾದಿಂದ ಅಧೀರ ಲುಕ್ ರಿಲೀಸ್ ಆಗಿದೆ. ಭಯಾನಕ ಅಧೀರನನ್ನು ನೋಡಿ ಅಭಿಮಾನಿಗಳು ತಲೆಕೆಸಿಕೊಂಡಿದ್ದಾರೆ. ಸಿನಿಮಾದಲ್ಲಿ ಸಂಜಯ್ ದತ್ ಆರ್ಭಟ ಹೇಗಿರಲಿದೆ ಎನ್ನುವ ಕುತೂಹಲ ಮತ್ತಷ್ಟು ಹೆಚ್ಚಾಗಿದೆ. ಕೆಜಿಎಫ್ ಮೊದಲ ಭಾಗಕ್ಕಿಂತ ಎರಡನೇ ಭಾಗ ಮತ್ತಷ್ಟು ರೋಚಕವಾಗಿರಲಿದೆಯಂತೆ. ಹಾಗಾಗಿ ಕೆಜಿಎಫ್-2ಗಾಗಿ ಎಲ್ಲರೂ ಕುತೂಹಲದಿಂದ ಕಾಯುತ್ತಿದ್ದಾರೆ.

  English summary
  KGF-2 makers planning to Sankranthi 2021 new release date. Previously announced that the KGF-2 film will hit the screen on October 23, 2020.

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X